Team India: ಇದೀಗ ಟೀಂ ಇಂಡಿಯಾ ಬ್ಯಾಟ್ಸ್ ಮನ್ ವೃತ್ತಿ ಜೀವನ ಅಂತ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಟೀಂ ಇಂಡಿಯಾ ಬ್ಯಾಟ್ಸ್ ಮನ್ ಚೇತೇಶ್ವರ ಪೂಜಾರ ಅವರ ರಕ್ಷಣಾತ್ಮಕ ಬ್ಯಾಟಿಂಗ್ ಬಗ್ಗೆ ಪ್ರಶ್ನೆಗಳು ಎದ್ದಿವೆ. ಕಳೆದ 10 ಟೆಸ್ಟ್ ಇನ್ನಿಂಗ್ಸ್ ಗಳಲ್ಲಿ ಚೇತೇಶ್ವರ ಪೂಜಾರ ಬ್ಯಾಟ್ ನಲ್ಲಿ ಒಮ್ಮೆಯೂ 59 ರನ್ಗಳಿಗಿಂತ ಹೆಚ್ಚು ರನ್ ಗಳಿಸಿಲ್ಲ, ಇದರಿಂದಾಗಿ ಟೀಂ ಇಂಡಿಯಾ ಸಂಕಷ್ಟವನ್ನು ಎದುರಿಸಿದೆ.
WTC Final 2023, Weather Update: ಜೂನ್ 7 ರಿಂದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ WTC ಫೈನಲ್ ಪಂದ್ಯದ ಮೇಲೆ ಮಳೆಯ ನೆರಳು ಸುಳಿದಾಡುತ್ತಿದೆ. ಈ ಮೆಗಾ ಪಂದ್ಯ ಜೂನ್ 7 ರಿಂದ 11 ರವರೆಗೆ ಲಂಡನ್ ನಲ್ಲಿ ನಡೆಯಲಿದೆ. ಈ ಮಧ್ಯೆ ಹವಾಮಾನವನ್ನು ಗಮನಿಸಿದರೆ, ಮೊದಲ, ಎರಡನೇ ಮತ್ತು ಮೂರನೇ ದಿನ ಮಳೆಯಾಗುವ ಸಾಧ್ಯತೆಯಿಲ್ಲ.
India vs Australia, WTC Final 2023: ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ ಇಶಾನ್ ಕಿಶನ್ ಎಕ್ಸ್ ಫ್ಯಾಕ್ಟರ್ ಎಂದು ಸಾಬೀತುಪಡಿಸಬಹುದು ಎಂದು ಭಾರತ ತಂಡದ ಮಾಜಿ ಆಯ್ಕೆಗಾರ ಸರಣ್ದೀಪ್ ಸಿಂಗ್ ಹೇಳಿದ್ದಾರೆ. ರಸ್ತೆ ಅಪಘಾತದಲ್ಲಿ ರಿಷಬ್ ಪಂತ್ ಗಾಯಗೊಂಡಿರುವ ಕಾರಣ ಕೆಎಸ್ ಭರತ್ ಮತ್ತು ಇಶಾನ್ ಕಿಶನ್ ಅವರನ್ನು ತಂಡದಲ್ಲಿ ಇರಿಸಲಾಗಿದೆ.
WTC Final 2023: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನ ಅಂತಿಮ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಮೇಲುಗೈ ಸಾಧಿಸಲಿದೆ. ಏಕೆಂದರೆ ಟೀಂ ಇಂಡಿಯಾದಲ್ಲಿರುವ ಆ 5 ಆಟಗಾರರು ಮೈದಾನದಲ್ಲಿ ಬೆಂಕಿ ಬಿರುಗಾಳಿಯಂತೆ ಅಬ್ಬರಿಸಲಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನ ಟ್ರೋಫಿಯನ್ನು ಏಕಾಂಗಿಯಾಗಿ ಭಾರತಕ್ಕೆ ಗೆದ್ದು ಕೊಡುವ ಆ 5 ಭಯಾನಕ ಕ್ರಿಕೆಟಿಗರ ಬಗ್ಗೆ ತಿಳಿಯೋಣ.
