Realme C75 5G ಸ್ಮಾರ್ಟ್‌ಫೋನ್ ಬಿಡುಗಡೆ: ಈ ಬಜೆಟ್ ಸ್ನೇಹಿ ಫೋನ್‌ನಲ್ಲಿದೆ ಹಲವು ವೈಶಿಷ್ಟ್ಯ

Realme C75 5G: ಹೊಸ 5ಜಿ ಸ್ಮಾರ್ಟ್‌ಫೋನ್ ಖರೀದಿಸಲು ಯೋಚಿಸುತ್ತಿರುವವರಿಗೆ ರಿಯಲ್ ಮೀ ಅತ್ಯಾಕರ್ಷಕ ವೈಶಿಷ್ಟ್ಯಗಳುಳ್ಳ ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್ ಅನ್ನು ಪರಿಚಯಿಸಿದೆ. 

Written by - Yashaswini V | Last Updated : May 6, 2025, 02:05 PM IST
  • ರಿಯಲ್ ಮೀ ಭಾರತದಲ್ಲಿ ಹೊಸ 5ಜಿ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ.
  • ಈ 5ಜಿ ಸ್ಮಾರ್ಟ್‌ಫೋನ್ ಬೆಲೆಯೂ ಕೂಡ ಅತ್ಯಾಕರ್ಷಕವಾಗಿದೆ
  • ಅಷ್ಟೇ ಅಲ್ಲ, ಇದು ಹಲವು ವೈಶಿಷ್ಟ್ಯಗಳನ್ನು ಕೂಡ ಒಳಗೊಂಡಿದೆ.
Realme C75 5G ಸ್ಮಾರ್ಟ್‌ಫೋನ್ ಬಿಡುಗಡೆ: ಈ ಬಜೆಟ್ ಸ್ನೇಹಿ ಫೋನ್‌ನಲ್ಲಿದೆ ಹಲವು ವೈಶಿಷ್ಟ್ಯ

Realme C75 5G: ಭಾರತೀಯ ಫೋನ್ ಮಾರುಕಟ್ಟೆಯಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ರಿಯಲ್ ಮೀ ಸದ್ದಿಲ್ಲದೇ ತನ್ನ ಸಿ ಸರಣಿಯ ಇತ್ತೀಚಿನ ಸ್ಮಾರ್ಟ್‌ಫೋನ್ Realme C75 5G ಅನ್ನು ಬಿಡುಗಡೆ ಮಾಡಿದೆ. ಹಲವು ಹೊಸ ವೈಶಿಷ್ಟ್ಯಗಳುಳ್ಳ ಈ ಸ್ಮಾರ್ಟ್‌ಫೋನ್ ಬೆಲೆಯೂ ಕೂಡ ಬಜೆಟ್ ಸ್ನೇಹಿ ಆಗಿದೆ. Realme C75 5G ಸ್ಮಾರ್ ಕುರಿತ ಪ್ರಮುಖ ಮಾಹಿತಿಗಳು ಇಲ್ಲಿವೆ. 

Add Zee News as a Preferred Source

Realme C75 5G ವೈಶಿಷ್ಟ್ಯಗಳು: 
ಕಂಪನಿಯಿಂದ ಲಭ್ಯವಿರುವ ಮಾಹಿತಿಗಳ ಪ್ರಕಾರ, Realme C75 5G ಸ್ಮಾರ್ಟ್‌ಫೋನ್ 6.67 ಇಂಚಿನ ಎಚ್‌ಡಿ+ ಡಿಸ್ಪ್ಲೇ ಅನ್ನು ಹೊಂದಿದೆ. ಈ ಡಿಸ್ಪ್ಲೇಯ ರಿಫ್ರೆಶ್ ದರ 120Hz ಆಗಿದೆ. ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್ ಹೊಂದಿರುವ್ ಅಯೀ ಸ್ಮಾರ್ಟ್‌ಫೋನ್  6GB RAM + 12GB ಡೈನಾಮಿಕ್ RAM ಬೆಂಬಲದೊಂದಿಗೆ ಬರುತ್ತದೆ. 6000mAh ಬ್ಯಾಟರಿ ಸಾಮರ್ಥ್ಯದ ಈ ಸ್ಮಾರ್ಟ್‌ಫೋನ್ 45W ವೇಗದ ಚಾರ್ಜಿಂಗ್ ಜೊತೆಗೆ ಬರುತ್ತದೆ. 

ಫೋನ್ 128GB ಸಂಗ್ರಹಣೆಯನ್ನು ಹೊಂದಿದ್ದು, ಇದನ್ನು ಮೈಕ್ರೋ SD ಕಾರ್ಡ್ ಮೂಲಕ 2TB ವರೆಗೆ ವಿಸ್ತರಿಸಬಹುದು. ಈ ಫೋನ್ ಆಂಡ್ರಾಯ್ಡ್ 14 ಆಧಾರಿತ ರಿಯಲ್ಮೆ UI 5.0 ನಲ್ಲಿ ಕಾರ್ಯನಿರ್ವಹಿಸುತ್ತದೆ.

ಇದನ್ನೂ ಓದಿ- Jio ನೀಡುತ್ತಿದೆ ಉಚಿತವಾಗಿ ಐ‌ಪಿ‌ಎಲ್ ನೋಡುವ ಅವಕಾಶ, ಜಸ್ಟ್ ಈ ಕೆಲಸ ಮಾಡಿದ್ರೆ ಸಾಕು...!

Realme C75 5G ಕ್ಯಾಮೆರಾ: 
ಸ್ಮಾರ್ಟ್‌ಫೋನ್ 32ಎಂಪಿ ಪ್ರಾಥಮಿಕ ಹಿಂಬದಿಯ ಕ್ಯಾಮೆರಾ, ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ 8MP ಮುಂಭಾಗದ ಕ್ಯಾಮೆರಾವನ್ನು ಒಳಗೊಂಡಿದೆ. 

Realme C75 5G ಫೋನ್ ಬಣ್ಣ ಮತ್ತು ಲಭ್ಯತೆ: 
ರಿಯಲ್‌ಮಿ ಇಂಡಿಯಾ ಮತ್ತು ಫ್ಲಿಪ್‌ಕಾರ್ಟ್‌ನಲ್ಲಿ ಈ ಫೋನ್ ಮಾರಾಟಕ್ಕೆ ಲಭ್ಯವಿದೆ. ಲಿಲಿ ವೈಟ್, ಮಿಡ್ನೈಟ್ ಲಿಲಿ ಮತ್ತು ಪರ್ಪಲ್ ಬ್ಲಾಸಮ್ ಬಣ್ಣಗಳಲ್ಲಿ Realme C75 5G ಖರೀದಿಸಬಹುದಾಗಿದೆ.

ಇದನ್ನೂ ಓದಿ- ಬಿಎಸ್ಎನ್ಎಲ್​ನಿಂದ ಭರ್ಜರಿ ಪ್ರಿಪೇಯ್ಡ್ ಪ್ಲಾನ್ ಘೋಷಣೆ: 425ದಿನಗಳ ಮಾನ್ಯತೆ ಕಡಿಮೆ ಬೆಲೆಯಲ್ಲಿ ಲಭ್ಯ

Realme C75 5G ಬೆಲೆ: 
Realme C75 5G  ಸ್ಮಾರ್ಟ್‌ಫೋನ್ , 6GB RAM + 128GB ಸ್ಟೋರೇಜ್ ರೂಪಾಂತರದ ಬೆಲೆ 13,999 ರೂ. ಎನ್ನಲಾಗಿದೆ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

About the Author

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ...Read More

Trending News