ಕಳೆದ ವರ್ಷ ನಡೆದ ಐಸಿಸಿ ವಿಶ್ವಕಪ್( World Cup 2019) ನಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯವನ್ನು ಭಾರತ ಉದ್ದೇಶಪೂರ್ವಕವಾಗಿ ಸೋತಿದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಪಾಕಿಸ್ತಾನದ ಮಾಜಿ ಆಲ್ರೌಂಡರ್ ಅಬ್ದುಲ್ ರಜಾಕ್ (Abdul Razzaq) ಹೇಳಿದ್ದಾರೆ.
ವಿಶ್ವಕಪ್ ನಲ್ಲಿ ಸೆಮಿಫೈನಲ್ ನಲ್ಲಿ ಭಾರತ ತಂಡ ಸೋತ ನಂತರ ವೆಸ್ಟ್ ಇಂಡೀಸ್ ಸರಣಿಗೂ ತಂಡದ ನಾಯಕನಾಗಿ ವಿರಾಟ್ ಕೊಹ್ಲಿ ಅವರನ್ನು ಮುಂದುವರೆಸಿದ್ದರ ಬಗ್ಗೆ ಭಾರತದ ದಂತಕಥೆ ಆಟಗಾರ ಸುನಿಲ್ ಗವಾಸ್ಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಶ್ವಕಪ್ 2019 ಇದೀಗ ಅಂತಿಮ ಹಂತವನ್ನು ತಲುಪಿದ್ದು ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಫೈನಲ್ಸ್ ಪಂದ್ಯ ಇಂಗ್ಲೆಂಡ್ ನ ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದೆ.
ವಿಶ್ವ ಕಪ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋತರೂ ಸಹ ಪ್ರತಿಯೊಂದು ಪಂದ್ಯದಲ್ಲಿಯೂ ಮಾಡಿದ ಸಾಧನೆಯಿಂದಾಗಿ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಇದೇ ಸಂದರ್ಭದಲ್ಲಿ ಅಜ್ಜಿಯೊಬ್ಬರು ಬುಮ್ರಾ ಬೌಲಿಂಗ್ ಶೈಲಿ ಅನುಕರಣೆ ಮಾಡಿ ಎಲ್ಲರ ಗಮನಸೆಳೆದಿದ್ದಾರೆ.
ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮ್ಯಾಂಚೆಸ್ಟರ್ನ ಓಲ್ಡ್ ಟ್ರಾಫರ್ಡ್ ಕ್ರೀಡಾಂಗಣದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವಕಪ್ 2019 ರ ಮೊದಲ ಸೆಮಿಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ.
ವಿಶ್ವಕಪ್ 12 ಆವೃತ್ತಿಯಲ್ಲಿ ಮ್ಯಾಂಚೆಸ್ಟರ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಮೊದಲ ಸೆಮಿಫೈನಲ್ ಪಂದ್ಯವನ್ನು ಮಂಗಳವಾರ ಆಡಲು ಭಾರತ ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಜನರು ಸಂಗಮದಲ್ಲಿ ಪೂಜೆ ಮಾಡುವ ಮೂಲಕ ಹಾಗೂ ದರ್ಗಾದಲ್ಲಿ ಚಾದರ್ ಅರ್ಪಿಸುವ ಮೂಲಕ ಭಾರತ ತಂಡದ ಗೆಲುವಿಗಾಗಿ ಪ್ರಾರ್ಥನೆ ಸಲ್ಲಿಸಿದರು.
ಟಾಸ್ ಬಗ್ಗೆ ನಮಗೆ ಚಿಂತೆಯಿಲ್ಲ. ಟಾಸ್ ಗೆಲ್ಲಲಿ ಅಥವಾ ಸೋಲಲಿ ನಾವು ಆಟ ಆಡಲು ಸಿದ್ಧರಿದ್ದೇವೆ. ಆದರೆ ಸೆಮಿಫೈನಲ್ಸ್ ಪಂದ್ಯದ ಟಾಸ್ ಸ್ವಲ್ಪ ವಿಭಿನ್ನವಾಗಿರಲಿದೆ ಎಂದು ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.
ಎಲ್ಲರ ಗಮನ ವಿಶ್ವಕಪ್ ಮೇಲೆ ಇರುವುದರಿಂದ ಇದನ್ನು ನಾನು ತಯಾರಿಸಿದೆ. ಭಾರತ ವಿಶ್ವಕಪ್ ಗೆದ್ದೇ ಗೆಲ್ಲುತ್ತದೆ ಎಂಬ ಭರವಸೆಯಿದೆ ಎಂದು ಟ್ರೋಫಿಯ ಮಿನಿಯೇಚರ್ ಸಿದ್ಧಪಡಿಸಿರುವ ನಾಗರಾಜ್ ರೇವಂಕರ್ ತಿಳಿಸಿದ್ದಾರೆ.
ನೆಟ್ ಪ್ರಾಕ್ಟೀಸ್ ವೇಳೆ ಜಸ್ಪ್ರೀತ್ ಬುಮ್ರಾ ಹಾಕಿದ ಯಾರ್ಕರ್ ನಿಂದ ವಿಜಯ್ ಕಾಲಿಗೆ ಪೆಟ್ಟಾಗಿದ್ದು, ಸದ್ಯಕ್ಕೆ ಚೇತರಿಸಿಕೊಳ್ಳುವ ಸಾಧ್ಯತೆ ಕಡಿಮೆ ಇರುವುದರಿಂದ ಅವರನ್ನು ತವರಿಗೆ ಕಳಿಸುವುದಾಗಿ ಬಿಸಿಸಿಐ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಕ್ರಿಕೆಟ್ ವಿಶ್ವಕಪ್ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಆಡುವಾಗ ಶಿಖರ್ ಧವನ್ ಅವರ ಹೆಬ್ಬರಳಿಗೆ ಚೆಂಡು ಅಪ್ಪಳಿಸಿ, ಮೂಳೆ ಮುರಿದಿದೆ ಎಂದು ವೈದ್ಯರು ಮಂಗಳವಾರ ದೃಢೀಕರಿಸಿದ್ದು, ಮೂರು ವಾರಗಳ ವಿಶ್ರಾಂತಿಗೆ ಸಲಹೆ ನೀಡಿದ್ದಾರೆ.
ಮಾಜಿ ಕ್ರಿಕೆಟ್ ಆಟಗಾರರಾದ ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ಬಳಿಕ ವಿಶ್ವಕಪ್ ಪಂದ್ಯದಲ್ಲಿ ತ್ರಿಶತಕ ಬಾರಿಸಿದ ಮೂರನೇ ಭಾರತೀಯ ಬ್ಯಾಟ್ಸ್ ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.