PAK Cricketer Statement on Kohli: ವಿರಾಟ್ ಕೊಹ್ಲಿ ಅಪಾಯಕಾರಿ ಫಾರ್ಮ್ನಲ್ಲಿದ್ದಾರೆ. ಐಪಿಎಲ್ 2023 ರಲ್ಲಿ ವಿರಾಟ್ ಕೊಹ್ಲಿ ತುಂಬಾ ಮಾರಕವಾಗಿ ಬ್ಯಾಟ್ ಮಾಡಿದ್ದರು. ಅವರು ಆಡಿದ 14 ಪಂದ್ಯಗಳಲ್ಲಿ, 639 ರನ್ ಗಳಿಸಿದ್ದಾರೆ. ಇದರಲ್ಲಿ 6 ಅರ್ಧ ಶತಕ ಮತ್ತು ಎರಡು ಶತಕಗಳು ಸೇರಿವೆ. ಕೊಹ್ಲಿ ಈ ಸೀಸನ್ ನಲ್ಲಿ 53.25 ಸರಾಸರಿಯಲ್ಲಿ ಮತ್ತು 139.82 ಸ್ಟ್ರೈಕ್ ರೇಟ್ ನಲ್ಲಿ ರನ್ ಗಳಿಸಿದರು.
World Test Championship : ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಗೆದ್ದ ತಂಡಕ್ಕೆ ಐಸಿಸಿ ಭಾರಿ ಮೊತ್ತದ ಬಹುಮಾನ ಘೋಷಣೆ ಮಾಡಿದೆ. ಈ ಆವೃತ್ತಿಗಾಗಿ ಸುಮಾರು 29.75 ಕೋಟಿ ರೂಪಾಯಿ ಮೀಸಲಿಟ್ಟಿದೆ. ಜೂನ್ 7 ರಿಂದ 11 ರವರೆಗೆ ಇಂಗ್ಲೆಂಡ್ನ ಓವಲ್ನಲ್ಲಿ ನಡೆಯಲಿದೆ.
World Test Championship final 2023: ಐಪಿಎಲ್ 2023 ರಲ್ಲಿ ತಂಡದ 2 ಆಟಗಾರರು ತಮ್ಮ ಮಾರಕ ಫಾರ್ಮ್ ನೊಂದಿಗೆ ಮ್ಯಾನೇಜ್ ಮೆಂಟ್ನ ಒತ್ತಡವನ್ನು ಕಡಿಮೆ ಮಾಡಿದ್ದಾರೆ. ಈ ಇಬ್ಬರೂ ಆಟಗಾರರು WTC ಫೈನಲ್ ನಲ್ಲಿ ಭಾರತ ತಂಡದ ಭಾಗವಾಗಿದ್ದು, ಪ್ರಮುಖ ಆಟಗಾರರಲ್ಲಿ ಒಬ್ಬರಾಗಿದ್ದಾರೆ.
WTC ಫೈನಲ್ 2023: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಅಂತಿಮ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಆಘಾತಗಳು ಹೆಚ್ಚುತ್ತಿದೆ. ಐಪಿಎಲ್ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ನಾಯಕ ಹಾಗೂ ಟೀಂ ಇಂಡಿಯಾ ತಂಡದ ಭಾಗವಾಗಿರುವ ಕೆ.ಎಲ್.ರಾಹುಲ್ ಗಾಯದ ಸಮಸ್ಯೆಯಿಂದ ಎರಡೂ ಟೂರ್ನಿಗಳಿಂದ ಹೊರಗುಳಿದಿದ್ದಾರೆ. ಈಗ ಅವರ ಸ್ಥಾನಕ್ಕೆ ಬದಲಿ ಆಟಗಾರನನ್ನು ತಂಡಕ್ಕೆ ಸೇರಿಸಲು ಭಾರೀ ಬೇಡಿಕೆ ಬಂದಿದೆ.
Indian Players Injured-WTC Final 2023: ಲಂಡನ್ ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಯಾವ ತಂಡ ಗೆದ್ದರೂ ಚೊಚ್ಚಲ ಬಾರಿಗೆ ಟ್ರೋಫಿ ಗೆಲ್ಲಲಿದೆ. ಭಾರತ ಈ ಹಿಂದೆಯೂ ಫೈನಲ್ ತಲುಪಿತ್ತು. ಆದರೆ ನಂತರ ನ್ಯೂಜಿಲೆಂಡ್ ಗೆದ್ದಿತ್ತು. ಇದೀಗ ಟೀಂ ಇಂಡಿಯಾ ದೊಡ್ಡ ಹಿನ್ನಡೆ ಎದುರಿಸುತ್ತಿದೆ.
