World Test Championship 2023: ಜೂನ್ 7ರಿಂದ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಂತಿಮ ಪಂದ್ಯಕ್ಕಾಗಿ ಭಾರತೀಯ ಆಟಗಾರರು ಲಂಡನ್‌ಗೆ ತಲುಪಿದ್ದು, ಕಠಿಣ ಅಭ್ಯಾಸದಲ್ಲಿ ತೊಡಗಿದ್ದಾರೆ. ಟೀಂ ಇಂಡಿಯಾದ ಪ್ಲೇಯಿಂಗ್-11 ಬಹುತೇಕ ಫಿಕ್ಸ್ ಆಗಿದೆ. ಯಾವ ಆಟಗಾರ 5ನೇ ಸ್ಥಾನಕ್ಕೆ ಇಳಿಯುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.
ಜೂನ್ 7 ರಿಂದ 11 ರವರೆಗೆ ಓವಲ್‌ನಲ್ಲಿ ನಡೆಯಲಿರುವ ಬಹುನಿರೀಕ್ಷಿತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2023 ಫೈನಲ್‌ಗೆ ಮುಂಚಿತವಾಗಿ ಟೀಮ್ ಇಂಡಿಯಾ ಗುರುವಾರ ಲಂಡನ್‌ನಲ್ಲಿ ತಮ್ಮ ಅಭ್ಯಾಸವನ್ನು ಪ್ರಾರಂಭಿಸಿತು.ಭಾರತ ತಂಡದ ಒಂದು ಭಾಗವು ಈಗಾಗಲೇ ಇಂಗ್ಲೆಂಡ್ ಗೆ ಆಗಮಿಸಿದ್ದು, ಈಗ ವಿರಾಟ್ ಕೊಹ್ಲಿ ಕೂಡ ತಂಡವನ್ನು ಸೇರಿದ್ದಾರೆ.
WTC Final 2023 IND vs AUS: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2023 ರ ಅಂತಿಮ ಪಂದ್ಯದ ನಂತರ ಆಸ್ಟ್ರೇಲಿಯಾ ಕ್ರಿಕೆಟ್ ತಂಡವು ಇಂಗ್ಲೆಂಡ್ ವಿರುದ್ಧ ಆಶಸ್ ಸರಣಿಯನ್ನು ಆಡಬೇಕಾಗಿದೆ. ಈ ಸಂದರ್ಭದಲ್ಲಿ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್’ಗೆ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ.
ICC WTC Final 2023: ಈ ವರ್ಷ ಜೂನ್ 7 ರಿಂದ ಜೂನ್ 11 ರವರೆಗೆ, ಭಾರತವು ಆಸ್ಟ್ರೇಲಿಯಾ ವಿರುದ್ಧ ಲಂಡನ್‌ನ ಓವಲ್ ಮೈದಾನದಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯವನ್ನು ಆಡಬೇಕಾಗಿದೆ. ಶ್ರೇಯಸ್ ಅಯ್ಯರ್ ಬೆನ್ನಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಇದರಿಂದಾಗಿ ಅವರು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಂತಿಮ ಪಂದ್ಯವನ್ನು ಆಡಲು ಸಾಧ್ಯವಾಗುವುದಿಲ್ಲ
World Test Championship Final 2023: ಕೆಟ್ಟ ಹವಾಮಾನದ ಸಂದರ್ಭದಲ್ಲಿ ಅಪೆಕ್ಸ್ ಕ್ರಿಕೆಟ್ ಸಂಸ್ಥೆಯು ದಿನವನ್ನು ನಿಗದಿಪಡಿಸಿದೆ ಎಂದು ಊಹಿಸಲಾಗಿದೆ. ಪಂದ್ಯಾವಳಿಯು 2018-21 ಆವೃತ್ತಿಯ ರೀತಿಯ ರಚನೆಯನ್ನು ಅನುಸರಿಸಲು ತೀರ್ಮಾನಿಸಲಾಗಿದೆ. ಅಷ್ಟೇ ಅಲ್ಲದೆ, ತಂಡಗಳ ನಡುವೆ ಡ್ರಾ ಅಥವಾ ಟೈ ಆದಲ್ಲಿ ಆ ಸಂದರ್ಭದಲ್ಲಿ ಜಂಟಿ ವಿಜೇತರನ್ನು ಘೋಷಿಸುವ ಸಾಧ್ಯತೆ ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.