ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಆರೋಪಿಯಾಗಿದ್ದು, ಸುದೀರ್ಘ ತನಿಖೆಯ ನಂತರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ನಿಯಮದ ಪ್ರಕಾರ, ಯಾವುದೇ ಜನಪ್ರತಿನಿಧಿಗೆ 2 ವರ್ಷ ಅಥವಾ ಅದಕ್ಕಿಂತ ಹೆಚ್ಚು ಅವಧಿಯ ಶಿಕ್ಷೆಯಾದಲ್ಲಿ ತಕ್ಷಣವೇ ತಮ್ಮ ಸ್ಥಾನಕ್ಕೆ ಅನರ್ಹರಾಗುತ್ತಾರೆ.
Vinay Kulkarni Darshan in Jail :ಅಭಿಮಾನಿಗಳಿಂದ ಪ್ರೀತಿಯಿಂದ 'ಡಿಬಾಸ್' ಎಂದೇ ಕರೆಯಿಸಿಕೊಳ್ಳುವ ನಟ ದರ್ಶನ್ ತೂಗುದೀಪ ಅವರು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿ ಸರಿಯಾಗಿ ಒಂದು ವರ್ಷ ಕಳೆಯುವಷ್ಟರಲ್ಲೇ, ಅವರ ಆಪ್ತ ಸ್ನೇಹಿತ ಹಾಗೂ ಧಾರವಾಡದ ಪ್ರಭಾವಿ ರಾಜಕಾರಣಿ ವಿನಯ್ ಕುಲಕರ್ಣಿ ಕೂಡ ಅದೇ ಜೈಲಿನ ಕತ್ತಲ ಕೋಣೆಯನ್ನು ಸೇರಿರುವುದು ರಾಜ್ಯ ರಾಜಕಾರಣ ಮತ್ತು ಚಿತ್ರರಂಗದಲ್ಲಿ ಸಂಚಲನ ಮೂಡಿಸಿದೆ. ಇದು ಕೇವಲ ಕಾಕತಾಳಿಯವೋ ಅಥವಾ ಕರ್ಮದ ಫಲವೋ ಎಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ಜೋರಾಗಿ ನಡೆಯುತ್ತಿದೆ.
ಧಾರವಾಡದ ಬಿಜೆಪಿ ನಾಯಕ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐ ತನಿಖೆಯು ಮಹತ್ವದ ತಿರುವು ತಂದುಕೊಟ್ಟಿದೆ. ಈ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪಿನ ನಂತರ, ಸಿಬಿಐ ಪತ್ತೆಹಚ್ಚಿದ ಹಲವು ಅಂಶಗಳು ಇದೀಗ ಬೆಳಕಿಗೆ ಬಂದಿವೆ.
ಇನ್ನು ಯಾವುದೇ ಜನಪ್ರತಿನಿಧಿಗಳ ವಿರುದ್ಧ 2 ವರ್ಷಕ್ಕಿಂತ ಹೆಚ್ಚಿನ ವರ್ಷ ಜೈಲು ಶಿಕ್ಷೆ ಪ್ರಕಟವಾದರೆ ತಕ್ಷಣ ಅವರ ಶಾಸಕ ಸ್ಥಾನ ರದ್ದಾಗುತ್ತದೆ.ಸದ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
Vinay Kulkarni verdict : ಧಾರವಾಡದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 19 ಆರೋಪಿಗಳು ಅಪರಾಧಿಗಳು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯತೀರ್ಪು ನೀಡಿತ್ತು. ಇಂದು ನ್ಯಾಯಾಲಯವು ಶಿಕ್ಷೆ ಪ್ರಮಾಣ ಪ್ರಕಟಿಸಿದೆ.
ಧಾರವಾಡದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 19 ಆರೋಪಿಗಳು ಅಪರಾಧಿಗಳು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿನ್ನೆ ತೀರ್ಪು ನೀಡಿತ್ತು.
Yogesh Gowda murder case: ಕೊಲೆಗಾರ ವಿನಯ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಆಗಬೇಕು ಎಂದು ಮೃತ ಯೋಗೀಶ್ ಗೌಡ ಸಹೋದರಿ ಅಕ್ಕಮಹಾದೇವಿ ಹೇಳಿದರು.
Vinay Kulkarni case : ಯೋಗೀಶ್ ಗೌಡ ಹತ್ಯೆ ಪ್ರಕರಣ ಕುರಿತು ಜನಪ್ರತಿನಿಧಿಗಳ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. ಇದರ ಬೆನ್ನಲ್ಲೆ ಶಾಸಕನಿಗೆ ಯಾವ ಶಿಕ್ಷೆ ಎದುರಾಗಬಹುದು, ಯಾವ ಸೆಕ್ಷನ್ ಅಡಿಯಲ್ಲಿ ಶಿಕ್ಷೆ ನೀಡಲಾಗುತ್ತದೆ.. ಎಂಬ ಚರ್ಚೆ ಜೋರಾಗಿ ನಡೆಯುತ್ತಿದೆ.. ಈ ಕುರಿತು ಸ್ಪಷ್ಟ ಮಾಹಿತಿ ಇಲ್ಲಿದೆ..
ಧಾರವಾಡದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ ಅವರ ಭೀಕರ ಕೊಲೆ ಪ್ರಕರಣದ ಸುದೀರ್ಘ ಕಾನೂನು ಹೋರಾಟವು ಈಗ ಅಂತಿಮ ಘಟ್ಟಕ್ಕೆ ಬಂದು ತಲುಪಿದ್ದು, ಇಂದು ಇಡೀ ರಾಜ್ಯದ ಕುತೂಹಲ ಕೆರಳಿಸಿರುವ ತೀರ್ಪು ಹೊರಬೀಳಲಿದೆ.
ಸರ್ಕಾರಿ ಅಧಿಕಾರಿಯಾಗಿದ್ದು, ಕಾನೂನು ಬಾಹೀರ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ರಕ್ಷಣೆ ಮಾಡುವುದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ತಿಳಿಸಿರುವ ಹೈಕೋರ್ಟ್, ಧಾರವಾಡ ಜಿಲ್ಲಾ ಪಂಚಾಯತ್ ಅಧ್ಯಕ್ಷ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ಸೋಮಶೇಖರ್ ನ್ಯಾಮಗೌಡರ್ ವಿರುದ್ಧದ ಪ್ರಕರಣ ರದ್ದುಗೊಳಿಸಲು ನಿರಾಕರಿಸಿದೆ.
2AReservation For Panchamasali Community: ಕಾಟಾಚಾರಕ್ಕಾಗಿ ಮೀಸಲಾತಿ ಕೊಡಬಾರದು. ಬಿಜೆಪಿಗೆ ಮೀಸಲಾತಿ ಕೊಡುವುದು ಬೇಕಾಗಿರಲಿಲ್ಲ. ಅದಕ್ಕೇ ನ್ಯಾಯಾಲಯಕ್ಕೆ ಹೋದರೆ ಬಿದ್ದೋಗುವ ರೀತಿಯಲ್ಲಿ ಕಾಟಾಚಾರಕ್ಕೆ ಕೊಟ್ಟರು. ಇದರಿಂದ ಗೊಂದಲ ಸೃಷ್ಟಿಯಾಗಿದೆ. ಸಂವಿಧಾನ ತಜ್ಞರ ಜೊತೆಗೆ ಚರ್ಚಿಸಿ ಗೊಂದಲ ಬಗೆಹರಿಸಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿರು.
Hubballi Dharwad mayoral elections: ಹುಬ್ಬಳ್ಳಿ ಧಾರವಾಡ ಪಾಲಿಕೆ ಮೇಯರ್ ಚುನಾವಣೆ ಹಿನ್ನೆಲೆ ಧಾರವಾಡ ಪ್ರವೇಶಿಸಲು ಅವಕಾಶ ನೀಡುವಂತೆ ಕೋರಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದರು.
ವಿನಯ್ ಕುಲಕರ್ಣಿಯಿಂದ ಮತ್ತೊಂದು ಅರ್ಜಿ
ಬಿಜೆಪಿಯವರು ಯಾರು ಮನೆಯಲ್ಲಿ ಒಂದು ಆಕಳು ಕಟ್ಟಿಲ್ಲ ಆದರೆ ಬರಿ ಮಾತು ಆಡುತ್ತಾರೆ ಅಷ್ಟೇ ಎಂದು ಶಾಸಕ ವಿನಯ್ ಕುಲಕರ್ಣಿ ವಾಗ್ದಾಳಿ ನಡೆಸಿದ್ದಾರೆ.
ಗೋ ಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿ ವಿಚಾರವಾಗಿ ಶಾಸಕ ವಿನಯ್ ಕುಲಕರ್ಣಿ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿಯವರು ಯಾರು ಮನೆಯಲ್ಲಿ ಒಂದು ಆಕಳು ಕಟ್ಟಿಲ್ಲ. ಮಾತು ಆಡುತ್ತಾರೆ ಅಷ್ಟೇ. ಪ್ಲ್ಯಾಸ್ಟಿಕ್ ಆಕಳನ್ನು ಪೂಜೆ ಮಾಡುತ್ತಾರೆ. ಮಾತಾಡಿ ಜನರಿಗೆ ದಾರಿ ತಪ್ಪಿಸುವುದು ಬೇರೆ. ವಾಸ್ತವವಾಗಿ ಅನುಭವಿಸುವುದು ಬೇರೆ ಎಂದ ಗೋ ಹತ್ಯೆ ಕಾಯ್ದೆ ತಿದ್ದುಪಡಿಯನ್ನು ಸಮರ್ಥಿಸಿಕೊಂಡರು.
ಹೌದು! ಒಂದು ಬಾರಿ ಮಣೆ ಹಾಕಿದವರಿಗೆ ಸತತ ಎರಡನೇ ಬಾರಿಯೂ ಧಾರವಾಡ ಗ್ರಾಮೀಣ ಕ್ಷೇತ್ರದ ಮತದಾರ ಮಣೆ ಹಾಕುವುದಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.