Flipkart sale : ಅರ್ಧಕ್ಕಿಂತ ಕಡಿಮೆ ಬೆಲೆಗೆ ಖರೀದಿಸಿ Motorola 5G Smartphone!

Motorola ನ ಇತ್ತೀಚಿನ 5G ಸ್ಮಾರ್ಟ್‌ಫೋನ್, Moto G82 5G ಅನ್ನು ಇಂದಿನಿಂದ ಅಂದರೆ ಜೂನ್ 14 ರಿಂದ ಫ್ಲಿಪ್‌ಕಾರ್ಟ್‌ನಲ್ಲಿ ಮಾರಾಟಕ್ಕೆ ಲಭ್ಯವಾಗುವಂತೆ ಮಾಡಲಾಗಿದೆ. ಈ ಫೋನ್‌ನಲ್ಲಿ ಲಭ್ಯವಿರುವ ಆಫರ್‌ಗಳ ಬಗ್ಗೆ ತಿಳಿಯೋಣ.

Written by - Ranjitha R K | Last Updated : Jun 14, 2022, 03:50 PM IST
  • ಹೊಸ ಫೋನ್ ಖರೀದಿಗೆ ಇದು ಬೆಸ್ಟ್ ಟೈಮ್.
  • Moto G82 5G ಅನ್ನು ಅಗ್ಗದ ಬೆಲೆಗೆ ಖರೀದಿಸಿ
  • ಅರ್ಧಕ್ಕಿಂತ ಕಡಿಮೆ ಬೆಲೆಗೆ ಖರೀದಿಸಬಹುದು ಈ ಸ್ಮಾರ್ಟ್ ಫೋನ್
Flipkart sale : ಅರ್ಧಕ್ಕಿಂತ ಕಡಿಮೆ ಬೆಲೆಗೆ ಖರೀದಿಸಿ Motorola 5G Smartphone! title=
Flipkart sale (file photo)

ಬೆಂಗಳೂರು : Moto G82 5G First Sale in India on Flipkart : ನಿಮ್ಮ ಹಳೆಯ ಸ್ಮಾರ್ಟ್‌ಫೋನ್‌ ಬದಲಿಸಿ ಹೊಸ 5G ಸ್ಮಾರ್ಟ್‌ಫೋನ್ ಖರೀದಿಸುವ ಯೋಚನೆ ಇದೆಯಾ? ಹಾಗಿದ್ದರೆ ಹೊಸ ಫೋನ್ ಖರೀದಿಗೆ ಇದು ಬೆಸ್ಟ್ ಟೈಮ್. ಆನ್‌ಲೈನ್ ಶಾಪಿಂಗ್ ಪ್ಲಾಟ್‌ಫಾರ್ಮ್ ಫ್ಲಿಪ್‌ಕಾರ್ಟ್‌ನಲ್ಲಿ ಸ್ಮಾರ್ಟ್‌ಫೋನ್ ಬ್ರಾಂಡ್ ಮೊಟೊರೊಲಾ ಹೊಸ 5G ಸ್ಮಾರ್ಟ್‌ಫೋನ್ Moto G82 5G ಸೇಲ್ ಇಂದಿನಿಂದ ಆರಂಭವಾಗಿದೆ. 21,499. ರೂಗಳ ಈ ಸ್ಮಾರ್ಟ್‌ಫೋನ್ ಅನ್ನು ಅರ್ಧಕ್ಕಿಂತ ಕಡಿಮೆ ಬೆಲೆಗೆ ಇಲ್ಲಿ ಖರೀದಿಸಬಹುದು. 

Moto G82 5G ಅನ್ನು ಅಗ್ಗದ ಬೆಲೆಗೆ ಖರೀದಿಸಿ : 
ಮೊಟೊರೊಲಾ  5G ಸ್ಮಾರ್ಟ್‌ಫೋನ್, Moto G82 5G ಅನ್ನು ಫ್ಲಿಪ್‌ಕಾರ್ಟ್‌ನಲ್ಲಿ ಲಾಂಚಿಂಗ್  ಬೆಲೆ  21,499 ರೂ .ಗೆ ಖರೀದಿಸಬಹುದಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕ್ರೆಡಿಟ್ ಕಾರ್ಡ್ ಬಳಸಿ ಈ ಫೋನ್ ಖರೀದಿಸುವುದಾದರೆ, 1500 ರೂಪಾಯಿಗಳ ಇನ್ಸ್ಟಂಟ್ ರಿಯಾಯಿತಿ ಸಿಗಲಿದೆ. ಈ ರೀತಿಯಾಗಿ, ಈ ಸ್ಮಾರ್ಟ್‌ಫೋನ್‌ನ ಬೆಲೆಯು 19,999 ರೂ.ಗೆ  ಇಳಿಯುತ್ತದೆ. 

ಇದನ್ನೂ ಓದಿ : ಸ್ಮಾರ್ಟ್‌ಫೋನ್ ಬಳಕೆದಾರರೇ ಎಚ್ಚರ! ಹ್ಯಾಕರ್‌ಗಳ ಈ ತಂತ್ರದಿಂದ ಜಾಗರೂಕರಾಗಿರಿ

ಅರ್ಧಕ್ಕಿಂತ ಕಡಿಮೆ ಬೆಲೆಗೆ ಖರೀದಿಸಬಹುದು ಈ ಸ್ಮಾರ್ಟ್ ಫೋನ್ :
 ಅರ್ಧಕ್ಕಿಂತ ಕಡಿಮೆ ಬೆಲೆಗೆ ನೀವು ಈ ಮೊಟೊರೊಲಾ ಸ್ಮಾರ್ಟ್‌ಫೋನ್ ಅನ್ನು ಖರೀದಿಸಬೇಕಾದರೆ, ಈ ಡೀಲ್‌ನಲ್ಲಿ ಲಭ್ಯವಿರುವ ವಿನಿಮಯ ಕೊಡುಗೆಯ ಲಾಭವನ್ನು ಪಡೆಯಬೇಕಾಗುತ್ತದೆ. ನಿಮ್ಮ ಹಳೆಯ ಸ್ಮಾರ್ಟ್‌ಫೋನ್‌ ಬದಲಾಗಿ ಈ ಸ್ಮಾರ್ಟ್‌ಫೋನ್ ಖರೀದಿಸುವ ಮೂಲಕ 12,500 ರೂ. ವರೆಗೆ ಉಳಿಸಬಹುದು. ನೀವು ಎಕ್ಸ್‌ಚೇಂಜ್ ಆಫರ್‌ನ ಸಂಪೂರ್ಣ ಪ್ರಯೋಜನವನ್ನು ಪಡೆಯುವುದು ಸಾಧ್ಯವಾದರೆ ಈ ಫೋನ್‌ನ ಬೆಲೆ  7,499 ರೂ. ಆಗಿರರುತ್ತದೆ. 

Moto G82 5G ನ ವೈಶಿಷ್ಟ್ಯಗಳು  :
Moto G82 5Gಯಲ್ಲಿ 6.6-ಇಂಚಿನ Full HD + POLED  ಡಿಸ್ಪ್ಲೇ ನೀಡಲಾಗುತ್ತಿದೆ. 5,000mAh ಬ್ಯಾಟರಿ ಹೊಂದಿರುವ ಈ 5G ಫೋನ್‌ನಲ್ಲಿ, 33W ವೈರ್ಡ್ ಚಾರ್ಜಿಂಗ್ ಸಪೋರ್ಟ್ ನೀಡಲಾಗುತ್ತದೆ.  Moto G82 5G ನಲ್ಲಿ, ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ನೀಡಲಾಗುತ್ತಿದ್ದು ಇದರಲ್ಲಿ 50MP ಮಿನ್ ಸೆನ್ಸಾರ್,  8MP ಎರಡನೇ ಸೆನ್ಸಾರ್ ಮತ್ತು 2MP ಮೂರನೇ ಸೆನ್ಸಾರ್ ಅನ್ನು ಒಳಗೊಂಡಿರುತ್ತದೆ. ಈ  ರೆಯರ್  ಕ್ಯಾಮೆರಾ ಸೆಟಪ್‌ನೊಂದಿಗೆ, 16MP ಮುಂಭಾಗದ ಕ್ಯಾಮೆರಾವನ್ನು ಸಹ ನೀಡಲಾಗುತ್ತಿದೆ. ಈ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ 6GB RAM ಮತ್ತು 128GB ಇಂಟರ್ನಲ್ ಸ್ಟೋರೇಜ್ ನೊಂದಿಗೆ ಬರುತ್ತದೆ.

ಇದನ್ನೂ ಓದಿ : Portable Matress AC: ನಿಮಿಷಗಳಲ್ಲಿ ಕೋಣೆಯನ್ನು ತಂಪಾಗಿಸುವ ಬಜೆಟ್‌ ಎಸಿ

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
  

Trending News