6,500mAh ಬ್ಯಾಟರಿ, 50MP ಕ್ಯಾಮೆರಾ; ಕೇವಲ ₹14,000ಕ್ಕಿಂತಲೂ ಕಡಿಮೆ ಬೆಲೆಗೆ ವಿವೋ ಫೋನ್‌ ಲಭ್ಯ!!

Vivo T4x 5G specifications: ವಿವೋ ಭಾರತದಲ್ಲಿ 14,000 ರೂ.ಗಿಂತ ಕಡಿಮೆ ಬೆಲೆಗೆ ಶಕ್ತಿಶಾಲಿ 6,500mAh ಬ್ಯಾಟರಿ ಹೊಂದಿರುವ 5G ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ವಿವೋ ಫೋನ್ ಅದ್ಭುತ ವೈಶಿಷ್ಟ್ಯಗಳೊಂದಿಗೆ ಬರುತ್ತದೆ. ಇದರ ಮಾರಾಟ ಮಾರ್ಚ್ 12ರಿಂದ ಪ್ರಾರಂಭವಾಗಲಿದೆ.

Written by - Puttaraj K Alur | Last Updated : Mar 6, 2025, 09:10 PM IST
  • ವಿವೋ ಪ್ರಬಲ ವೈಶಿಷ್ಟ್ಯಗಳನ್ನ ಹೊಂದಿರುವ ಅಗ್ಗದ ಫೋನ್ ಬಿಡುಗಡೆ ಮಾಡಿದೆ
  • ಇದು 50MP ಕ್ಯಾಮೆರಾ, 8GB RAM & 256GB ವರೆಗಿನ ಆಂತರಿಕ ಸ್ಟೋರೇಜ್‌ನೊಂದಿಗೆ ಬರುತ್ತದೆ
  • ಈ ಫೋನ್ ಅನ್ನು ಕೇವಲ 14,000 ರೂ.ಗಿಂತ ಕಡಿಮೆ ಬೆಲೆಗೆ ಪರಿಚಯಿಸಿದೆ
6,500mAh ಬ್ಯಾಟರಿ, 50MP ಕ್ಯಾಮೆರಾ; ಕೇವಲ ₹14,000ಕ್ಕಿಂತಲೂ ಕಡಿಮೆ ಬೆಲೆಗೆ ವಿವೋ ಫೋನ್‌ ಲಭ್ಯ!!
ವಿವೋ T4X 5G

Vivo T4X 5G Price: ವಿವೋ ಕಂಪನಿಯು ಭಾರತೀಯ ಮಾರುಕಟ್ಟೆಗೆ ಪ್ರಬಲ ವೈಶಿಷ್ಟ್ಯಗಳನ್ನು ಹೊಂದಿರುವ ಮತ್ತೊಂದು ಅಗ್ಗದ ಫೋನ್ ಅನ್ನು ಬಿಡುಗಡೆ ಮಾಡಿದೆ. ವಿವೋದ ಈ ಅಗ್ಗದ ಫೋನ್ 50MP ಕ್ಯಾಮೆರಾ, 8GB RAM ಮತ್ತು 256GB ವರೆಗಿನ ಆಂತರಿಕ ಸ್ಟೋರೇಜ್‌ನೊಂದಿಗೆ ಬರುತ್ತದೆ. ಕಂಪನಿಯು ಈ ಫೋನ್ ಅನ್ನು ಕೇವಲ 14,000 ರೂ.ಗಿಂತ ಕಡಿಮೆ ಬೆಲೆಗೆ ಪರಿಚಯಿಸಿದೆ. ಇದಲ್ಲದೆ ಕಂಪನಿಯು ಫೋನ್ ಖರೀದಿಯ ಮೇಲೆ ಬ್ಯಾಂಕ್ ಕೊಡುಗೆಗಳನ್ನು ಸಹ ನೀಡುತ್ತಿದೆ. ಈ ವಿವೋ ಸ್ಮಾರ್ಟ್‌ಫೋನ್ ಕಳೆದ ವರ್ಷ ಬಿಡುಗಡೆಯಾದ ವಿವೋ T3X 5G ಸ್ಮಾರ್ಟ್‌ಫೋನ್‌ಗೆ ಅಪ್‌ಗ್ರೇಡ್ ಆಗಲಿದೆ. ಇದರಲ್ಲಿ ಕಂಪನಿಯು ಕ್ಯಾಮೆರಾ, ಬ್ಯಾಟರಿ ಮತ್ತು ಪ್ರೊಸೆಸರ್ ಸೇರಿದಂತೆ ಅನೇಕ ವೈಶಿಷ್ಟ್ಯಗಳನ್ನ ಅಪ್‌ಡೇಟ್‌ ಮಾಡಿದೆ.