India vs Australia: ಪ್ರಸಕ್ತ ಐಪಿಎಲ್ ನಲ್ಲಿ ಸತತ ಸೋಲು ಕಾಣುತ್ತಿರುವ ಆಲ್ ರೌಂಡರ್ ಗೆ ತಂಡದಲ್ಲಿ ಸ್ಥಾನ ಲಭಿಸಿದೆ. ಡಬ್ಲ್ಯುಟಿಸಿ ಅಂತಿಮ ತಂಡದಲ್ಲಿ ಸ್ಥಾನ ಪಡೆದಿರುವ ಆಲ್ ರೌಂಡರ್ ಬೇರೆ ಯಾರು ಅಲ್ಲ. ಅವೆರೇ ಶಾರ್ದೂಲ್ ಠಾಕೂರ್. ಈ ಬಾರಿಯ ಐಪಿಎಲ್ ನಲ್ಲಿ ಇದುವರೆಗೆ ಕಳಪೆ ಪ್ರದರ್ಶನ ತೋರಿದ್ದಾರೆ.
Sunil Gavaskar statement on Rohit Sharma: ಲೆಜೆಂಡರಿ ಬ್ಯಾಟ್ಸ್ಮನ್ ಸುನಿಲ್ ಗವಾಸ್ಕರ್ ಅವರು ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಅವರಿಗೆ ಐಪಿಎಲ್ 2023 ರ ಮಧ್ಯದಲ್ಲಿ ವಿರಾಮ ತೆಗೆದುಕೊಳ್ಳುವಂತೆ ಪ್ರಮುಖ ಸಲಹೆಯನ್ನು ನೀಡಿದ್ದಾರೆ.
WTC Final Team India Squad: ತಂಡವನ್ನು ಅಂತಿಮಗೊಳಿಸಲು ಸೋಮವಾರ ಸಂಜೆ ನಡೆದ ಸಭೆಯಲ್ಲಿ ಬಿಸಿಸಿಐನ ಐವರು ಸದಸ್ಯರ ಆಯ್ಕೆ ಸಮಿತಿ ಮತ್ತು ಕಾರ್ಯದರ್ಶಿ ಜಯ್ ಶಾ, ನಾಯಕ ರೋಹಿತ್ ಶರ್ಮಾ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಭಾಗವಹಿಸಿದ್ದರು. ಬೆನ್ನಿನ ಗಾಯದಿಂದಾಗಿ ಶ್ರೇಯಸ್ ಅಯ್ಯರ್ ಹೊರಗುಳಿದ ಕಾರಣ, 15 ತಿಂಗಳ ನಂತರ ರಹಾನೆ ತಂಡಕ್ಕೆ ಮರಳುವುದು ಖಚಿತವಾಗಿತ್ತು.
India Squad WTC Final: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್’ನ (WTC) ಫೈನಲ್ಗಾಗಿ ಭಾರತದ 15 ಸದಸ್ಯರ ತಂಡದಲ್ಲಿ, ಗಾಯಗೊಂಡಿರುವ ಶ್ರೇಯಸ್ ಅಯ್ಯರ್ ಬದಲಿಗೆ ಅನುಭವಿ ಬ್ಯಾಟ್ಸ್ಮನ್ ಅಜಿಂಕ್ಯ ರಹಾನೆ ಮರಳಿದ್ದಾರೆ. ಅಜಿಂಕ್ಯ ರಹಾನೆ ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನು ಜನವರಿ 2022 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಆಡಿದ್ದರು.
WTC Final, India vs Australia: 29 ವರ್ಷದ ಬುಮ್ರಾ ಬಹಳ ದಿನಗಳಿಂದ ಫೀಲ್ಡ್’ನಿಂದ ಹೊರಗುಳಿದಿದ್ದಾರೆ. ಬೆನ್ನಿನ ಗಾಯದಿಂದ ತೊಂದರೆಗೀಡಾಗಿರುವ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಬುಮ್ರಾ ಕಳೆದ ವರ್ಷ ಹೈದರಾಬಾದ್’ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಕೊನೆಯ ಟಿ20 ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿದ್ದರು. ಇದಾದ ಬಳಿಕ ಮತ್ತೆ ಮೈದಾನಕ್ಕೆ ಇಳಿಯಲು ಸಾಧ್ಯವಾಗಲಿಲ್ಲ.
WTC Final 2023 IND vs AUS: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ 2023 ರ ಅಂತಿಮ ಪಂದ್ಯದ ನಂತರ ಆಸ್ಟ್ರೇಲಿಯಾ ಕ್ರಿಕೆಟ್ ತಂಡವು ಇಂಗ್ಲೆಂಡ್ ವಿರುದ್ಧ ಆಶಸ್ ಸರಣಿಯನ್ನು ಆಡಬೇಕಾಗಿದೆ. ಈ ಸಂದರ್ಭದಲ್ಲಿ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್’ಗೆ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ.
