Pushya Nakshatra: ಲೋಕಸಭೆ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ನಾಮಪತ್ರ ಸಲ್ಲಿಸಲು ಆಯ್ಕೆ ಮಾಡಿಕೊಂಡಿರುವ ದಿನ ಮತ್ತು ಸಮಯ ಅತ್ಯಂತ ಶುಭಕರವಾಗಿದೆ. ಪ್ರಧಾನಿ ಮೋದಿ ಮೇ 14 ಮಂಗಳವಾರ ಬೆಳಗ್ಗೆ 11.40ಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಇಂದು ಗಂಗಾ ಸಪ್ತಮಿ ಇರುವುದರಿಂದ ಈ ಬಾರಿ ವಿಶೇಷವಾಗಿದೆ.
ಎಲೆಕ್ಟ್ರಿಕ್ ಕಾರುಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಅಮೆರಿಕದ ಟೆಸ್ಲಾ ಕಂಪನಿಯು ರಾಜ್ಯದಲ್ಲಿ ಉತ್ಪಾದನಾ ಘಟಕ ಸ್ಥಾಪಿಸುವ ಬಗ್ಗೆ ಪರಿಗಣಿಸಬೇಕು. ಕಂಪನಿ ಘಟಕ ಸ್ಥಾಪಿಸಲು ನಿರ್ಧರಿಸಿದರೆ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಕೋರಿದ್ದಾರೆ.
ಮಾನವತೆಯಿಂದ ಕೂಡಿದ ಪ್ರತಿಯೋರ್ವ ದಾಯಿಯರಿಗೆ ನನ್ನ ನಮನ ಎಂದ ಪ್ರಧಾನಿ ನರೇಂದ್ರ ಮೋದಿ, ನಿಮ್ಮ ಸೇವಾ ಭಾವನೆಗೆ ಸರಿಸಾಟಿ ಇಲ್ಲ ಎಂದಿದ್ದಾರೆ. ಭಾರತದಂತಹ 130 ಕೋಟಿ ಜನಸಂಖ್ಯೆಯುಳ್ಳ ದೇಶವನ್ನು ಕೊರೊನಾ ವೈರಸ್ ನಿಂದ ರಕ್ಷಿಸಲು ಲಾಕ್ ಡೌನ್ ಬಿಟ್ಟರೆ ಬೇರೆ ಮಾರ್ಗವೇ ಇರಲಿಲ್ಲ.
ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತದ 102 ನೇ ಸ್ಥಾನಕ್ಕೆ ಕುಸಿದ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಹಿರಿಯ ಮುಖಂಡ ಕಪಿಲ್ ಸಿಬಲ್ 'ಪ್ರಧಾನಿ ರಾಜಕೀಯದ ಬಗ್ಗೆ ಕಡಿಮೆ ಗಮನಹರಿಸಬೇಕು ಮತ್ತು ದೇಶದ ಮಕ್ಕಳ ಮೇಲೆ ಹೆಚ್ಚು ಗಮನ ಹರಿಸಬೇಕು ಎಂದು ಹೇಳಿದ್ದಾರೆ.
ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರೊಂದಿಗಿನ ಎರಡನೇ ಸುತ್ತಿನ ಅನೌಪಚಾರಿಕ ಶೃಂಗಸಭೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಬೆಳಿಗ್ಗೆ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾದರು.
ಬಂಡೀಪುರ ರಾತ್ರಿ ಸಂಚಾರ ನಿಷೇಧದ ವಿರೋಧಿಸಿ ಪ್ರತಿಭಟಿಸುತ್ತಿರುವ ಬೆಂಬಲಿಸಲು ವಯನಾಡಿಗೆ ಆಗಮಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಷ್ಟ್ರವು ಸರ್ವಾಧಿಕಾರಿದತ್ತ ಸಾಗುತ್ತಿದೆ ಮತ್ತು ಇದು ದೇಶದ ಪ್ರತಿಯೊಬ್ಬರಿಗೂ ತಿಳಿದಿದೆ ಎಂದು ಹೇಳಿದ್ದಾರೆ.
'ದೇಶದ ಅತ್ಯಂತ ಜನಪ್ರಿಯ ನಾಯಕ, ಬಲವಾದ ಇಚ್ಛಾಶಕ್ತಿ, ನಿರ್ಣಾಯಕ ನಾಯಕತ್ವ ಮತ್ತು ದಣಿವರಿಯದ ಕಠಿಣ ಪರಿಶ್ರಮದ ಸಂಕೇತವಾದ ಪ್ರಧಾನಿ ನರೇಂದ್ರಮೋದಿ ಜಿ ಅವರಿಗೆ ಜನ್ಮದಿನದ ಶುಭಾಶಯಗಳು' ಎಂದು ಅಮಿತ್ ಶಾ ಬರೆದಿದ್ದಾರೆ.
