ಕ್ರಿಕೆಟ್ ಕಾಶಿ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ 2019ರ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಸೂಪರ್ ಓವರ್ ಗಳಲ್ಲಿ ಅತಿ ಹೆಚ್ಚು ಬೌಂಡರಿಗಳನ್ನು ಗಳಿಸಿದ ಆಧಾರದ ಮೇಲೆ ಇಂಗ್ಲೆಂಡ್ ತಂಡ ವಿಶ್ವಕಪ್ ಟ್ರೋಪಿಯನ್ನು ತನ್ನದಾಗಿಸಿಕೊಂಡಿದೆ. ಆ ಮೂಲಕ ಇಂಗ್ಲೆಂಡ್ ತಂಡವು ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿಗೆ ವಿಶ್ವಕಪ್ ಟ್ರೋಪಿಯನ್ನು ಗೆದ್ದಿದೆ.
ಈಗ ಭಾರತ-ನ್ಯೂಜಿಲೆಂಡ್ ತಂಡಗಳ ನಡುವಿನ ಸೆಮಿಫೈನಲ್ ಪಂದ್ಯಕ್ಕೆ ಮಳೆ ಅಡಚಣೆಯಾದ ಹಿನ್ನಲೆಯಲ್ಲ, ಒಂದು ವೇಳೆ ಫೈನಲ್ ಪಂದ್ಯದಲ್ಲೂ ಹೀಗೆ ಆದರೆ ವಿಶ್ವಕಪ್ ಟ್ರೋಫಿಯನ್ನು ಯಾರಿಗೆ ನೀಡಲಾಗುತ್ತೆ ಎನ್ನುವ ವಿಚಾರವಾಗಿ ಈಗ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿದೆ.
ವಿಶ್ವಕಪ್ ಟೂರ್ನಿ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಡೇವಿಡ್ ವಾರ್ನರ್ ಭರ್ಜರಿ 107 ರನ್ ಗಳಿಸುವ ಮೂಲಕ ಆಸ್ಟ್ರೇಲಿಯಾ ತಂಡದ ಸಹಾಯಕ ಕೋಚ್ ರಿಕಿ ಪಾಂಟಿಂಗ್ ಅವರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಕಾರ್ಡಿಫ್ ನ ಸೋಫಿಯಾ ಗಾರ್ಡನ್ ನಲ್ಲಿ ವಿಶ್ವಕಪ್ ಟೂರ್ನಿ ಅಂಗವಾಗಿ ನಡೆದ ಲೀಗ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವು ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡು ಲಂಕಾ ತಂಡವು ಕೇವಲ 136 ರನ್ ಗಳಿಗೆ ಆಲೌಟ್ ಮಾಡಿದೆ.
ಮುಂಬರುವ ಕ್ರಿಕೆಟ್ ವಿಶ್ವಕಪ್ ಗೆಲ್ಲುವುದಾಗಿ ಹೇಳಿರುವ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ವಿಶ್ವಕಪ್ ನ್ನು ಭಾರತೀಯ ಸೈನಿಕರಿಗೆ ಅರ್ಪಿಸಲಾಗುವುದು ಎಂದು ತಿಳಿಸಿದ್ದಾರೆ.ಮೇ 30 ರಿಂದ ಇಂಗ್ಲೆಂಡ್ ನಲ್ಲಿ ಪ್ರಾರಂಭವಾಗಲಿರುವ ವಿಶ್ವಕಪ್ ಟೂರ್ನಿಗೆ ತೆರಳುವ ಮೊದಲು ಪತ್ರಿಕಾಗೋಷ್ಠಿ ನಡೆಸಿದ ವಿರಾಟ್ ಕೊಹ್ಲಿಭಾರತದ ಸಶಸ್ತ್ರ ಪಡೆಗಳ ಧೈರ್ಯವನ್ನು ಪ್ರಶಂಸಿಸಿದ್ದಾರೆ.
ಪುಲ್ವಾಮಾದಲ್ಲಿ ಭಯೋತ್ಪಾದನಾ ದಾಳಿಯ ಹಿನ್ನೆಲೆಯಲ್ಲಿ ಕನಿಷ್ಠ 40 ಸಿಆರ್ಪಿಎಫ್ ಸಿಬ್ಬಂದಿ ಗುರುವಾರದಂದು ಮೃತಪಟ್ಟಿದ್ದರು ಈ ಹಿನ್ನಲೆಯಲ್ಲಿ ಈಗ ಪ್ರತಿಕ್ರಿಯಿಸಿರುವ ಕ್ರಿಕೆಟ್ ಕ್ಲಬ್ ಆಫ್ ಇಂಡಿಯಾ (ಸಿಸಿಐ) ಕಾರ್ಯದರ್ಶಿ ಸುರೇಶ್ ಬಾಫ್ನಾ 2019 ರ ವಿಶ್ವಕಪ್ ನಲ್ಲಿ ಭಾರತ ತಂಡವು ಪಾಕ್ ವಿರುದ್ಧ ಆಡಕೂಡದು ಎಂದು ಹೇಳಿದ್ದಾರೆ.
ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ತಾವು ನಾಯಕತ್ವವನ್ನು ತೊರೆದದ್ದು ಮುಂಬರುವ ವಿಶ್ವಕಪ್ ಗೆ ಹೊಸ ನಾಯಕ ಸಜ್ಜಾಗಲು ಸಮಯ ಬೇಕು ಆ ಕಾರಣಕ್ಕಾಗಿ ನಾಯಕತ್ವದ ಹುದ್ದೆಯಿಂದ ಕೆಳಗಿಳಿದಿದ್ದು ಎಂದು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.