Facebook Instagram ban in India: ಭಾರತದಲ್ಲಿ ಸ್ವದೇಶಿ ವಸ್ತುಗಳ ಬಳಕೆಗೆ ಹೆಚ್ಚು ಒತ್ತು ನೀಡುವಂತೆ ಒತ್ತಾಯಿಸಲಾಗುತ್ತಿದೆ. ಈ ಬೆನ್ನಲ್ಲೇ ಯುನೈಟೆಡ್ ಸ್ಟೇಟ್ಸ್ ಮೂಲದ ಫೇಸ್ ಬುಕ್ ಮತ್ತು ಇನ್ಸ್ಟಾಗ್ರಾಂ ಕೂಡ ಭಾರತದಲ್ಲಿ ಬ್ಯಾನ್ ಆಗಲಿದೆ ಎಂಬ ಮಾತು ಕೇಳಿಬರುತ್ತಿದೆ.

ಭಾರತ ಸೇರಿದಂತೆ ಅನೇಕ ದೇಶಗಳ ಮೇಲೆ ಅಮೆರಿಕಾ ಸುಂಕ ವಿಧಿಸಿದ್ದು, ಟ್ರಂಪ್ ವಿರುದ್ಧ ಅಂತಹ ದೇಶಗಳು ಭುಗಿಲೆದ್ದಿವೆ. ಇನ್ನೊಂದೆಡೆ ಭಾರತದಲ್ಲಿ ಸ್ವದೇಶಿ ವಸ್ತುಗಳ ಬಳಕೆಗೆ ಹೆಚ್ಚು ಒತ್ತು ನೀಡುವಂತೆ ಒತ್ತಾಯಿಸಲಾಗುತ್ತಿದೆ. ಈ ಬೆನ್ನಲ್ಲೇ ಯುನೈಟೆಡ್ ಸ್ಟೇಟ್ಸ್ ಮೂಲದ ಫೇಸ್ ಬುಕ್ ಮತ್ತು ಇನ್ಸ್ಟಾಗ್ರಾಂ ಕೂಡ ಭಾರತದಲ್ಲಿ ಬ್ಯಾನ್ ಆಗಲಿದೆ ಎಂಬ ಮಾತು ಕೇಳಿಬರುತ್ತಿದೆ. ಆದರೆ ಈ ವಿಚಾರದ ಸತ್ಯಾಂಶ ಏನು ಎಂಬುದನ್ನು ನೋಡೋಣ.
ಈ ಹಿಂದೆ ಅಂದರೆ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ನಡೆಯುತ್ತಿದ್ದ ಸಮಯವದು. ಈ ಮಧ್ಯೆ ಮಾಹಿತಿ ಸೋರಿಕೆ ಮತ್ತು ಸೈಬರ್ ದಾಳಿಯನ್ನು ತಡೆಗಟ್ಟಲು ಭಾರತದಲ್ಲಿ ಮೇ 10, 2025 ರಿಂದ ಇನ್ಸ್ಟಾಗ್ರಾಮ್ ಅನ್ನು ನಿಷೇಧಿಸಲಾಗುವುದು ಎಂದು ಹೇಳುವ ಹಲವಾರು ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿತ್ತು.
ಆದರೆ ಸಂಬಂಧಿತ ಕೀವರ್ಡ್ಗಳನ್ನು ಬಳಸಿಕೊಂಡು ಇಂಟರ್ನೆಟ್ ಹುಡುಕಾಟ ನಡೆಸಿದಾಗ, ಇನ್ಸ್ಟಾಗ್ರಾಮ್ನ ಪೋಷಕ ಕಂಪನಿಯಾದ ಮೆಟಾದ ಅಂತಹ ನಿರ್ಧಾರದ ಬಗ್ಗೆ ಯಾವುದೇ ವಿಶ್ವಾಸಾರ್ಹ ವರದಿಗಳನ್ನು ನೀಡಿಲ್ಲ. ಹೆಚ್ಚುವರಿಯಾಗಿ, ಭಾರತ ಸರ್ಕಾರವು ಇನ್ಸ್ಟಾಗ್ರಾಮ್ ಅನ್ನು ರಾಷ್ಟ್ರವ್ಯಾಪಿ ನಿಷೇಧಿಸುವ ಯಾವುದೇ ಯೋಜನೆಯನ್ನು ಘೋಷಿಸಿಲ್ಲ.