Add Zee News as a Preferred Source

ವಿವೋ T4X 5G ಬೆಲೆ

ವಿವೋ ಫೋನ್ 6GB RAM + 128GB, 8GB RAM + 128GB ಮತ್ತು 8GB RAM + 256GB ಮೂರು ಸ್ಟೋರೇಜ್‌ ರೂಪಾಂತರಗಳಲ್ಲಿ ಬರುತ್ತದೆ. ಈ ಫೋನಿನ ಆರಂಭಿಕ ಬೆಲೆ 13,999 ರೂ. ಇದೆ. ಅದೇ ರೀತಿ ಇದರ ಇತರ ಎರಡು ರೂಪಾಂತರಗಳು ಕ್ರಮವಾಗಿ 14,999 ಮತ್ತು 16,999 ರೂ.ಗಳಿಗೆ ಬರುತ್ತವೆ. ಈ ಫೋನ್ ಅನ್ನ ಮೆರೈನ್ ಬ್ಲೂ ಮತ್ತು ಪ್ರೊಂಟೊ ಪರ್ಪಲ್ ಎರಡು ಬಣ್ಣಗಳಲ್ಲಿ ಖರೀದಿಸಬಹುದು. Vivo T4X 5G ಖರೀದಿಯ ಮೇಲೆ 1,000 ರೂ.ಗಳ ತಕ್ಷಣದ ಬ್ಯಾಂಕ್ ರಿಯಾಯಿತಿ ನೀಡಲಾಗುತ್ತಿದೆ. ಈ ಫೋನ್‌ನ ಮೊದಲ ಮಾರಾಟವು ಮಾರ್ಚ್ 12ರಂದು ಮಧ್ಯಾಹ್ನ 12 ಗಂಟೆಗೆ ಇ-ಕಾಮರ್ಸ್ ವೆಬ್‌ಸೈಟ್ ಫ್ಲಿಪ್‌ಕಾರ್ಟ್ ಮತ್ತು ಕಂಪನಿಯ ಅಧಿಕೃತ ಇ-ಸ್ಟೋರ್‌ನಲ್ಲಿ ನಡೆಯಲಿದೆ.

ಇದನ್ನೂ ಓದಿ: HDFC ಬ್ಯಾಂಕಿನ 55 ತಿಂಗಳ FDಯಲ್ಲಿ ನೀವು ₹55 ಲಕ್ಷ ಠೇವಣಿ ಇಟ್ಟರೆ ಎಷ್ಟು ಹಣ ವಾಪಸ್‌ ಸಿಗುತ್ತದೆ?

ವಿವೋ T4X 5G ವೈಶಿಷ್ಟ್ಯಗಳು

ಈ ಫೋನ್ 6.74-ಇಂಚಿನ FHD+ LCD ಡಿಸ್ಪ್ಲೇಯೊಂದಿಗೆ ಬರುತ್ತದೆ, ಇದು 120Hz ಹೆಚ್ಚಿನ ರಿಫ್ರೆಶ್ ರೇಟ್‌ಅನ್ನ ಬೆಂಬಲಿಸುತ್ತದೆ. ಫೋನ್‌ನ ಡಿಸ್‌ಪ್ಲೇಯ ಗರಿಷ್ಠ ಹೊಳಪು 120Hz ಆಗಿದೆ. ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಪ್ರೊಸೆಸರ್ ಅನ್ನು ಹೊಂದಿದ್ದು, 8GB LPDDR4X RAM ಮತ್ತು 256GB UFS 3.1 ಸ್ಟೋರೇಜ್‌ಗೆ ಬೆಂಬಲ ಲಭ್ಯವಿದೆ. ಈ ಫೋನ್ ಆಂಡ್ರಾಯ್ಡ್ 15 ಆಧಾರಿತ FuntouchOS 15ನಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್ ಶಕ್ತಿಯುತ 6,500mAh ಬ್ಯಾಟರಿಯನ್ನು ಹೊಂದಿದ್ದು, 44W USB ಟೈಪ್ C ಫಾಸ್ಟ್ ಚಾರ್ಜಿಂಗ್ ವೈಶಿಷ್ಟ್ಯವನ್ನು ಹೊಂದಿದೆ.

ವಿವೋ ಫೋನ್‌ನ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸೆಟಪ್ ಲಭ್ಯವಿರುತ್ತದೆ. ಇದು 50MP ಮುಖ್ಯ ಮತ್ತು 2MP ದ್ವಿತೀಯ ಕ್ಯಾಮೆರಾವನ್ನು ಹೊಂದಿದೆ. ಈ ಫೋನ್ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ 8MP ಕ್ಯಾಮೆರಾವನ್ನು ಹೊಂದಿದೆ. ಈ ಫೋನಿನ ಹಿಂಭಾಗದಲ್ಲಿ ಕ್ಯಾಮೆರಾ ಮಾಡ್ಯೂಲ್ ಜೊತೆಗೆ ಡೈನಾಮಿಕ್ ಲೈಟ್ ಅನ್ನು ಒದಗಿಸಲಾಗಿದೆ. ಈ ಫೋನ್ MIL-STD-810H ಮಿಲಿಟರಿ ದರ್ಜೆಯ ಬಾಳಿಕೆ ಮತ್ತು IP64 ರೇಟಿಂಗ್‌ನೊಂದಿಗೆ ಬರುತ್ತದೆ ಎಂದು ಕಂಪನಿ ಹೇಳಿಕೊಂಡಿದೆ.

ಇದನ್ನೂ ಓದಿ: PhonePe: ಫೋನ್‌ಪೇನಿಂದ ಬಳಕೆದಾರರಿಗಾಗಿ ಭರ್ಜರಿ ಘೋಷಣೆ! ಪ್ರತಿಯೊಬ್ಬರಿಗೂ ಸಿಗಲಿದೆ ಉಚಿತ ಗ್ಯಾಸ್‌ ಸಿಲಿಂಡರ್‌

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News