ಮೊದಲಿಗೆ Tata Nexon ಕಾಂಪ್ಯಾಕ್ಟ್ ಎಸ್‌ಯುವಿ  ಸ್ಮಾರ್ಟ್ ಪ್ಲಸ್ (ಪೆಟ್ರೋಲ್) ಆಟೋಮೆಟಿಕ್ ರೂಪಾಂತರ ರೂ.10 ಲಕ್ಷ ಎಕ್ಸ್ ಶೋರೂಂ (ಮುಂಬೈ) ಬೆಲೆಯನ್ನು ಹೊಂದಿದ್ದು, 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಪಡೆದಿದೆ. ಇದು 120 ಹೆಚ್‌ಪಿ ಗರಿಷ್ಠ ಪವರ್ (ಶಕ್ತಿ) ಹಾಗೂ 170 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದ್ದು, 6-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ.


COMMERCIAL BREAK
SCROLL TO CONTINUE READING

Maruti Suzuki Fronx ರೂ.7.51 ಲಕ್ಷದಿಂದ ರೂ.13.04 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಲಭ್ಯವಿದೆ. ಇದು 1-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.2-ಲೀಟರ್ ಡುಯಲ್ಜೆಟ್ ಪೆಟ್ರೂಲ್ ಎಂಜಿನ್ ಆಯ್ಕೆಯಲ್ಲಿ ದೊರೆಯಲಿದ್ದು, ರೂಪಾಂತರಗಳಿಗೆ ಅನುಗುಣವಾಗಿ 5-ಸ್ವೀಡ್ ಅಥವಾ 6-ಸ್ವೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ ಅನ್ನು ಹೊಂದಿದೆ. 20.1 ರಿಂದ 22.89 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ. 


ಇದನ್ನು ಓದಿ : PBKS Vs LSG : ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕೆಎಲ್ ರಾಹುಲ್ ಬದಲಿಗೆ ಪೂರನ್ ಲಕ್ನೋ ನಾಯಕತ್ವ ವಹಿಸಿಕೊಂಡಿದ್ದೇಕೆ ?


Hyundai Exter ಎಸ್‌ಯುವಿ, ರೂ.6.13 ಲಕ್ಷದಿಂದ ರೂ.10.28 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದ್ದು, 1.2-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಒಳಗೊಂಡಿದೆ. 83 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 114 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ 5-ಸ್ವೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ಆಯ್ಕೆಯಲ್ಲಿಯೂ ಲಭ್ಯವಿದ್ದು, 19.2 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ.


Tata Punch ಕಾರು ರೂ.6.13 ಲಕ್ಷದಿಂದ ರೂ.10.20 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ. ಇದರ 1.2-ಲೀಟರ್ ಪೆಟ್ರೋಲ್ ಎಂಜಿನ್, 88 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 115 ಎನ್ಎಂ ಪೀಕ್ ಟಾರ್ಕ್ ಹೊರಹಾಕಲಿದ್ದು, 5-ಸ್ವೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ ಆಯ್ಕೆಯಲ್ಲಿ ಲಭ್ಯವಿದೆ. ಮೈಲೇಜ್ ವಿಚಾರಕ್ಕೆ ಬರುವುದಾದರೆ 18.8 ಕೆಎಂಪಿಎಲ್ ಇಂಧನ ದಕ್ಷತೆಯನ್ನು ಹೊಂದಿದೆ.


Nissan Magnite ರೂ.6 ಲಕ್ಷದಿಂದ ರೂ.11.27 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಹೊಂದಿದೆ. ಈ ಎಸ್‌ಯುವಿ 1-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದ್ದು, 5-ಸ್ವೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ ಅನ್ನು ಪಡೆದಿದೆ. ಜೊತೆಗೆ 19.70 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.


ಇದನ್ನು ಓದಿ : LSG Vs PBKS : ತವರಿನಲ್ಲಿಯೇ ಗೆಲುವಿನ ಖಾತೆ ತೆರೆದ ಲಕ್ನೋ : 21ರನ್ ಗಳಿಂದ ಗೆಲುವು


Renault Kiger ರೂ.6 ಲಕ್ಷದಿಂದ ರೂ.11.23 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಲಭ್ಯವಿದೆ. 1-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, 5-ಸ್ವೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ ಅನ್ನು ಪಡೆದಿದೆ. ಈ ಕಾರು 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.