ಆದರೆ ಮಾಧ್ಯಮ ವರದಿಗಳ ಪ್ರಕಾರ 2025 ರ ಮೇ 05 ರಂದು, ಮಾಹಿತಿ ತಂತ್ರಜ್ಞಾನದ ಸಂಸದೀಯ ಸ್ಥಾಯಿ ಸಮಿತಿಯು ಏಪ್ರಿಲ್ 22, 2025 ರಂದು ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಕೆಲವು ಸಾಮಾಜಿಕ ಮಾಧ್ಯಮ ಪ್ರಭಾವಿಗಳು ಮತ್ತು ಸಂಸ್ಥೆಗಳ ಪಾತ್ರದ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿತ್ತು. ಈ ಕೆಲವು ಸಂಸ್ಥೆಗಳು ದೇಶದ ಹಿತಾಸಕ್ತಿಗಳಿಗೆ ವಿರುದ್ಧವಾಗಿ ವರ್ತಿಸುತ್ತಿವೆ ಮತ್ತು ತಮ್ಮ ವಿಷಯದ ಮೂಲಕ ಹಿಂಸಾಚಾರವನ್ನು ಪ್ರಚೋದಿಸುವ ಸಾಧ್ಯತೆಯಿದೆ ಎಂದು ಸಮಿತಿ ಗಮನಿಸಿತ್ತು. ಈ ಅವಲೋಕನಗಳ ಹಿನ್ನೆಲೆಯಲ್ಲಿ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಹಾಗೂ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ತ್ವರಿತ ಮತ್ತು ಪರಿಣಾಮಕಾರಿ ಕ್ರಮ ಕೈಗೊಳ್ಳುವಂತೆ ಸಮಿತಿ ಒತ್ತಾಯಿಸಿತ್ತು. ಇದಲ್ಲದೆ, ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದ ಸರ್ಕಾರದ ಆದೇಶವನ್ನು ಅನುಸರಿಸಿ, ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ ಕೆಲವು ಪಾಕಿಸ್ತಾನಿ ಮಾಧ್ಯಮಗಳು, ಪ್ರಭಾವಿಗಳು ಮತ್ತು ಸೆಲೆಬ್ರಿಟಿಗಳಿಗೆ ಸೇರಿದ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ.
ಹೀಗಿರುವಾಗ ಈ ಸುದ್ದಿ ಈಗೇಕೆ ವೈರಲ್ ಆಗುತ್ತಿದೆ ಎಂದು ವಿಚಾರ ಮಾಡಿದಾಗ, ಫೇಸ್ ಬುಕ್ ಮತ್ತು ಇನ್ಸ್ಟಾಗ್ರಾಂ ಎರಡೂ ಸಹ ಅಮೆರಿಕಾ ಮೂಲದ್ದಾಗಿದೆ. ಸದ್ಯ ಜಗತ್ತಿನ ಹಲವು ರಾಷ್ಟ್ರಗಳ ಮೇಲೆ ಭಾರೀ ಸುಂಕ ವಿಧಿಸಿ ಅಮೆರಿಕಾ ಕೆಂಗಣ್ಣಿಗೆ ಗುರಿಯಾಗಿದೆ. ಈ ಮೂಲಕ ಒಂದು ವೇಳೆ ಅದರದ್ದೇ ಹಾದಿಯಲ್ಲಿ ಉತ್ತರ ಕೊಡಲು ಸರ್ಕಾರ ಮುಂದಾದರೆ ಟಿಕ್ ಟಾಕ್ ಥರವೇ ಫೇಸ್ ಬುಕ್ ಮತ್ತು ಇನ್ಸ್ಟಾಗ್ರಾಂನ್ನು ಬ್ಯಾನ್ ಮಾಡಬಹುದು.