ಸೆಪ್ಟೆಂಬರ್ 6 ರಂದು ವಿಕ್ರಮ್ ಮೂನ್ ಲ್ಯಾಂಡರ್ ವಿಫಲವಾಗಲು ಪ್ರಧಾನಿ ನರೇಂದ್ರ ಮೋದಿ ಕಾರಣ ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನಲ್ಲಿ ಪ್ರಧಾನಿ ಮೋದಿ ಅವರ ಉಪಸ್ಥಿತಿಯು ಅಪಶಕುನವಾಗಿರಬಹುದು ಎಂದು ಹೇಳಿದ್ದಾರೆ.
ಎರಡು ದಿನಗಳ ರಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಈ ಪ್ರವಾಸವು ಉಭಯ ದೇಶಗಳ ನಡುವಿನ ಸಂಬಂಧಗಳಿಗೆ ಹೊಸ ನಿರ್ದೇಶನ, ಹೊಸ ಶಕ್ತಿ ಮತ್ತು ಹೊಸ ವೇಗ ನೀಡುತ್ತದೆ ಎಂದು ಹೇಳಿದ್ದಾರೆ. 20 ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆ ಮತ್ತು ಪೂರ್ವ ಆರ್ಥಿಕ ವೇದಿಕೆಯ (ಇಇಎಫ್) ಐದನೇ ಸಭೆಯಲ್ಲಿ ಭಾಗವಹಿಸಲು ಮೋದಿ ಬುಧವಾರ ವ್ಲಾಡಿವೋಸ್ಟಾಕ್ಗೆ ಆಗಮಿಸಿ ರಷ್ಯಾದ ಸರ್ಕಾರಿ ಸ್ವಾಮ್ಯದ ಟಾಸ್ ಸುದ್ದಿಸಂಸ್ಥೆಗೆ ಸಂದರ್ಶನ ನೀಡಿದರು.
ಫ್ರಾನ್ಸ್ ಭೇಟಿಯ ಸಮಯದಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ಯಾರಿಸ್ನಲ್ಲಿನ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮತ್ತು ನಿಡ್ ಡಿ ಏಗಲ್ನಲ್ಲಿ ಏರ್ ಇಂಡಿಯಾ ಅಪಘಾತಕ್ಕೆ ಒಳಗಾದ ಭಾರತೀಯ ಸಂತ್ರಸ್ತರಿಗಾಗಿ ಸ್ಮಾರಕವನ್ನು ಉದ್ಘಾಟಿಸಲಿದ್ದಾರೆ.
ರಾಜ್ಯದ ಪ್ರವಾಹ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ನಷ್ಟವನ್ನು ಪರಿಹರಿಸಲು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ 1000 ಕೋಟಿ ರೂ. ವಿಶೇಷ ಪರಿಹಾರ ಪ್ಯಾಕೇಜ್ ಕೋರಿ ಪತ್ರ ಬರೆದಿದ್ದಾರೆ.
"ಇಂದು ದೇಶದಲ್ಲಿ ಸಾವಿರಾರು ಸೈನಿಕರು ಹುತಾತ್ಮರಾಗಿದ್ದಾರೆ. ಇದು ಚುನಾವಣಾ ವಿಚಾರ ಆಗಬಾರದೇ? ರೈತರು ಸತ್ತರೆ, ಅದು ಚುನಾವಣಾ ವಿಷಯವಾಗುತ್ತದೆ. ಆದರೆ ಸೈನಿಕರು ಸಾವನ್ನಪ್ಪಿದರೆ ಅದು ಚುನಾವಣಾ ವಸ್ತು ವಿಷಯವಲ್ಲವೇ? ಅದು ಹೇಗೆ ಸಾಧ್ಯ?" ಎಂದು ಮೋದಿ ವಾಗ್ದಾಳಿ ನಡೆಸಿದ್ದಾರೆ.
ಬಾಹ್ಯಾಕಾಶದ ಲೋ ಅರ್ಥ್ ಆರ್ಬಿಟ್ ನಲ್ಲಿ ಎ-ಸ್ಯಾಟ್ ಆ್ಯಂಟಿ ಸ್ಯಾಟೆಲೈಟ್ ಮಿಸೈಲ್ ಮೂಲಕ ಲೈವ್ ಸ್ಯಾಟೆಲೈಟ್ ಅನ್ನು ಯಶಸ್ವಿಯಾಗಿ ಹೊಡೆದುರುಳಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು.
ಸತತ ಬರಗಾಲ, ಅನಿಶ್ಚಿತ ಮಳೆಯ ಪರಿಣಾಮವಾಗಿ ಸಂಕಷ್ಟಕ್ಕೊಳಗಾಗಿರುವ ರೈತರ ನೆರವಿಗೆ ಸರ್ಕಾರಗಳು ಧಾವಿಸಬೇಕಾದ್ದು ಅತಿ ಅಗತ್ಯವಾದ್ದರಿಂದ ಕೂಡಲೇ ಈ ಅನುದಾನ ಬಿಡುಗಡೆ ಮಾಡುವಂತೆ ಸಿಎಂ ಕೋರಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.