ICC WTC Final 2023: ಈ ವರ್ಷ ಜೂನ್ 7 ರಿಂದ ಜೂನ್ 11 ರವರೆಗೆ, ಭಾರತವು ಆಸ್ಟ್ರೇಲಿಯಾ ವಿರುದ್ಧ ಲಂಡನ್ನ ಓವಲ್ ಮೈದಾನದಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯವನ್ನು ಆಡಬೇಕಾಗಿದೆ. ಶ್ರೇಯಸ್ ಅಯ್ಯರ್ ಬೆನ್ನಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಇದರಿಂದಾಗಿ ಅವರು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಅಂತಿಮ ಪಂದ್ಯವನ್ನು ಆಡಲು ಸಾಧ್ಯವಾಗುವುದಿಲ್ಲ
ಭಾರತ ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಮತ್ತು ಏಕದಿನ ಸರಣಿ ಆಡಿದೆ. ಈ ವೇಳೆ ಪ್ಲೇಯಿಂಗ್-11ರ ಭಾಗವಾಗಲು ಸಾಧ್ಯವಾಗದ ಆಟಗಾರನೊಬ್ಬ ತಂಡದಲ್ಲಿದ್ದ. ಅಷ್ಟೇ ಅಲ್ಲ ಇದುವರೆಗೆ ಕೇವಲ 2 ಫಾರ್ಮೆಟ್ಗಳಲ್ಲಿ ಆಟ ಆಡಿರುವ ಈ ಆಟಗಾರ ಟೆಸ್ಟ್ಗೆ ಪದಾರ್ಪಣೆ ಮಾಡಲೂ ಸಾಧ್ಯವಾಗಲಿಲ್ಲ. ಈ ಆಟಗಾರ ಅನ್ಯಾಯಕ್ಕೆ ಬಲಿಯಾಗುತ್ತಿದ್ದಾರಾ? ಅನ್ನೋ ಪ್ರಶ್ನೆ ಎದ್ದಿದೆ.
India Squad WTC Final: ಡ್ಯಾಶಿಂಗ್ ಬ್ಯಾಟ್ಸ್ಮನ್ ಶ್ರೇಯಸ್ ಅಯ್ಯರ್ ಅವರ ಬೆನ್ನಿನ ಗಾಯವು ಟೀಮ್ ಇಂಡಿಯಾದ ಕಷ್ಟವನ್ನು ಹೆಚ್ಚಿಸಿದೆ. ಶ್ರೇಯಸ್ ಅಯ್ಯರ್ ಇನ್ನೂ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಮತ್ತು ಐಪಿಎಲ್ನಲ್ಲಿ ಆಡಬೇಕಿದೆ. ಒಂದು ವೇಳೆ ಶ್ರೇಯಸ್ ಅಯ್ಯರ್ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್’ನ ಫೈನಲ್ಗೆ ಫಿಟ್ ಆಗದಿದ್ದರೆ, ಕೆಎಲ್ ರಾಹುಲ್ ಪ್ಲೇಯಿಂಗ್ XI ನಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ.
Sunil Gavaskar statement about KL Rahul: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಭಾರತ-ಆಸ್ಟ್ರೇಲಿಯಾ ತಂಡಗಳು ಫೈನಲ್ಗೆ ಲಗ್ಗೆ ಇಟ್ಟಿವೆ. 2023ರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ ಪಂದ್ಯ ಈ ಎರಡು ತಂಡಗಳ ನಡುವೆ ನಡೆಯಲಿದೆ. ಇದೇ ವೇಳೆ ಭಾರತದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ರಾಹುಲ್ ಬಗ್ಗೆ ದೊಡ್ಡ ಮಾತು ಹೇಳಿದ್ದಾರೆ.
IND vs AUS: ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಭಾರತ ತಂಡ 571 ರನ್ ಗಳಿಸಿತ್ತು. ನಾಲ್ಕನೇ ದಿನದ ಮೂರನೇ ಸೆಷನ್ನಲ್ಲಿ ಅವರ ಇನ್ನಿಂಗ್ಸ್ ಕೊನೆಗೊಂಡಿತು. ಇಬ್ಬರು ಬ್ಯಾಟ್ಸ್ಮನ್ಗಳು ಶತಕ ಬಾರಿಸಿದರು. ಆರಂಭಿಕರಾದ ಶುಭ್ಮನ್ ಗಿಲ್ (128) ನಂತರ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಕೂಡ 186 ರನ್ಗಳ ಅದ್ಭುತ ಇನ್ನಿಂಗ್ಸ್ ಆಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.