ಟೆಲಿಗ್ರಾಮ್ ಬಳಕೆದಾರರಿಗೆ ಶಾಕಿಂಗ್ ನ್ಯೂಸ್... ಭಾರತದಲ್ಲಿ ಬ್ಯಾನ್ ಆಗುತ್ತಾ ಜನಪ್ರಿಯ ಮೆಸೇಜಿಂಗ್ ಆಪ್?
Telegram Ban in India: ಗೃಹ ವ್ಯವಹಾರಗಳ ಸಚಿವಾಲಯ (MHA) ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ಅಡಿಯಲ್ಲಿ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ (I4C) ಈ ತನಿಖೆಯನ್ನು ನಡೆಸುತ್ತಿದೆ.
Telegram Ban in India: ಸುಲಿಗೆ ಮತ್ತು ಜೂಜಾಟದಂತಹ ಚಟುವಟಿಕೆಗಳಿಗೆ ಟೆಲಿಗ್ರಾಮ್ ಬಳಸಲಾಗುತ್ತಿದೆ ಎಂಬ ಕಳವಳವನ್ನು ಭಾರತ ಸರ್ಕಾರವು ವ್ಯಕ್ತಪಡಿಸಿದ್ದು, ಈ ಹಿನ್ನೆಲೆಯೆಲ್ಲಿ ಅಪ್ಲಿಕೇಶನ್ ಅನ್ನು ತನಿಖೆ ನಡೆಸಲಾಗುತ್ತಿದೆ ಎಂದು ಮನಿ ಕಂಟ್ರೋಲ್ ವರದಿ ಮಾಡಿದೆ. ಇನ್ನು ಈ ತನಿಖೆಯ ಫಲಿತಾಂಶದ ಆಧಾರದಲ್ಲಿ ಭಾರತದಲ್ಲಿ ಟೆಲಿಗ್ರಾಮ್ ನಿಷೇಧಿಸುವ ಸಾಧ್ಯತೆ ಬಗ್ಗೆ ಅಧಿಕಾರಿಯೊಬ್ಬರು ಸುಳಿವು ನೀಡಿದ್ದಾರೆ.
ಗೃಹ ವ್ಯವಹಾರಗಳ ಸಚಿವಾಲಯ (MHA) ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ಅಡಿಯಲ್ಲಿ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ (I4C) ಈ ತನಿಖೆಯನ್ನು ನಡೆಸುತ್ತಿದೆ.
ಇದನ್ನೂ ಓದಿ: ಈ ಮೂರು ವಿಷಯಗಳನ್ನು ಗೂಗಲ್ʼನಲ್ಲಿ ಸರ್ಚ್ ಮಾಡಲೇಬಾರದು: ಅಪ್ಪಿತಪ್ಪಿ ಮಾಡಿದರಂತೂ ಜೈಲೇ ಗತಿ
ಟೆಲಿಗ್ರಾಮ್ ಸಂಸ್ಥಾಪಕ ಮತ್ತು ಸಿಇಒ ಪಾವೆಲ್ ಡುರೊವ್ ಅವರನ್ನು ಆಗಸ್ಟ್ 24 ರಂದು ಪ್ಯಾರಿಸ್ʼನಲ್ಲಿ ಬಂಧಿಸಲಾಗಿತ್ತು. ಈ ಬೆಳವಣಿಗೆ ಬಳಿಕ ಭಾರತ ಸರ್ಕಾರ ತನಿಖೆಯ ನಿರ್ಧಾರವನ್ನು ತೆಗೆದುಕೊಂಡಿದೆ.
ಟೆಲಿಗ್ರಾಂ ಅಪ್ಲಿಕೇಶನ್ ಮಾಡರೇಶನ್ ನೀತಿಗಳನ್ನು ಅನುಸರಿಸುವಲ್ಲಿ ವಿಫಲವಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದಲ್ಲದೆ, ಭಾರತದಲ್ಲಿ ಯುಜಿಸಿ-ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ಟೆಲಿಗ್ರಾಮ್ ಭಾಗಿಯಾಗಿತ್ತು. ಈ ವಿವಾದ ವಿದ್ಯಾರ್ಥಿ ಪ್ರತಿಭಟನೆ ಮತ್ತು ಸುಪ್ರೀಂ ಕೋರ್ಟ್ ಮಧ್ಯಪ್ರವೇಶಕ್ಕೆ ಕಾರಣವಾಗಿತ್ತು. ಜೊತೆಗೆ ಸೋರಿಕೆಯಾದ ಪ್ರಶ್ನೆ ಪತ್ರಿಕೆಯನ್ನು ಟೆಲಿಗ್ರಾಂನಲ್ಲಿ 5,000 ರಿಂದ 10,000 ರೂ.ಗೆ ಮಾರಾಟ ಮಾಡಲಾಗುತ್ತಿದೆ ಎಂಬ ಆಘಾತಕಾರಿ ಸುದ್ದಿ ಹೊರಬಿದ್ದಿತ್ತು.
ಇದನ್ನೂ ಓದಿ: Google Map Voice: ಗೂಗಲ್ ಮ್ಯಾಪ್'ನಲ್ಲಿ ದಾರಿ ಸೂಚಿಸುವ ಮಹಿಳೆಯ ಧ್ವನಿ ಯಾರದ್ದು ಗೊತ್ತಾ?
ಇದೀಗ ಭಾರತ ಸರ್ಕಾರ ತನಿಖೆ ನಡೆಸುತ್ತಿದ್ದು, ಫಲಿತಾಂಶಗಳ ಆಧಾರದ ಮೇಲೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ವರದಿ ಹೇಳಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews