ಬೆಂಗಳೂರು:  ಚಂದ್ರನ ಮೇಲೆ ವಿಕ್ರಂ ಲ್ಯಾಂಡರ್ ಸುರಕ್ಷಿತವಾಗಿ ಇಳಿದಿರುವುದು ಐತಿಹಾಸಿಕ ಸಾಧನೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.


COMMERCIAL BREAK
SCROLL TO CONTINUE READING

ಇಂದು ಬೆಳಿಗ್ಗೆ ಇಸ್ರೋ ಸಂಸ್ಥೆಗೆ ಭೇಟಿ ನೀಡಿ ಅಧ್ಯಕ್ಷ ಎಸ್.ಸೋಮನಾಥ್ ಹಾಗೂ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮದವರೊಂದಿಗೆ ಮಾತನಾಡಿದರು.


ಇಸ್ರೋ ಸಾಧನೆಯನ್ನು ಮೆಚ್ಚಿ ಅಭಿನಂದಿಸಬೇಕು:
ಇಸ್ರೋ  ಸಾಧನೆಯಿಂದ ಇಡೀ ಜಗತ್ತು ಭಾರತದ ಕಡೆಗೆ ನೋಡುವಂಥ ಕೆಲಸವಾಗಿದೆ. ಜಗತ್ತಿನಲ್ಲಿಯೇ ರಷ್ಯಾ, ಅಮೆರಿಕ, ಚೈನಾ ದೇಶಗಳನ್ನು ಬಿಟ್ಟರೆ ಚಂದ್ರನ ದಕ್ಷಿಣ ಭಾಗದಲ್ಲಿ   ಕಾಲಿರಿಸಿರುವ ನಾಲ್ಕನೇ ದೇಶ ಭಾರತ. ನಾವೆಲ್ಲರೂ ಇಸ್ರೋ ಸಾಧನೆಯನ್ನು ಮೆಚ್ಚಿ ಅಭಿನಂದಿಸಬೇಕು ಎಂದರು.  


ಇದನ್ನೂ ಓದಿ- Chandrayaan 3: ಚಂದ್ರಯಾನಕ್ಕೂ ಚಿತ್ರದುರ್ಗಕ್ಕೂ ಇದೆ ನಂಟು


 ಸರ್ಕಾರದ ವತಿಯಿಂದ  ಸನ್ಮಾನ:
ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಿ ಇಸ್ರೋ ವಿಜ್ಞಾನಿಗಳನ್ನು  ಸರ್ಕಾರ ಗೌರವಿಸಲಿದೆ ಎಂದರು. ಇಸ್ರೋ ಅಧ್ಯಕ್ಷ ಸೋಮನಾಥ್ ಸೇರಿದಂತೆ  ಕರ್ನಾಟಕದ 500 ವಿಜ್ಞಾನಿಗಳು ಇದರಲ್ಲಿ ಪಾಲ್ಗೊಂಡಿದ್ದು, ಅವರೆಲ್ಲರಿಗೂ ಸನ್ಮಾನಿಸಲಾಗುವುದು ಎಂದರು. 3 ಲಕ್ಷ 84 ಕಿಮೀ ಪ್ರಯಾಣ ಮಾಡಿರುವ ವಿಕ್ರಂ ಸಾಧನೆ ಕಡಿಮೆಯಲ್ಲ. ಸರ್ಕಾರದ ಸಹಕಾರ ಬೆಂಬಲ ಇರಲಿದೆ. ಇದು ದೇಶದ ಹೆಮ್ಮೆ ಎಂದರು.


ಇದನ್ನೂ ಓದಿ- ಭಾರತಕ್ಕಷ್ಟೆ ಅಲ್ಲ, ಇಡೀ ವಿಶ್ವಕ್ಕೆ ಚಂದ್ರಯಾನ-3 ಏಕೆ ಮುಖ್ಯವಾಗಿದೆ?


ದಿನಾಂಕ ನಿಗದಿ
ವಿಜ್ಞಾನಿಗಳು ಹಗಲು ಇರುಳು ಎನ್ನದೆ ಇದಕ್ಕಾಗಿ ಶ್ರಮಿಸಿದ್ದಾರೆ. ದೇಶದ ಒಟ್ಟು ಒಂದು ಸಾವಿರ ವಿಜ್ಞಾನಿಗಳು ಇದರಲ್ಲಿ ತೊಡಗಿಸಿಕೊಂಡಿದ್ದಾರೆ. ಬೆಂಗಳೂರಿನಿಂದಲೇ 500 ಜನ ಪಾಲ್ಗೊಂಡಿದ್ದಾರೆ.  ಸೆಪ್ಟೆಂಬರ್ 02 ರ ನಂತರ ಸನ್ಮಾನ ಕಾರ್ಯಕ್ರಮದ ದಿನಾಂಕ ನಿಗದಿಯಾಗಲಿದೆ ಎಂದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.