Best Mileage Desi SUV : ಮಾರುತಿ ಸುಜುಕಿ 2022ರಲ್ಲಿ ಮಾರುತಿ ಸುಜುಕಿ ಗ್ರಾಂಡ್ ವಿಟಾರಾವನ್ನು ಬಿಡುಗಡೆ ಮಾಡಿತ್ತು.ಇದು ಹೈಬ್ರಿಡ್ ಎಸ್ ಯುವಿ.ಆದರೆ ಈ ಹೈಬ್ರಿಡ್ ಕಾರು ಅನೇಕ ಹ್ಯಾಚ್‌ಬ್ಯಾಕ್ ಮತ್ತು ಸೆಡಾನ್ ಕಾರುಗಳಿಗಿಂತ ಹೆಚ್ಚು ಮೈಲೇಜ್ ನೀಡುತ್ತದೆ.ಗ್ರಾಂಡ್ ವಿಟಾರಾದಲ್ಲಿ,ಗ್ರಾಹಕರು 1.5L 4-ಸಿಲಿಂಡರ್ ಮೈಲ್ಡ್ -ಹೈಬ್ರಿಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ.ಇದು ಪೆಟ್ರೋಲ್ ಎಂಜಿನ್ ಜೊತೆಗೆ ಶಕ್ತಿಯುತವಾದ ಎಲೆಕ್ಟ್ರಿಕ್ ಮೋಟರ್ ಅನ್ನು ಸಹ ಹೊಂದಿದೆ.
ಮಾರುತಿ ಗ್ರಾಂಡ್ ವಿಟಾರಾ: ಬೆಲೆ ಮತ್ತು ರೂಪಾಂತರಗಳು:
ಮಾರುತಿಯ ಕಾಂಪ್ಯಾಕ್ಟ್ ಎಸ್‌ಯುವಿ ಬೆಲೆ 10,99,000 ಲಕ್ಷ ರೂಪಾಯಿಗಳಿಂದ ಪ್ರಾರಂಭವಾಗುತ್ತದೆ.ಸಿಗ್ಮಾ,ಡೆಲ್ಟಾ,ಝೀಟಾ,ಝೀಟಾ+,ಆಲ್ಫಾ ಮತ್ತು ಆಲ್ಫಾ+ ಎನ್ನುವ ಒಟ್ಟು ಆರು ಟ್ರಿಮ್‌ಗಳಲ್ಲಿ ಲಭ್ಯವಿದೆ.ಇದರ ಪ್ಲಸ್ ಟ್ರಿಮ್‌ಗಳು ಸಸ್ಟ್ರಾಂಗ್ -ಹೈಬ್ರಿಡ್ ಪವರ್‌ಟ್ರೇನ್ ಆಯ್ಕೆಯೊಂದಿಗೆ ಲಭ್ಯವಿದೆ.ಡೆಲ್ಟಾ ಮತ್ತು ಝೀಟಾ ಟ್ರಿಮ್‌ಗಳ ಮಾನ್ಯುಯಲ್ ವೆರಿಯೆಂಟ್ ಈಗ ಕಾರ್ಖಾನೆಯಲ್ಲಿ ಅಳವಡಿಸಲಾದ CNG ಆಯ್ಕೆಯೊಂದಿಗೆ ಲಭ್ಯವಿದೆ.
ಇದನ್ನೂ ಓದಿ : ಜಿಯೋದಿಂದ ಅತಿ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್ ಬಿಡುಗಡೆ, 84 ದಿನಗಳವರೆಗೆ ಸಿಗುತ್ತೆ ಇಷ್ಟೆಲ್ಲಾ ಪ್ರಯೋಜನ
ಮಾರುತಿ ಗ್ರ್ಯಾಂಡ್ ವಿಟಾರಾ: ವೈಶಿಷ್ಟ್ಯಗಳು :
ಕಾರು 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಪನೋರಮಿಕ್ ಸನ್‌ರೂಫ್,ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜರ್,ವೆಂಟಿಲೇಟೆಡ್ ಫ್ರಂಟ್ ಸೀಟ್ ಮತ್ತು ಹೆಡ್-ಅಪ್ ಡಿಸ್ಪ್ಲೇಯೊಂದಿಗೆ ಬರುತ್ತದೆ.ಇದು 6 ಏರ್‌ಬ್ಯಾಗ್‌ಗಳು, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ (ESP), EBD ಜೊತೆಗೆ ABS ಮತ್ತು ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್ (TPMS) ಅನ್ನು ಪಡೆಯುತ್ತದೆ.ಇದಲ್ಲದೆ,ಇದು 360-ಡಿಗ್ರಿ ಕ್ಯಾಮೆರಾ, ಹಿಲ್-ಡಿಸೆಂಟ್ ಕಂಟ್ರೋಲ್ ಮತ್ತು ISOFIX ಚೈಲ್ಡ್-ಸೀಟ್ ಆಂಕರ್‌ಗಳನ್ನು ಹೊಂದಿದೆ.
