ಭಾರತದ ಪ್ರಥಮ 3ಡಿ ಬಯೋಪ್ರಿಂಟಿಂಗ್ ಉತ್ಕೃಷ್ಟತಾ ಕೇಂದ್ರಕ್ಕೆ ಸಚಿವ ಅಶ್ವತ್ಥ ನಾರಾಯಣ ಚಾಲನೆ

ಈ ಸಂದರ್ಭದಲ್ಲಿ ಮಾತನಾಡಿದ ಅವರು, ವೈದ್ಯಕೀಯ ಮತ್ತು ಆರೋಗ್ಯ ಸೇವೆಗಳ ಕ್ಷೇತ್ರದಲ್ಲಿ ಈಗ ಅಂಗಾಂಶಗಳು ಮತ್ತು ಜೀವಕೋಶಗಳನ್ನು ಆಧರಿಸಿದ ಚಿಕಿತ್ಸೆಗಳು ಮುಂಚೂಣಿಗೆ ಬರುತ್ತಿದ್ದು, ಇವು ಕ್ರಾಂತಿಕಾರಕ ಬದಲಾವಣೆಗಳನ್ನು ತರುತ್ತಿವೆ. ಮುಂಬರುವ ವರ್ಷಗಳಲ್ಲಿ ಆಯಾ ವ್ಯಕ್ತಿಗಳ ಶರೀರ ಸ್ವಭಾವವನ್ನು ಆಧರಿಸಿ, ರೋಗಗಳನ್ನು ಗುಣಪಡಿಸುವತಹ ನಿರ್ದಿಷ್ಟ ಬಗೆಯ ಚಿಕಿತ್ಸಾ ಕ್ರಮಗಳು ಜನಪ್ರಿಯವಾಗಲಿದೆ. ಇದರಲ್ಲಿ 3ಡಿ ಬಯೋಪ್ರಿಂಟಿಂಗ್‌ ಮಹತ್ತರ ಪಾತ್ರ ವಹಿಸಲಿದೆ ಎಂದರು.

Written by - Prashobh Devanahalli | Edited by - Bhavishya Shetty | Last Updated : Dec 9, 2022, 06:51 PM IST
    • ಭಾರತೀಯ ವಿಜ್ಞಾನ ಸಂಸ್ಥೆ ಮತ್ತು ಸೆಲ್‌ ಲಿಂಕ್‌ ಕಂಪನಿಗಳ ಸಹಯೋಗ
    • ಭಾರತದ ಪ್ರಪ್ರಥಮ 3ಡಿ ಬಯೋಪ್ರಿಂಟಿಂಗ್‌ ಉತ್ಕೃಷ್ಟತಾ ಕೇಂದ್ರ
    • ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ಉದ್ಘಾಟನೆ
ಭಾರತದ ಪ್ರಥಮ 3ಡಿ ಬಯೋಪ್ರಿಂಟಿಂಗ್ ಉತ್ಕೃಷ್ಟತಾ ಕೇಂದ್ರಕ್ಕೆ ಸಚಿವ ಅಶ್ವತ್ಥ ನಾರಾಯಣ ಚಾಲನೆ title=
3D Bioprinting Center of Excellence

ಬೆಂಗಳೂರು: ಭಾರತೀಯ ವಿಜ್ಞಾನ ಸಂಸ್ಥೆ ಮತ್ತು ಸೆಲ್‌ ಲಿಂಕ್‌ ಕಂಪನಿಗಳ ಸಹಯೋಗದಲ್ಲಿ ಐಐಎಸ್ಸಿಯಲ್ಲಿ ಸ್ಥಾಪಿಸಿರುವ ಭಾರತದ ಪ್ರಪ್ರಥಮ 3ಡಿ ಬಯೋಪ್ರಿಂಟಿಂಗ್‌ ಉತ್ಕೃಷ್ಟತಾ ಕೇಂದ್ರವನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ಅವರು ಶುಕ್ರವಾರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ವೈದ್ಯಕೀಯ ಮತ್ತು ಆರೋಗ್ಯ ಸೇವೆಗಳ ಕ್ಷೇತ್ರದಲ್ಲಿ ಈಗ ಅಂಗಾಂಶಗಳು ಮತ್ತು ಜೀವಕೋಶಗಳನ್ನು ಆಧರಿಸಿದ ಚಿಕಿತ್ಸೆಗಳು ಮುಂಚೂಣಿಗೆ ಬರುತ್ತಿದ್ದು, ಇವು ಕ್ರಾಂತಿಕಾರಕ ಬದಲಾವಣೆಗಳನ್ನು ತರುತ್ತಿವೆ. ಮುಂಬರುವ ವರ್ಷಗಳಲ್ಲಿ ಆಯಾ ವ್ಯಕ್ತಿಗಳ ಶರೀರ ಸ್ವಭಾವವನ್ನು ಆಧರಿಸಿ, ರೋಗಗಳನ್ನು ಗುಣಪಡಿಸುವತಹ ನಿರ್ದಿಷ್ಟ ಬಗೆಯ ಚಿಕಿತ್ಸಾ ಕ್ರಮಗಳು ಜನಪ್ರಿಯವಾಗಲಿದೆ. ಇದರಲ್ಲಿ 3ಡಿ ಬಯೋಪ್ರಿಂಟಿಂಗ್‌ ಮಹತ್ತರ ಪಾತ್ರ ವಹಿಸಲಿದೆ ಎಂದರು.

