ಮುಂಬರುವ ಅಮೇರಿಕಾ ಪ್ರವಾಸ ಅನಧಿಕೃತವಾಗಿದೆ ಮತ್ತು ತಮ್ಮ ವೈಯಕ್ತಿಕ ಖರ್ಚಿನಲ್ಲಿ ಪ್ರಯಾಣಿಸುತ್ತಿರುವುದಾಗಿ ಸಿಎಂ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ತೆರಿಗೆದಾರರ ಹಣವನ್ನು ಅನಧಿಕೃತ ಉದ್ದೇಶಗಳಿಗಾಗಿ ಖರ್ಚು ಮಾಡಲಾಗಿದೆಯೆಂದು ಟೀಕೆಗಳು ಬಂದ ಹಿನ್ನಲೆಯಲ್ಲಿ ಕುಮಾರಸ್ವಾಮಿಯವರ ಈ ಹೇಳಿಕೆ ಬಂದಿದೆ.
ರಾಯಚೂರಿನ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕ್ಯಾಬಿನೆಟ್ ನಲ್ಲಿ ರಾಯಚೂರು ವಿವಿ ಕುರಿತು ಸುಗ್ರಿವಾಜ್ಞೆ ಮಾಡಿ ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ವಿವರಣೆಯನ್ನು ರಾಜ್ಯಪಾಲರಿಗೆ ಕೇಳಿದ್ದು, ಆ ಕುರಿತು ಮನವೋಲಿಸಲಾಗುವುದು- ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ
ಬರಗಾಲ ಹಾಗೂ ಅದರ ನಿರ್ವಹಣೆಗೆ ಸಂಬಂಧಿಸಿದಂತೆ ಚರ್ಚಿಸಿದ ಮುಖ್ಯಮಂತ್ರಿಗಳು ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಿ- ಅಧಿಕಾರಿಗಳಿಗೆ ಸಿಎಂ ಸೂಚನೆ
ಈ ಹಿಂದೆ 2006 ರಲ್ಲಿ ಗ್ರಾಮವಾಸ್ತವ್ಯ ಮಾಡಿದ್ದು ಫಲಪ್ರದವಾಗಿದೆ. ಈ ಬಾರಿ ಪ್ರತಿ ತಿಂಗಳು ಒಂದು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ವಾಸ್ತವ್ಯ ಮಾಡಲಾಗುವುದು. ಚಂಡ್ರಕಿ ಗ್ರಾಮದಿಂದ ಈ ಕಾರ್ಯಕ್ರಮ ಆರಂಭವಾಗಿದೆ.
ಗುರುಮಠಕಲ್ ತಾಲೂಕಿನ ಚಂಡರಕಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಲಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಯಾದಗಿರಿ ರೈಲು ನಿಲ್ದಾಣಕ್ಕೆ ಮುಂಜಾನೆ 4.45 ಕ್ಕೆ ಕರ್ನಾಟಕ ಎಕ್ಸ್ಪ್ರೆಸ್ ನಲ್ಲಿ ಬಂದಿಳಿದರು.
ಪಡಿತರ ವ್ಯವಸ್ಥೆಯನ್ನು ಬಲಪಡಿಸಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಆಹಾರ ಮತ್ತು ನಾಗರಿಕ ಇಲಾಖೆ ಅಧಿಕಾರಿಗಳು ಹೆಚ್ಚು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು- ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
ಆತ್ಮಹತ್ಯೆಗೆ ಶರಣಾದ ಮಂಡ್ಯ ಜಿಲ್ಲೆಯ ಕೆ.ಆರ್ .ಪೇಟೆ ತಾಲ್ಲೂಕಿನ ಸಂತೇಬಾಚಳ್ಳಿ ಹೋಬಳಿಯ, ಅಘಲಯ ಗ್ರಾಮದ ರೈತ ಸುರೇಶ್ ಅವರ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ರಾಜ್ಯದ 55 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಮಂಜೂರು ಮಾಡಲು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಸೀಡಿಂಗ್ ಕಾರ್ಯವನ್ನು ಜೂನ್ ಅಂತ್ಯದೊಳಗೆ ಪೂರ್ಣಗೊಳಿಸಲು ಸೂಚಿಸಿದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ.
ವಾಣಿಜ್ಯ ಬ್ಯಾಂಕುಗಳ ಬೆಳೆಸಾಲ ಮನ್ನಾಗೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಅರ್ಹತೆ ಹೊಂದಿರುವ ಫಲಾನುಭವಿಗಳಿಗೆ ಬಾಕಿ ಉಳಿದಿರುವ ಸಾಲವನ್ನು ಒಂದೇ ಕಂತಿನಲ್ಲಿ ಬಿಡುಗಡೆ ಮಾಡಲು ಆದೇಶ ಹೊರಡಿಸಲಾಗಿದೆ.
ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಪ್ರಾರಂಭವಾಗಿದ್ದು, ನೈಸರ್ಗಿಕ ಮೂಲಗಳಿಂದ ಕುಡಿಯುವ ನೀರನ್ನು ಒದಗಿಸುವ ಜಲಧಾರೆ ಯೋಜನೆಯು ಜಾರಿಗೆ ಬಂದಿದೆ. ಗ್ರಾಮಗಳಿಗೆ ಕುಡಿಯುವ ನೀರನ್ನು ಒದಗಿಸಲು ಆದ್ಯತೆ ನೀಡುವ ಕಾರ್ಯಕ್ರಮ ಇದಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.