Flipkart Big Billion Days 2022: 40-ಇಂಚಿನ ಸ್ಮಾರ್ಟ್ ಟಿವಿ ಕೇವಲ 2,499 ರೂ.ಗೆ ಲಭ್ಯ

Flipkart Big Billion Days 2022:  40 ಇಂಚಿನ ಸ್ಮಾರ್ಟ್ ಟಿವಿಯನ್ನು  ಕೇವಲ ಎರಡೂವರೆ ಸಾವಿರ ರೂಪಾಯಿಗಳಿಗೆ ಮನೆಗೆ ಕೊಂಡೊಯ್ಯಲು ಉತ್ತಮ ಅವಕಾಶವಿದೆ.  ಹೌದು,  22 ಸಾವಿರ ಮೌಲ್ಯದ ಥಾಮ್ಸನ್ 9ಎ ಸಿರೀಸ್ 40 ಇಂಚಿನ ಸ್ಮಾರ್ಟ್ ಟಿವಿ ಕೇವಲ 2,499 ರೂ.ಗೆ ನಿಮ್ಮದಾಗಲಿದೆ. ಏನಿದು ಆಫರ್, ಇಷ್ಟು ಕಡಿಮೆ ಬೆಲೆಗೆ ಸ್ಮಾರ್ಟ್ ಟಿವಿಯನ್ನು  ಹೇಗೆ ಖರೀದಿಸಬಹುದು ಎಂದು ತಿಳಿಯೋಣ.

Written by - Yashaswini V | Last Updated : Sep 23, 2022, 09:07 AM IST
  • ಫ್ಲಿಪ್‌ಕಾರ್ಟ್‌ನಲ್ಲಿ ಇಂದಿನಿಂದ ಬಿಗ್ ಬಿಲಿಯನ್ ಡೇಸ್ ಸೇಲ್ ಆರಂಭ
  • ಇಂದಿನಿಂದ ಆರಂಭವಾಗಿರುವ ಈ ಸೇಲ್ ಸೆಪ್ಟೆಂಬರ್ 30ರವರೆಗೆ ನಡೆಯಲಿದೆ.
  • ಈ ಸೇಲ್‌ನಲ್ಲಿ ನೀವು ಸ್ಮಾರ್ಟ್‌ಫೋನ್‌ಗಳು, ಸ್ಮಾರ್ಟ್ ಟಿವಿಗಳು, ಐಫೋನ್ ಸೇರಿದಂತೆ ಹಲವು ಎಲೆಕ್ಟ್ರಾನಿಕ್ ಉತ್ಪನ್ನಗಳನ್ನು ಭಾರೀ ರಿಯಾಯಿತಿಯೊಂದಿಗೆ ಖರೀದಿಸಬಹುದಾಗಿದೆ.
Flipkart Big Billion Days 2022: 40-ಇಂಚಿನ ಸ್ಮಾರ್ಟ್ ಟಿವಿ ಕೇವಲ 2,499 ರೂ.ಗೆ ಲಭ್ಯ title=
Flipkart Big Billion Days 2022

ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ 2022: ಫ್ಲಿಪ್‌ಕಾರ್ಟ್‌ನಲ್ಲಿ ಬಿಗ್ ಬಿಲಿಯನ್ ಡೇಸ್ ಸೇಲ್ ಆರಂಭವಾಗಿದೆ. ಇಂದಿನಿಂದ ಆರಂಭವಾಗಿರುವ ಈ ಸೇಲ್ ಸೆಪ್ಟೆಂಬರ್ 30ರವರೆಗೆ ನಡೆಯಲಿದೆ. ಈ ಸೇಲ್‌ನಲ್ಲಿ ನೀವು ಸ್ಮಾರ್ಟ್‌ಫೋನ್‌ಗಳು, ಸ್ಮಾರ್ಟ್ ಟಿವಿಗಳು, ಐಫೋನ್ ಸೇರಿದಂತೆ ಹಲವು ಎಲೆಕ್ಟ್ರಾನಿಕ್ ಉತ್ಪನ್ನಗಳನ್ನು ಭಾರೀ ರಿಯಾಯಿತಿಯೊಂದಿಗೆ ಖರೀದಿಸಬಹುದಾಗಿದೆ. ನೀವು ಕಡಿಮೆ ಬಜೆಟ್ ನಲ್ಲಿ ಸ್ಮಾರ್ಟ್ ಟಿವಿ ಖರೀದಿಸಲು ಯೋಚಿಸುತ್ತಿದ್ದರೆ ಈ ಅವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ. 

ಇಂದಿನಿಂದ ಆರಂಭವಾಗಿರುವ  ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್‌ನಲ್ಲಿ ಕೇವಲ ಎರಡೂವರೆ ಸಾವಿರ ರೂಪಾಯಿಗೆ 40 ಇಂಚಿನ ಸ್ಮಾರ್ಟ್ ಟಿವಿ ಖರೀದಿಸಬಹುದಾಗಿದೆ. ಹೌದು, 22 ಸಾವಿರ ಮೌಲ್ಯದ ಥಾಮ್ಸನ್ 9ಎ ಸಿರೀಸ್ 40 ಇಂಚಿನ ಸ್ಮಾರ್ಟ್ ಟಿವಿ ಕೇವಲ 2,499 ರೂ.ಗೆ ನಿಮ್ಮದಾಗಲಿದೆ. ಈ ಆಫರ್ ಬಗ್ಗೆ ತಿಳಿಯಲು ಮುಂದೆ ಓದಿ...

