ತಿಂಗಳಲ್ಲಿ 22 ಲಕ್ಷಕ್ಕೂ ಹೆಚ್ಚು ಅಕೌಂಟ್ ಬ್ಯಾನ್ ಮಾಡಿದ ವಾಟ್ಸಾಪ್

ಜನಪ್ರಿಯ ಮೆಸೇಜಿಂಗ್ ಫ್ಲಾಟ್ಫಾರ್ಮ್ ಆಗಿರುವ ವಾಟ್ಸಾಪ್ ಒಂದೇ ತಿಂಗಳಲ್ಲಿ  22 ಲಕ್ಷಕ್ಕೂ ಹೆಚ್ಚು ವಾಟ್ಸಾಪ್ ಖಾತೆಗಳನ್ನು ಬ್ಯಾನ್ ಮಾಡಿರುವುದಾಗಿ ತಿಳಿದುಬಂದಿದೆ. ಕಂಪನಿ ಬಿಡುಗಡೆ ಮಾಡಿರುವ ಮಾಹಿತಿಯಲ್ಲಿ ಈ ಬಗ್ಗೆ ವಿವರಣೆ ನೀಡಲಾಗಿದೆ.

Written by - Yashaswini V | Last Updated : Aug 3, 2022, 01:20 PM IST
  • ಜೂನ್ 1, 2022 ಮತ್ತು ಜೂನ್ 30, 2022 ರ ನಡುವೆ 22 ಲಕ್ಷಕ್ಕೂ ಹೆಚ್ಚು ವಾಟ್ಸಾಪ್ ಅಕೌಂಟ್ಸ್ ಬ್ಯಾನ್
  • ಈ ಹಿಂದೆ ಮೇ ತಿಂಗಳಲ್ಲಿ 19 ಲಕ್ಷಕ್ಕೂ ಹೆಚ್ಚು WhatsApp ಖಾತೆಗಳನ್ನು ನಿಷೇಧಿಸಲಾಗಿದೆ.
  • ಮಾಹಿತಿ ತಂತ್ರಜ್ಞಾನ ನಿಯಮಗಳು 2021 ರ ಅಡಿಯಲ್ಲಿ ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವ ವಾಟ್ಸಾಪ್ ಹೇಳಿದ್ದೇನು?
ತಿಂಗಳಲ್ಲಿ 22 ಲಕ್ಷಕ್ಕೂ ಹೆಚ್ಚು ಅಕೌಂಟ್ ಬ್ಯಾನ್ ಮಾಡಿದ ವಾಟ್ಸಾಪ್  title=
Whatsapp ban

ವಾಟ್ಸಾಪ್ ಕ್ರಮ: ವಿಶ್ವದ ಜನಪ್ರಿಯ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸಾಪ್ ಜೂನ್ ತಿಂಗಳಲ್ಲಿ ದೊಡ್ಡ ಕ್ರಮ ಕೈಗೊಂಡಿದ್ದು, ಒಂದೇ ತಿಂಗಳಲ್ಲಿ 22 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ಬ್ಯಾನ್ ಮಾಡಿದೆ. ಮಾಹಿತಿ ತಂತ್ರಜ್ಞಾನ ನಿಯಮಗಳು 2021 ರ ಅಡಿಯಲ್ಲಿ ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವ ವಾಟ್ಸಾಪ್ ತನ್ನ ಬಳಕೆದಾರರ ಸುರಕ್ಷತೆ ದೃಷ್ಟಿಯಿಂದ ಜೂನ್ ತಿಂಗಳಲ್ಲಿ 22 ಲಕ್ಷಕ್ಕೂ ಹೆಚ್ಚು ವಾಟ್ಸಾಪ್ ಖಾತೆಗಳನ್ನು  ನಿಷೆಧಿಸುರುವುದಾಗಿ ತಿಳಿಸಿದೆ.

22 ಲಕ್ಷಕ್ಕೂ ಹೆಚ್ಚು ವಾಟ್ಸಾಪ್  ಅಕೌಂಟ್ಸ್ ಬ್ಯಾನ್:
ಜೂನ್ 1, 2022 ಮತ್ತು ಜೂನ್ 30, 2022 ರ ನಡುವೆ 22,10,000 ಖಾತೆಗಳನ್ನು ನಿಷೇಧಿಸಲಾಗಿದೆ ಎಂದು ವಾಟ್ಸಾಪ್ ಬಿಡುಗಡೆ ಮಾಡಿರುವ ಮಾಹಿತಿಯಲ್ಲಿ ಉಲ್ಲೇಖಿಸಲಾಗಿದೆ. ಬಳಕೆದಾರರಿಂದ ಬಂದ ದೂರಿನ ಆಧಾರದ ಮೇಲೆ ಈ ಖಾತೆಗಳನ್ನು ನಿಷೇಧಿಸಲಾಗಿದೆ. ಇದಲ್ಲದೆ, ಕಂಪನಿಯು ಭಾರತೀಯ ಐಟಿ ಕಾಯ್ದೆಯನ್ನು ಉಲ್ಲಂಘಿಸುವ ವಾಟ್ಸಾಪ್ ಖಾತೆಗಳನ್ನು ಸಹ ನಿಷೇಧಿಸಿದೆ ಎಂದು ಕಂಪನಿ ಮಾಹಿತಿ ಹಂಚಿಕೊಂಡಿದೆ.

