Whatsapp : ಮೆಟಾ ಮಾಲೀಕತ್ವದ ವಾಟ್ಸಪ್‌, ಬಳಕೆದಾರರ ನೆಚ್ಚಿನ ಮೆಸೇಜಿಂಗ್‌ ಅಪ್ಲಿಕೇಶನ್‌ ಆಗಿ ಗುರುತಿಸಿಕೊಂಡಿದೆ. ತನ್ನ ಬಳಕೆದಾರರ ಅನುಕೂಲಕ್ಕಾಗಿ ಈಗಾಗಲೇ ಹಲವು ಉಪಯುಕ್ತ ಫೀಚರ್ಸ್‌ಗಳನ್ನು ಈ ಆ್ಯಪ್​ ಪರಿಚಯಿಸಿದೆ. ಅಲ್ಲದೆ ಬಳಕೆದಾರರ ಮಾಹಿತಿ ಸುರಕ್ಷತೆಗೂ ಹಲವು ಆಯ್ಕೆಗಳನ್ನು ಅಳವಡಿಸಿಕೊಂಡಿದೆ. 


COMMERCIAL BREAK
SCROLL TO CONTINUE READING

ಸದ್ಯ ವಾಟ್ಸಪ್‌ ಪ್ಲಾಟ್‌ಫಾರ್ಮ್ ಮತ್ತಷ್ಟು ಕುತೂಹಲಕಾರಿ ಫೀಚರ್ಸ್‌ಗಳು ಸೇರಿಸುವ ತಯಾರಿಯಲ್ಲಿದೆ. ವಾಟ್ಸಪ್​ ಈ ವರ್ಷ ಹಲವಾರು ಫೀಚರ್ಸ್​ ಅನ್ನು ಬಿಡುಗಡೆ ಮಾಡಿದ್ದು,  ಶೀಘ್ರದಲ್ಲೇ ಬಳಕೆದಾರರಿಗೆ HD ಗುಣಮಟ್ಟದಲ್ಲಿ ಫೋಟೋಗಳನ್ನು ಕಳುಹಿಸಲು ಅವಕಾಶ ನೀಡುತ್ತದೆ ಎಂದು ಮೆಟಾ-ಮಾಲೀಕತ್ವದ ಮೆಸೇಜಿಂಗ್ ಕಂಪನಿಯು ಘೋಷಿಸಿದೆ.


ವಾಟ್ಸಪ್‌ ಈ ಹೊಸ ಫೀಚರ್, ಬಳಕೆದಾರರು HD ಅಥವಾ ಸ್ಟ್ಯಾಂಡರ್ಡ್ ಗುಣಮಟ್ಟದಲ್ಲಿ ಫೋಟೋಗಳನ್ನು ಕಳುಹಿಸಲು ಅವಕಾಶ ನೀಡುತ್ತದೆ. ಇದು ಇಂಟರ್ನೆಟ್ ವೇಗದ ಮೇಲೆ ಅವಲಂಬಿಸಿದೆ. ಇಂಟರ್ನೆಟ್ ನಿಧಾನವಾಗಿದ್ದರೆ HDನಲ್ಲಿರುವ ಫೋಟೋಗಳನ್ನು ಕಳುಹಿಸಲು ಅಥವಾ ಲೋಡ್ ಮಾಡಲು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. 