ಇದನ್ನೂ ಓದಿ- ಕೇವಲ 12 ಸಾವಿರ ರೂಪಾಯಿಗಳಲ್ಲಿ ಐಫೋನ್ ಖರೀದಿಸುವ ಅವಕಾಶ, ಏನಿದು ಆಫರ್ ತಿಳಿಯಿರಿ

ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್: ಥಾಮ್ಸನ್ 9A ಸರಣಿ 40 ಇಂಚಿನ ಸ್ಮಾರ್ಟ್ ಟಿವಿ ಕೊಡುಗೆಗಳು:
ಥಾಮ್ಸನ್ 9A ಸರಣಿಯ 40 ಇಂಚಿನ ಸ್ಮಾರ್ಟ್ ಟಿವಿಯ ಪ್ರಾರಂಭಿಕ ಬೆಲೆ ರೂ. 21,499 ಆಗಿದೆ. ಆದರೆ ಫ್ಲಿಪ್‌ಕಾರ್ಟ್‌ನಲ್ಲಿ ಈ ಟಿವಿಯಲ್ಲಿ ಸಂಪೂರ್ಣ 30% ರಿಯಾಯಿತಿ ನೀಡಲಾಗುತ್ತಿದ್ದು ಇದನ್ನು ರೂ. 14,999 ಗೆ ಮಾರಾಟ ಮಾಡಲಾಗುತ್ತಿದೆ. ಅದರ ನಂತರ ಅನೇಕ ಬ್ಯಾಂಕ್ ಮತ್ತು ವಿನಿಮಯ ಕೊಡುಗೆಗಳೂ ಲಭ್ಯವಿದೆ. ಇವೆಲ್ಲದರ ಪ್ರಯೋಜನವನ್ನು ಪಡೆಯಲು ಸಾಧ್ಯವಾದರೆ ಈ ಸ್ಮಾರ್ಟ್ ಟಿವಿ ಬೆಲೆ ಗಣನೀಯವಾಗಿ ಕಡಿಮೆಯಾಗುತ್ತದೆ.

ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್: ಥಾಮ್ಸನ್ 9A ಸರಣಿ 40 ಇಂಚಿನ ಸ್ಮಾರ್ಟ್ ಟಿವಿ ಬ್ಯಾಂಕ್ ಆಫರ್:
ನೀವು ಥಾಮ್ಸನ್ 9A ಸರಣಿಯ 40 ಇಂಚಿನ ಸ್ಮಾರ್ಟ್ ಟಿವಿಯನ್ನು ಖರೀದಿಸಲು ICICI ಬ್ಯಾಂಕ್ ಅಥವಾ Axis ಬ್ಯಾಂಕ್ ಕಾರ್ಡ್ ಅನ್ನು ಬಳಸಿದರೆ, ನೀವು 1,500 ರೂಪಾಯಿಗಳ ರಿಯಾಯಿತಿಯನ್ನು ಪಡೆಯುತ್ತೀರಿ. ಅದರ ನಂತರ ಎಕ್ಸ್ ಚೇಂಜ್ ಆಫರ್ ಕೂಡ ಇದ್ದು, ಇದರಿಂದ ಟಿವಿಯ ಬೆಲೆ ಮತ್ತಷ್ಟು ಕಡಿಮೆಯಾಗಲಿದೆ.

ಇದನ್ನೂ ಓದಿ- Flipkart Big Billion Days 2022 Sale: ಟಾಪ್ ಬ್ರಾಂಡ್ ಫೋನ್‌ಗಳ ಮೇಲೆ ಭಾರೀ ರಿಯಾಯಿತಿ

ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್: ಥಾಮ್ಸನ್ 9A ಸರಣಿ 40 ಇಂಚಿನ ಸ್ಮಾರ್ಟ್ ಟಿವಿ ಎಕ್ಸ್‌ಚೇಂಜ್ ಆಫರ್
ಥಾಮ್ಸನ್ 9ಎ ಸಿರೀಸ್ 40 ಇಂಚಿನ ಸ್ಮಾರ್ಟ್ ಟಿವಿಯಲ್ಲಿ 11 ಸಾವಿರ ರೂಪಾಯಿಗಳ ಎಕ್ಸ್ ಚೇಂಜ್ ಆಫರ್ ಕೂಡ ಇದೆ. ನೀವು ಹಳೆಯ ಟಿವಿಯನ್ನು ವಿನಿಮಯ ಮಾಡಿಕೊಂಡರೆ ನಿಮಗೆ ಈ ರಿಯಾಯಿತಿ ಲಭ್ಯವಾಗಲಿದೆ. ಆದರೆ ಟಿವಿಯ ಸ್ಥಿತಿ ಉತ್ತಮವಾಗಿದ್ದರೆ ಮತ್ತು ಮಾಡೆಲ್ ಲೇಟೆಸ್ಟ್ ಆಗಿದ್ದರೆ ಮಾತ್ರ 11 ಸಾವಿರ ರೂ.ಗಳ ರಿಯಾಯಿತಿ ದೊರೆಯುತ್ತದೆ. ನೀವು ಪೂರ್ಣ ಕೊಡುಗೆಯ ಲಾಭ ಪಡೆಯಲು ಸಾಧ್ಯವಾದರೆ ಈ 40ಇಂಚಿನ ಸ್ಮಾರ್ಟ್ ಟಿವಿಯನ್ನು ಕೇವಲ 2,499 ರೂ.ಗೆ ಖರೀದಿಸಬಹುದು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News