ಹೆಚ್ಚು ಮೈಲೇಜ್ :
ಹೈಬ್ರಿಡ್ ಕಾರುಗಳು ಒಂದಕ್ಕಿಂತ ಹೆಚ್ಚು ಎನರ್ಜಿ ಮೂಲಗಳಲ್ಲಿ ಕಾರ್ಯನಿರ್ವಹಿಸುತ್ತವೆ.ಇದು ಪೆಟ್ರೋಲ್ ಅಥವಾ ಡೀಸೆಲ್ ಎಂಜಿನ್ ಮತ್ತು ಎಲೆಕ್ಟ್ರಿಕ್ ಮೋಟರ್‌ನ ಸಂಯೋಜನೆಯಾಗಿದೆ. ಈ ಎರಡೂ ವ್ಯವಸ್ಥೆಗಳು ಒಟ್ಟಿಗೆ ಕೆಲಸ ಮಾಡುತ್ತವೆ. ಕೆಲವೊಮ್ಮೆ ಕಾರುಗಳು ಎಲೆಕ್ಟ್ರಿಕ್ ಮೋಟರ್‌ನಲ್ಲಿ ಮಾತ್ರ ಚಲಿಸಬಹುದು.ಇದು ಕಡಿಮೆ ಇಂಧನ ಬಳಕೆಯಾಗುತ್ತದೆ. ಹಾಗಾಗಿ ಇಂಧನ ದಕ್ಷತೆಯನ್ನು ಸುಧಾರಿಸುತ್ತದೆ.ಹೈಬ್ರಿಡ್ ತಂತ್ರಜ್ಞಾನದ ಬಗ್ಗೆ ಮಾತನಾಡುವುದಾದರೆ ಈ ತಂತ್ರಜ್ಞಾನದಲ್ಲಿ ಬ್ಯಾಟರಿಯನ್ನು ಇಂಟರ್ನಲ್ ಸಿಸ್ಟಮ್ ನಿಂದ ಚಾರ್ಜ್ ಮಾಡಲಾಗುತ್ತದೆ.ಆದ್ದರಿಂದ,ಬ್ಯಾಟರಿಗೆ ಪ್ರತ್ಯೇಕ ಚಾರ್ಜಿಂಗ್ ಅಗತ್ಯವಿಲ್ಲ.ಹಲವು ವಿಧದ ಹೈಬ್ರಿಡ್ ತಂತ್ರಜ್ಞಾನಗಳು ಲಭ್ಯವಿದ್ದರೂ, ಪ್ರಸ್ತುತ ಮೈಲ್ಡ್ ಹೈಬ್ರಿಡ್ ಮತ್ತು ಸ್ಟ್ರಾಂಗ್ ಹೈಬ್ರಿಡ್ ತಂತ್ರಜ್ಞಾನಗಳು ಭಾರತದಲ್ಲಿ ಹೆಚ್ಚು ಜನಪ್ರಿಯವಾಗಿವೆ.
ಇದನ್ನೂ ಓದಿ: Vi ಅಗ್ಗದ ರಿಚಾರ್ಜ್‌ಗೆ ಅಂಬಾನಿ ಶಾಕ್! 175 ರೂ.ಗೆ ಸಿಗುತ್ತೆ ಭರ್ಜರಿ ಡೇಟಾ, 15 ಒಟಿಟಿ ಪ್ಲಾಟ್‌ಫಾರ್ಮ್ ಉಚಿತ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.