ಮೊದಲಿಗೆ Tata Nexon ಕಾಂಪ್ಯಾಕ್ಟ್ ಎಸ್ಯುವಿ ಸ್ಮಾರ್ಟ್ ಪ್ಲಸ್ (ಪೆಟ್ರೋಲ್) ಆಟೋಮೆಟಿಕ್ ರೂಪಾಂತರ ರೂ.10 ಲಕ್ಷ ಎಕ್ಸ್ ಶೋರೂಂ (ಮುಂಬೈ) ಬೆಲೆಯನ್ನು ಹೊಂದಿದ್ದು, 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಪಡೆದಿದೆ. ಇದು 120 ಹೆಚ್ಪಿ ಗರಿಷ್ಠ ಪವರ್ (ಶಕ್ತಿ) ಹಾಗೂ 170 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದ್ದು, 6-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ.
Maruti Suzuki Fronx ರೂ.7.51 ಲಕ್ಷದಿಂದ ರೂ.13.04 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಲಭ್ಯವಿದೆ. ಇದು 1-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.2-ಲೀಟರ್ ಡುಯಲ್ಜೆಟ್ ಪೆಟ್ರೂಲ್ ಎಂಜಿನ್ ಆಯ್ಕೆಯಲ್ಲಿ ದೊರೆಯಲಿದ್ದು, ರೂಪಾಂತರಗಳಿಗೆ ಅನುಗುಣವಾಗಿ 5-ಸ್ವೀಡ್ ಅಥವಾ 6-ಸ್ವೀಡ್ ಆಟೋಮೆಟಿಕ್ ಗೇರ್ಬಾಕ್ಸ್ ಅನ್ನು ಹೊಂದಿದೆ. 20.1 ರಿಂದ 22.89 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ.
ಇದನ್ನು ಓದಿ : PBKS Vs LSG : ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕೆಎಲ್ ರಾಹುಲ್ ಬದಲಿಗೆ ಪೂರನ್ ಲಕ್ನೋ ನಾಯಕತ್ವ ವಹಿಸಿಕೊಂಡಿದ್ದೇಕೆ ?
Hyundai Exter ಎಸ್ಯುವಿ, ರೂ.6.13 ಲಕ್ಷದಿಂದ ರೂ.10.28 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದ್ದು, 1.2-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಒಳಗೊಂಡಿದೆ. 83 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 114 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ 5-ಸ್ವೀಡ್ ಮ್ಯಾನುವಲ್ ಗೇರ್ಬಾಕ್ಸ್ ಆಯ್ಕೆಯಲ್ಲಿಯೂ ಲಭ್ಯವಿದ್ದು, 19.2 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ.
Tata Punch ಕಾರು ರೂ.6.13 ಲಕ್ಷದಿಂದ ರೂ.10.20 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ. ಇದರ 1.2-ಲೀಟರ್ ಪೆಟ್ರೋಲ್ ಎಂಜಿನ್, 88 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 115 ಎನ್ಎಂ ಪೀಕ್ ಟಾರ್ಕ್ ಹೊರಹಾಕಲಿದ್ದು, 5-ಸ್ವೀಡ್ ಆಟೋಮೆಟಿಕ್ ಗೇರ್ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿದೆ. ಮೈಲೇಜ್ ವಿಚಾರಕ್ಕೆ ಬರುವುದಾದರೆ 18.8 ಕೆಎಂಪಿಎಲ್ ಇಂಧನ ದಕ್ಷತೆಯನ್ನು ಹೊಂದಿದೆ.
Nissan Magnite ರೂ.6 ಲಕ್ಷದಿಂದ ರೂ.11.27 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಹೊಂದಿದೆ. ಈ ಎಸ್ಯುವಿ 1-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದ್ದು, 5-ಸ್ವೀಡ್ ಆಟೋಮೆಟಿಕ್ ಗೇರ್ಬಾಕ್ಸ್ ಅನ್ನು ಪಡೆದಿದೆ. ಜೊತೆಗೆ 19.70 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ. 8-ಇಂಚಿನ ಟಚ್ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಸೇರಿ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.
ಇದನ್ನು ಓದಿ : LSG Vs PBKS : ತವರಿನಲ್ಲಿಯೇ ಗೆಲುವಿನ ಖಾತೆ ತೆರೆದ ಲಕ್ನೋ : 21ರನ್ ಗಳಿಂದ ಗೆಲುವು
Renault Kiger ರೂ.6 ಲಕ್ಷದಿಂದ ರೂ.11.23 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಲಭ್ಯವಿದೆ. 1-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, 5-ಸ್ವೀಡ್ ಆಟೋಮೆಟಿಕ್ ಗೇರ್ಬಾಕ್ಸ್ ಅನ್ನು ಪಡೆದಿದೆ. ಈ ಕಾರು 8-ಇಂಚಿನ ಟಚ್ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.