Google Safe Browsing page: ಆಂಡ್ರಾಯ್ಡ್ ಬಳಕೆದಾರರಿಗೆ ಗುಡ್ ನ್ಯೂಸ್: ಈಗ ಮೊದಲಿಗಿಂತಲೂ ಸ್ಟ್ರಾಂಗ್ ಆಗಿರಲಿದೆ ಭದ್ರತೆ
Google Android Safe Browsing: ಗೂಗಲ್ ಆಂಡ್ರಾಯ್ಡ್ ಬಳಕೆದಾರರಿಗಾಗಿ ಸೇಫ್ ಬ್ರೌಸಿಂಗ್ ಪುಟವನ್ನು ಹೊರತರಲು ಪ್ರಾರಂಭಿಸಿದೆ. ಲಭ್ಯವಿರುವ ಮಾಹಿತಿಗಳ ಪ್ರಕಾರ, ಗೂಗಲ್ ಪಿಕ್ಸೆಲ್ ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ ಸ್ಮಾರ್ಟ್‌ಫೋನ್‌ಗಳಲ್ಲಿ ಈ ವೈಶಿಷ್ಟ್ಯವನ್ನು ಗುರುತಿಸಲಾಗಿದೆ.
Google Safe Browsing page For Android: ಆಂಡ್ರಾಯ್ಡ್ ಬಳಕೆದಾರರಿಗಾಗಿ ಗೂಗಲ್ 'ಆಂಡ್ರಾಯ್ಡ್ ಸೇಫ್ ಬ್ರೌಸಿಂಗ್' ಹೆಸರಿನ ಹೊಸ ಸುರಕ್ಷತಾ ಪುಟವನ್ನು ಪರಿಚಯಿಸಿದೆ. ಈ ಪುಟದಲ್ಲಿನ ಮಾಹಿತಿಯು ಇತ್ತೀಚಿನ ಸೋರಿಕೆಯ ಮೂಲಕ ಬೆಳಕಿಗೆ ಬಂದಿದೆ.
ಲಭ್ಯವಿರುವ ಮಾಹಿತಿಗಳ ಪ್ರಕಾರ, ಆಂಡ್ರಾಯ್ಡ್ ಸೇಫ್ ಬ್ರೌಸಿಂಗ್ ಪೇಜ್, Android ಬಳಕೆದಾರರಿಗೆ Google ನಲ್ಲಿ ಸುರಕ್ಷಿತ ಬ್ರೌಸಿಂಗ್ ಅನುಭವವನ್ನು ಒದಗಿಸುತ್ತದೆ. ಇದಲ್ಲದೆ, ಈ ವೈಶಿಷ್ಟ್ಯವು ನಕಲಿ ಮತ್ತು ದುರುದ್ದೇಶಪೂರಿತ ಲಿಂಕ್‌ಗಳ ಬಗ್ಗೆ ಅವರಿಗೆ ಎಚ್ಚರಿಕೆ ನೀಡುತ್ತದೆ ಎಂದು ತಿಳಿದುಬಂದಿದೆ.
ಪ್ರಸ್ತುತ, ಈ ಗೂಗಲ್ ಪರಿಚಯಿಸಿರುವ ಈ ಹೊಸ ವೈಶಿಷ್ಟ್ಯವು ಗೂಗಲ್ ಪಿಕ್ಸೆಲ್ ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ ಸ್ಮಾರ್ಟ್‌ಫೋನ್‌ಗಳಲ್ಲಿ ಕಂಡು ಬಂದಿದೆ. ಮುಂಬರುವ ಸಮಯದಲ್ಲಿ ಇತರ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳಿಗೂ ಈ ವೈಶಿಷ್ಟ್ಯವನ್ನು ಹೊರತರಲಾಗುವುದು ಎಂದು ನಂಬಲಾಗಿದೆ.
ಇದನ್ನೂ ಓದಿ- ಥ್ರೇಡ್ಸ್ ನಿಂದ ಇನ್ಸ್ಟಾ ರೀತಿಯಲ್ಲಿಯೇ ಪೋಸ್ಟಗಳನ್ನು ಸೇವ್ ಮಾಡುವ ಹೊಸ ವೈಶಿಷ್ಟ್ಯದ ಪರೀಕ್ಷೆ
@MishalRahman ಎಂಬ ಬಳಕೆದಾರರು X (Twitter) ಮೂಲಕ 'Android ಸೇಫ್ ಬ್ರೌಸಿಂಗ್' ಪುಟದ ಬಗ್ಗೆ ಮಾಹಿತಿ ನೀಡಿದ್ದಾರೆ. ಗೂಗಲ್ 'ಆಂಡ್ರಾಯ್ಡ್ ಸೇಫ್ ಬ್ರೌಸಿಂಗ್' ಪುಟವನ್ನು ಹೊರತರಲು ಪ್ರಾರಂಭಿಸಿದೆ. ಅಲ್ಲದೆ, ಈ ವೈಶಿಷ್ಟ್ಯವನ್ನು ಗೂಗಲ್ ಪಿಕ್ಸೆಲ್ ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ ಸ್ಮಾರ್ಟ್‌ಫೋನ್‌ಗಳಲ್ಲಿ ಗುರುತಿಸಲಾಗಿದೆ ಎಂದು ಬಳಕೆದಾರರು ಎಕ್ಸ್ ಪೋಸ್ಟ್ ನಲ್ಲಿ ಉಲ್ಲೇಖಿಸಿದ್ದಾರೆ.
Google Chrome ಬಳಕೆದಾರರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ ಭಾರತ ಸರ್ಕಾರ!
ಮೊದಲೇ ತಿಳಿಸಿದಂತೆ ಗೂಗಲ್ ಪಿಕ್ಸೆಲ್ ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ ಸ್ಮಾರ್ಟ್‌ಫೋನ್‌ಗಳಲ್ಲಿ ಈ ವೈಶಿಷ್ಟ್ಯವನ್ನು ಗುರುತಿಸಲಾಗಿದೆ. ನೀವು ಎರಡು ಬ್ರಾಂಡ್‌ಗಳಲ್ಲಿ ಯಾವುದಾದರೂ ಸ್ಮಾರ್ಟ್‌ಫೋನ್ ಹೊಂದಿದ್ದರೆ, ನೀವು ಈ ಹೊಸ ಸುರಕ್ಷತಾ ಪುಟವನ್ನು ಬಳಸಬಹುದಾಗಿದೆ. ಇದಕ್ಕಾಗಿ ನೀವು ಸೆಟ್ಟಿಂಗ್‌ಗಳಲ್ಲಿ ಭದ್ರತೆ ಮತ್ತು ಗೌಪ್ಯತೆ ಎಂಬ ಆಯ್ಕೆಗೆ ಹೋಗಿ, ಇದರ ನಂತರ, ಹೆಚ್ಚಿನ ಭದ್ರತೆ ಮತ್ತು ಗೌಪ್ಯತೆಗೆ ಹೋದರೆ ಇಲ್ಲಿ ನೀವು Android ಸುರಕ್ಷಿತ ಬ್ರೌಸಿಂಗ್ ಪುಟವನ್ನು ಕಾಣಬಹುದಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.