ಇದನ್ನೂ ಓದಿ-ಇಂದಿರಾ ಕ್ಯಾಂಟೀನ್ ಊಟಕ್ಕೆ ರೊಟ್ಟಿ,ಪಲ್ಯ, ಸ್ವೀಟ್ ಸೇರ್ಪಡೆ : ಸಬ್ಸಿಡಿ ಹೆಚ್ಚಳ


ಈ HD ಫೋಟೋಗಳು ಹೆಚ್ಚು MBಯಿಂದ ಕೂಡಿರುತ್ತದೆ.ಮೆಟಾ ಸಿಇಒ ಮಾರ್ಕ್ ಜುಕರ್‌ಬರ್ಗ್ ಕೂಡ ಫೇಸ್‌ಬುಕ್‌ನಲ್ಲಿ ಈ ಹೊಸ ಅಪ್ಡೇಟ್ ಬಗ್ಗೆ ಹಂಚಿಕೊಂಡಿದ್ದಾರೆ. ವಾಟ್ಸಪ್‌ನಲ್ಲಿ ಫೋಟೋಗಳನ್ನು ಹಂಚಿಕೊಳ್ಳುವುದು ಇದೀಗ ಅಪ್‌ಗ್ರೇಡ್ ಆಗಿದೆ. ಈಗ ನೀವು HD ನಲ್ಲಿ ಫೋಟೋ ಕಳುಹಿಸಬಹುದು ಟ್ವೀಟ್‌ ಮಾಡಿದ್ದಾರೆ. ಈ ಆಯ್ಕೆ ಎಂಡ್-ಟು-ಎಂಡ್ ಎನ್​ಕ್ರಿಪ್ಟ್ ಆಗಿದೆ ಎಂದು ಮೆಟಾ ಹೇಳಿದೆ. ಮುಂದಿನ ಕೆಲವು ವಾರಗಳಲ್ಲಿ ಎಚ್‌ಡಿ ಫೋಟೋ ಆಯ್ಕೆ ಜಾಗತಿಕವಾಗಿ ಎಲ್ಲರಿಗೂ ಸಿಗಲಿದೆಯಂತೆ.


ಒಂದೇ ವಾಟ್ಸಾಪ್‌ನಲ್ಲಿ ಅನೇಕ ಅಕೌಂಟ್
ಶೀಘ್ರದಲ್ಲೇ ವಾಟ್ಸ್​ಆ್ಯಪ್​ ತನ್ನ ಬಳಕೆದಾರರಿಗೆ ಒಂದು ವಾಟ್ಸ್​ಆ್ಯಪ್ ಅಪ್ಲಿಕೇಶನ್‌ನಲ್ಲಿ ಅನೇಕ ವಾಟ್ಸ್​ಆ್ಯಪ್​ ಖಾತೆಗಳನ್ನು ಸ್ವಿಚ್ ರೀತಿಯಲ್ಲಿ ತೆರೆಯಲು ಅವಕಾಶ ಮಾಡಿಕೊಡಲಿದೆ. ಈಗಾಗಲೇ ಈ ಆಯ್ಕೆ ಇನ್​ಸ್ಟಾಗ್ರಾಮ್ ಮತ್ತು ಫೇಸ್​ಬುಕ್​ನಲ್ಲಿ ಇದೆ. ಪ್ರಸ್ತುತ, ವಾಟ್ಸ್​ಆ್ಯಪ್​ ಬಳಕೆದಾರರಿಗೆ ಒಂದು ಮೊಬೈಲ್​ನಲ್ಲಿ ಒಂದು ಖಾತೆಯೊಂದಿಗೆ ಲಾಗ್ ಇನ್ ಮಾಡಲು ಮಾತ್ರ ಅನುಮತಿಸುತ್ತದೆ. 


ಆದ್ದರಿಂದ, ವಿಭಿನ್ನ ಫೋನ್ ಸಂಖ್ಯೆಗಳೊಂದಿಗೆ ಎರಡು ವಾಟ್ಸ್​ಆ್ಯಪ್​ ಖಾತೆಗಳನ್ನು ಬಳಸುವ ಬಳಕೆದಾರರು ಎರಡು ಮೊಬೈಲ್​ಗಳನ್ನು ಬಳಸಬೇಕಾಗುತ್ತದೆ. ಈ ವೈಶಿಷ್ಟ್ಯವು ಪ್ರಸ್ತುತ ಕೆಲವು ಬೀಟಾ ಪರೀಕ್ಷಕರಿಗೆ ಲಭ್ಯವಿದೆ ಮತ್ತು ಮುಂಬರುವ ವಾರಗಳಲ್ಲಿ ಹೆಚ್ಚಿನ ಬಳಕೆದಾರರಿಗೆ ಹೊರತರಲಾಗುವುದು ಎಂದು ವರದಿಗಳು ಹೇಳಿದೆ.


ಇದನ್ನೂ ಓದಿ-"ನೀರು ನಿರ್ವಹಣಾ ಪ್ರಾಧಿಕಾರದ ತೀರ್ಮಾನದ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಕೆ ; ಸಚಿವ ಎಚ್.ಕೆ.ಪಾಟೀಲ್


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.