ಇದನ್ನೂ ಓದಿ: ಈಕೆ ಯಾರು ಗೊತ್ತೇ...! ದೂರವಿದ್ದರೂ ಸೆಳೆಯುತ್ತಿದೆ ವರ್ಷಿಣಿ ಆಕರ್ಷಿತ ಸೌಂದರ್ಯ

ಈ ಉತ್ಕೃಷ್ಟತಾ ಕೇಂದ್ರವು ಆಧುನಿಕ ಚಿಕಿತ್ಸಾ ಕ್ರಮಗಳಿಗೆ ಸಂಬಂಧಿಸಿದ ಸಂಶೋಧನಾ ಉಪಕ್ರಮಗಳನ್ನು ಪರಿಚಯಿಸಲಿದೆ. ಜತೆಗೆ ಆರೋಗ್ಯಸೇವೆಗಳ ಕ್ಷೇತ್ರದಲ್ಲಿರುವ ವೃತ್ತಿಪರರು ಹಾಗೂ ಉಳಿದವರಿಗೆ ವೈಜ್ಞಾನಿಕ ತರಬೇತಿ ಇಲ್ಲಿ ಸಿಗಲಿದೆ. 3ಡಿ ಬಯೋಪ್ರಿಂಟಿಂಗ್‌ ತಂತ್ರಜ್ಞಾನದ ಬಳಕೆಯನ್ನು ಪ್ರಚುರಪಡಿಸಲು ಭಾರತೀಯ ವಿಜ್ಞಾನ ಸಂಸ್ಥೆ ಮತ್ತು ಅಗತ್ಯವಿರುವ ಉಳಿದೆಡೆಗಳಲ್ಲಿ ಕಾರ್ಯಾಗಾರಗಳನ್ನು ಕೂಡ ಈ ಕೇಂದ್ರವು ಹಮ್ಮಿಕೊಳ್ಳಲಿದೆ ಎಂದು ಅವರು ತಿಳಿಸಿದರು.

ಜೈವಿಕ ತಂತ್ರಜ್ಞಾನ, ಸಂಶೋಧನೆ ಮತ್ತು ಅಭಿವೃದ್ಧಿಗಳ ರಾಜಧಾನಿಯಾಗಿ ಬೆಂಗಳೂರು ಪ್ರತಿಷ್ಠಾಪಿತವಾಗಿದೆ. ಈ ಉತ್ಕೃಷ್ಟತಾ ಕೇಂದ್ರದಲ್ಲಿ ಟಿಶ್ಯೂ ಎಂಜಿನಿಯರಿಂಗ್‌, ಔಷಧಗಳ ಆವಿಷ್ಕಾರ, ಮೆಟೀರಿಯಲ್‌ ಸೈನ್ಸ್‌ನ ಬೆಳವಣಿಗೆ ಸುಗಮವಾಗಿ ನಡೆಯಲಿದೆ. ಇದರಿಂದಾಗಿ ದೇಶದ ಆರೋಗ್ಯಸೇವೆಗಳ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳಾಗಲಿವೆ. ಇದರಲ್ಲಿ ಭಾರತೀಯ ವಿಜ್ಞಾನ ಸಂಸ್ಥೆಯ ಬಯೋಸಿಸ್ಟಮ್ಸ್ ಸೈನ್ಸ್ ಅಂಡ್‌ ಎಂಜಿನಿಯರಿಂಗ್‌ ಕೇಂದ್ರವು ಸಕ್ರಿಯ ಪಾತ್ರ ವಹಿಸಲಿದೆ ಎಂದು ಸಚಿವರು ನುಡಿದರು.

ಇದನ್ನೂ ಓದಿ: ODI ವಿಶ್ವಕಪ್‌ಗೆ ಮುನ್ನ ರೋಹಿತ್-ದ್ರಾವಿಡ್ ಮುಂದಿವೆ ಈ ಸವಾಲುಗಳು!

ಕಾರ್ಯಕ್ರಮದಲ್ಲಿ ಐಐಎಸ್ಸಿ ನಿರ್ದೇಶಕ ಪ್ರೊ.ಗೋವಿಂದನ್ ರಂಗರಾಜನ್‌, ಎಚ್‌ಸಿಜಿ ಕ್ಯಾನ್ಸರ್ ಆಸ್ಪತ್ರೆಯ ಸಂಶೋಧನಾ ವಿಭಾಗದ ಮುಖ್ಯಸ್ಥ ಡಾ.ವಿಶಾಲ್‌ ರಾವ್‌, ಸೆಲ್‌ಲಿಂಕ್‌ ಕಂಪನಿಯ ಏಷ್ಯಾ-ಪೆಸಿಫಿಕ್‌ ಮುಖ್ಯಸ್ಥೆ ಟೊಮೋಕೊ ಬೈಲುಂಡ್‌, ಮಾರುಕಟ್ಟೆ ವಿಭಾಗದ ಮುಖ್ಯಸ್ಥ ರೂಪಕ್‌ ಪೊದ್ದಾರ್‍‌ ಉಪಸ್ಥಿತರಿದ್ದರು.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News