Maruti Jimny Discount Offers:ಮಾರುತಿ ಸುಜುಕಿ ತನ್ನ ಜಿಮ್ನಿಯ ಕಳೆದ ವರ್ಷದ ಸ್ಟಾಕ್ ಅನ್ನು ಕ್ಲಿಯರ್ ಮಾಡಲು ಪ್ರಯತ್ನಿಸುತ್ತಿದೆ. ಈ ಹಿನ್ನೆಲೆಯಲ್ಲಿ MY2023 Jimny ಮೇಲೆ 1.5 ಲಕ್ಷದವರೆಗೆ ರಿಯಾಯಿತಿಯನ್ನು ನೀಡುತ್ತಿದೆ. 2024 ಜಿಮ್ನಿಯ ಬೆಲೆ 12.74 ದಿಂದ 14.79 ಲಕ್ಷದವರೆಗೆ ಇದೆ.
ಕಂಪನಿಯು 2024 ಜಿಮ್ನಿ ಮೇಲೆ ಭಾರೀ ರಿಯಾಯಿತಿಯನ್ನು ನೀಡುತ್ತಿದೆ. Nexa ಡೀಲರ್‌ಗಳು MY2023 Jimny ಮೇಲೆ 1.5 ಲಕ್ಷ ರೂಪಾಯಿಗಳವರೆಗೆ ನಗದು ರಿಯಾಯಿತಿ ನೀಡುತ್ತಿದ್ದಾರೆ. ಆದರೆ 2024 ಮಾಡೆಲ್ ಮೇಲೆ 50,000 ರೂಪಾಯಿಗಳವರೆಗೆ ನಗದು ರಿಯಾಯಿತಿ ಸಿಗುತ್ತಿದೆ. ಇದಲ್ಲದೆ, ಕೆಲವು ಕಂಪನಿಗಳ ಉದ್ಯೋಗಿಗಳಿಗೆ 3000 ರೂಪಾಯಿಯ ಕಾರ್ಪೊರೇಟ್ ರಿಯಾಯಿತಿಯನ್ನು ನೀಡಲಾಗುತ್ತಿದೆ.
ಇದನ್ನೂ ಓದಿ : WhatsApp: ವಾಟ್ಸಾಪ್‌ನಲ್ಲಿ ಯಾರಾದ್ರೂ ನಿಮ್ಮನ್ನ ಬ್ಲಾಕ್ ಮಾಡಿದ್ದಾರಾ? ಈ ರೀತಿ ಪತ್ತೆ ಹಚ್ಚಿ
ಜಿಮ್ನಿ ಕೇವಲ ಒಂದು ಎಂಜಿನ್ ಆಯ್ಕೆಯೊಂದಿಗೆ ಬರುತ್ತದೆ. ಇದು 1.5 ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಆಗಿದೆ. ಈ ಎಂಜಿನ್ 103bhp ಪವರ್ ಮತ್ತು 134.2Nm ಟಾರ್ಕ್ ಅನ್ನು ಜನರೇಟ್ ಮಾಡುತ್ತದೆ. ಈ ಎಂಜಿನ್‌ನೊಂದಿಗೆ 5-ಸ್ಪೀಡ್ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್ ಅಥವಾ 4-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಟ್ರಾನ್ಸ್ ಮಿಶನ್ 4 ಸ್ಪೀಡ್ ಟಾರ್ಕ್ ಆಯ್ಕೆಯನ್ನು ಆಯ್ಕೆ ಮಾಡಬಹುದು.
ಮಾರುತಿ ಸುಜುಕಿ ಪ್ರಕಾರ, ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್ ಹೊಂದಿರುವ ಜಿಮ್ನಿ 16.94 ಕಿಮೀ/ಲೀಟರ್ ಮತ್ತು ಜಿಮ್ನಿ ಆಟೋಮ್ಯಾಟಿಕ್ ಟ್ರಾನ್ಸ್‌ಮಿಷನ್ 16.39 ಕಿಮೀ/ಲೀಟರ್ ವರೆಗೆ ಮೈಲೇಜ್ ನೀಡಬಲ್ಲದು. ಈ SUV ಸ್ಟ್ಯಾಂಡರ್ಡ್ ಆಗಿ 4-ವೀಲ್-ಡ್ರೈವ್ ಸಿಸ್ಟಮ್ ನೊಂದಿಗೆ ಬರುತ್ತದೆ. ಇದು ಝೀಟಾ ಮತ್ತು ಆಲ್ಫಾ ಎನ್ನುವ ಎರಡು ರೂಪಾಂತರಗಳಲ್ಲಿ ಲಭ್ಯವಿದೆ.
ಜಿಮ್ನಿ ಟಾಪ್ ಮಾದರಿಯಲ್ಲಿ ಹಲವು ಉತ್ತಮ ವೈಶಿಷ್ಟ್ಯಗಳು ಲಭ್ಯವಿವೆ. ಇದು ಎಲ್‌ಇಡಿ ಹೆಡ್‌ಲ್ಯಾಂಪ್‌ಗಳು, ಫಾಗ್ ಲ್ಯಾಂಪ್‌ಗಳು, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ಪುಶ್ ಸ್ಟಾರ್ಟ್/ಸ್ಟಾಪ್ ಇಗ್ನಿಷನ್ ಮತ್ತು ಲೆದರ್ ರ್ಯಾಪ್ದ್ ಸ್ಟೀರಿಂಗ್ ವೀಲ್ ಮುಂತಾದ ಫೀಚರ್ ಗಳನ್ನೂ ಒಳಗೊಂಡಿದೆ. SUV ವೈರ್‌ಲೆಸ್ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ಪ್ಲೇ ಜೊತೆಗೆ 9 ಇಂಚಿನ ಟಚ್‌ಸ್ಕ್ರೀನ್ ಡಿಸ್ಪ್ಲೇ ಮತ್ತು ಆರ್ಕಾಮ್ಸ್‌ನ ಸೌಂಡ್ ಸಿಸ್ಟಮ್ ಜೊತೆಗೆ ಬರುತ್ತದೆ.
ಇದನ್ನೂ ಓದಿ : WhatsAppನಲ್ಲಿ ಬಂದಿದೆ ಹೊಸ ವೈಶಿಷ್ಟ್ಯ! ಫೋಟೋವನ್ನು ಸುಲಭವಾಗಿ ಸ್ಟಿಕರ್ ಆಗಿ ಬದಲಿಸಬಹುದು !
ಇನ್ನು ಝೀಟಾ ಟ್ರಿಮ್ ವೈರ್‌ಲೆಸ್ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ಪ್ಲೇ ಜೊತೆಗೆ 7-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಮ್ಯನ್ಯುವೆಲ್ ಕೈಮೆಟ್ ಕಂಟ್ರೋಲ್ ನೊಂದಿಗೆ ಬರುತ್ತದೆ. ಎರಡೂ ರೂಪಾಂತರಗಳು ಆರು ಏರ್‌ಬ್ಯಾಗ್‌ಗಳು, ಎಬಿಎಸ್ ಮತ್ತು ಇಬಿಡಿ, ಇಎಸ್‌ಪಿ, ಹಿಲ್ ಹೋಲ್ಡ್ ಅಸಿಸ್ಟ್, ಹಿಲ್ ಡಿಸೆಂಟ್ ಕಂಟ್ರೋಲ್ ಮತ್ತು ರಿಯರ್ ಪಾರ್ಕಿಂಗ್ ಕ್ಯಾಮೆರಾದಂತಹ ಹಲವು ವೈಶಿಷ್ಟ್ಯಗಳೊಂದಿಗೆ ಬರುತ್ತವೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.