ಇದನ್ನೂ ಓದಿ- ಜಿಯೋ ಗ್ರಾಹಕರಿಗೆ ಗುಡ್ ನ್ಯೂಸ್- 3 ತಿಂಗಳ ಯೋಜನೆಯ ಬೆಲೆ ₹150ರಷ್ಟು ಇಳಿಕೆ

ಜೂನ್ ತಿಂಗಳಲ್ಲಿ 632 ದೂರುಗಳನ್ನು ಸ್ವೀಕರಿಸಲಾಗಿದೆ:
ವಾಟ್ಸಾಪ್ ಬಿಡುಗಡೆ ಮಾಡಿದ ಮಾಹಿತಿಯಲ್ಲಿ, ಜೂನ್ ತಿಂಗಳಲ್ಲಿ ಕಂಪನಿಯು 600 ಕ್ಕೂ ಹೆಚ್ಚು ದೂರುಗಳನ್ನು ಸ್ವೀಕರಿಸಿದೆ ಎಂದು ತಿಳಿಸಲಾಗಿದೆ. ಈ ಪೈಕಿ 64 ದೂರುಗಳಿಗೆ ಕ್ರಮ ಕೈಗೊಳ್ಳಲಾಗಿದೆ. ಮೇ ತಿಂಗಳಿನಲ್ಲಿಯೂ ವಾಟ್ಸಾಪ್‌ಗೆ 528 ದೂರುಗಳು ಬಂದಿದ್ದು, ಈ ಪೈಕಿ 24 ದೂರುಗಳಿಗೆ ಕ್ರಮ ಕೈಗೊಳ್ಳಲಾಗಿದೆ. 

ವಾಟ್ಸಾಪ್ ಖಾತೆಗಳನ್ನು ಏಕೆ ಬ್ಯಾನ್ ಮಾಡಲಾಗಿದೆ?
ನಿಯಮಗಳು ಮತ್ತು ಷರತ್ತುಗಳನ್ನು ಅನುಸರಿಸದ ಯಾವುದೇ ವಾಟ್ಸಾಪ್ ಖಾತೆಯನ್ನು ನಿಷೇಧಿಸಲಾಗಿದೆ ಎಂದು ಕಂಪನಿ ತಿಳಿಸಿದೆ. ವಾಸ್ತವವಾಗಿ, ಕಂಪನಿಯ ನಿಯಮಗಳು ಮತ್ತು ಷರತ್ತುಗಳ ಪ್ರಕಾರ, ಯಾರೂ ಅಕ್ರಮ, ಅಶ್ಲೀಲ, ಬೆದರಿಕೆ ಮತ್ತು ದ್ವೇಷದ ವಿಷಯವನ್ನು ವಾಟ್ಸಾಪ್‌ನಲ್ಲಿ ಹಂಚಿಕೊಳ್ಳುವಂತಿಲ್ಲ. ಯಾವುದೇ ಖಾತೆದಾರರು ಈ ನಿಯಮಗಳನ್ನು ಉಲ್ಲಂಘಿಸಿದರೆ ಅಂತರ ಖಾತೆಗಳನ್ನು ಬ್ಯಾನ್ ಮಾಡಲಾಗುವುದು.

ಇದನ್ನೂ ಓದಿ- Moto G32: ಭಾರತೀಯ ಮಾರುಕಟ್ಟೆಗೆ ಮೊಟೊರೊಲಾದ ಹೊಸ ಸ್ಟೈಲಿಶ್ ಸ್ಮಾರ್ಟ್‌ಫೋನ್!

ಹೊಸ ಐಟಿ ನಿಯಮ, 2021 :
ಹೊಸ ಐಟಿ ನಿಯಮಗಳ ಪ್ರಕಾರ, 5 ಮಿಲಿಯನ್‌ಗಿಂತಲೂ ಹೆಚ್ಚು ಬಳಕೆದಾರರನ್ನು ಹೊಂದಿರುವ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು ಪ್ರತಿ ತಿಂಗಳು ವರದಿಯನ್ನು ಪ್ರಕಟಿಸಬೇಕು. ಈ ವರದಿಯಲ್ಲಿ ಕಂಪನಿಯು ಸ್ವೀಕರಿಸಿದ ದೂರುಗಳು ಮತ್ತು ಅವುಗಳ ಮೇಲೆ ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಬೇಕಾಗುತ್ತದೆ.  

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
  

Trending News