ಹಳ್ಳಿಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಜನರ ಭಾವನೆಗಳನ್ನು ಹತ್ತಿಕ್ಕಿ ಸಿಎಂ ಗ್ರಾಮ ವಾಸ್ತವ್ಯ ಮಾಡುತ್ತಿರುವುದು ಪ್ರಜಾಪ್ರಭುತ್ವ ವಿರೋಧಿ ಮತ್ತು ಜನ ವಿರೋಧಿ ಕ್ರಮ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಗ್ರಾಮ ವಾಸ್ತವ್ಯ ಪ್ರಚಾರದ ಗಿಮಿಕ್ ಅಲ್ಲ. ಅಂತಃಕರಣ, ಮಾನವೀಯತೆ, ತಾಯಿ ಹೃದಯದಿಂದ ಸಮಸ್ಯೆ ಬಗೆಹರಿಸುವ ಇಚ್ಛಾಶಕ್ತಿ ಇದ್ದಲ್ಲಿ ಮಾತ್ರ ಗ್ರಾಮ ವಾಸ್ತವ್ಯ ಸಾಧ್ಯ ಎಂದು ಸಿಎಂ ಹೇಳಿದ್ದಾರೆ.
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಗ್ರಾಮವಾಸ್ತವ್ಯವನ್ನು ಕಟುವಾಗಿ ಟೀಕಿಸಿರುವ ಕರ್ನಾಟಕ ಬಿಜೆಪಿ 'ಗ್ರಾಮವಾಸ್ತವ್ಯ-ಶೂನ್ಯ ಸಾಧನೆ' ಎಂಬ ಪುಸ್ತಕವನ್ನು ಸೋಮವಾರ ಬಿಡುಗಡೆ ಮಾಡಿತು.
ಗ್ರಾಮ ವಾಸ್ತವ್ಯ ಮಾಡಲು ಮಾನವೀಯ ಕಳಕಳಿ, ನೈಜ ಅಂತಃಕರಣ ಇರಬೇಕು. ಗ್ರಾಮ ವಾಸ್ತವ್ಯ ಘೋಷಣೆಗೆ ಜನರಿಂದ ದೊರೆತ ಸ್ಪಂದನೆಯೇ ಬಿಜೆಪಿ ನಾಯಕರಿಗೆ ಉತ್ತರ ಎಂದು ಸಿಎಂ ತಿರುಗೇಟು ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.