next 5 years for AI Mission : AI ತಂತ್ರಜ್ಞರಿಗೆ ಅನುಕೂಲವಾಗಬೇಕು ಮತ್ತು 10,000 ಸಿಪಿಯು ಒಳಗೊಂಡ ಸೂಪರ್ ಕಂಪ್ಯೂಟರ್ ಘಟಕವನ್ನು ಸ್ಥಾಪಿಸಬೇಕು ಎನ್ನುವ ನಿಟ್ಟಿನಲ್ಲಿ ಈ ವ್ಯವಸ್ಥೆಯನ್ನು ನಿರ್ಮಾಣ ಮಾಡಲಾಗಿದೆ.


COMMERCIAL BREAK
SCROLL TO CONTINUE READING

ಈ ಅನುಮೋದನೆಯ ಮೊತ್ತವನ್ನು ಬೃಹತ್ ಕಂಪ್ಯೂಟಿಂಗ್ ಮೂಲ ಸೌಕರ್ಯ ನಿರ್ಮಾಣಕ್ಕೆ ಬಳಸಲಾಗುತ್ತದೆ ಎಂದು ತಿಳಿಸಿದ್ದಾರೆ 


ಇದನ್ನು ಓದಿ : ಮಹಾಶಿವರಾತ್ರಿ : ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಕಾರ್ಯಕ್ರಮಕ್ಕೆ ಸೂಚನೆ : ಮುಜರಾಯಿ ಇಲಾಖೆ ಸುತ್ತೋಲೆ 


ಯೋಜನೆಯನ್ನು ಡಿಜಿಟಲ್ ಇಂಡಿಯಾ ಕಾರ್ಪೊರೇಷನ್ ಅಂಗಸಂಸ್ಥೆಯಾಗಿರುವ ಇಂಡಿಯಾ ಎಐ ಇಂಡಿಪೆಂಡೆಂಟ್ ಡಿಜಿಜನ್ ಮೂಲಕ ಅನುಷ್ಠಾನಗೊಳಿಸಲಾಗುತ್ತದೆ


 ಈ ವಿಷಯ ಕುರಿತು ಮಾತನಾಡಿದ ಕೇಂದ್ರ ಸಚಿವ ಪಿಯೂಷ್ ಗೋಯಲ್ ಐದು ವರ್ಷಗಳ ಅವಧಿಯ ಈ ಯೋಜನೆಯನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ ವಿಧಾನದಲ್ಲಿ ಅನುಷ್ಠಾನಗೊಳಿಸಲಾಗುವುದು ಈ ಮೂಲಕ ದೇಶದಲ್ಲಿ ಉನ್ನತ ಮಟ್ಟದ ಎಐ ವ್ಯವಸ್ಥೆಯನ್ನು ನಿರ್ಮಿಸಲಾಗುವುದು ಎಂದು ಸಚಿವ ಸಂಪುಟ ಸಭೆಯ ಬಳಿಕ ತಿಳಿಸಿದ್ದಾರೆ. 


ನವೋದ್ಯಮ ವಿದ್ಯಾರ್ಥಿಗಳು ಸಂಶೋಧಕರು ಮತ್ತು ಕೈಗಾರಿಕೋದ್ಯಮಿಗಳಿಗೆ ಅವಕಾಶ ನೀಡುವ ಉದ್ದೇಶದಿಂದ ಎಐ ಮಿಷನ್ ಅಡಿ ಸೂಪರ್ ಕಂಪ್ಯೂಟಿಂಗ್ ವ್ಯವಸ್ಥೆಯಲ್ಲಿ ನಿರ್ಮಾಣಗಳಿಸಲಿದೆ.  ದತ್ತಾಂಶದ ಗುಣಮಟ್ಟ ವೃದ್ಧಿ ಮತ್ತು ಎಐ ಅಭಿವೃದ್ಧಿ ಹಾಗೂ ನಿಯೋಜನೆಗೆ ಅಂಕಿ ಅಂಶದ ಲಭ್ಯತೆಯನ್ನು ಖಾತ್ರಿಪಡಿಸುವ ಉದ್ದೇಶದಿಂದ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸಚಿವಾಲಯಗಳ ಜೊತೆ ಸಮನ್ವಯ ಸಾಧಿಸುವ ಕೆಲಸ ಮಾಡುತ್ತದೆ ಎಂದು ತಿಳಿಸುತ್ತಾರೆ


ಇದನ್ನು ಓದಿ : ಬಹು ನಿರೀಕ್ಷಿತ 'ಲವ್ ಸೆಕ್ಸ್ ಔರ್ ಧೋಖಾ 2' ಹೊಸ ಪೋಸ್ಟರ್ ಬಿಡುಗಡೆ


ಎಐ ಸೂಪರ್ ಕಂಪ್ಯೂಟಿಂಗ್ ಮೂಲಸೌಕರ್ಯವನ್ನು ದೇಶದ ಸ್ಟಾರ್ಟಪ್ ಗಳಿಗೆ ಶೈಕ್ಷಣಿಕ ಕ್ಷೇತ್ರದಲ್ಲಿರುವವರಿಗೆ ಹಾಗೂ ಸಂಶೋಧಕರಿಗೂ ಒದಗಿಸಲಾಗುತ್ತದೆ ಈ ಯೋಜನೆ ಅಡಿ ಎಐ ಇನ್ನೋವೇಶನ್ ಸೆಂಟರ್ ನ್ಯಾಷನಲ್ ಡೇಟಾ ಮ್ಯಾನೇಜ್ಮೆಂಟ್ ಆಫೀಸ್ ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.