Pahalgam Attack Update 2025 : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ, ಭಾರತ ಸರ್ಕಾರವು ತ್ವರಿತ ಕ್ರಮ ಕೈಗೊಳ್ಳುತ್ತಿದೆ. ಏಪ್ರಿಲ್ 22 ರಂದು ನಡೆದ ಈ ದಾಳಿಯಲ್ಲಿ ಭಯೋತ್ಪಾದಕರು 26 ಜನರನ್ನು ಹತ್ಯೆ ಮಾಡಿದ್ದಾರೆ. ಈ ಹಲ್ಲೆಯ ನಂತರ ಗುರುವಾರ (ಏಪ್ರಿಲ್ 23) ದಾಳಿಯಲ್ಲಿ ಪಾಕಿಸ್ತಾನದ ಜೊತೆಗಿನ ಸಂಬಂಧದ ಬಗ್ಗೆ ಚರ್ಚಿಸಿದ ನಂತರ ಭಾರತ ಸರ್ಕಾರ ಐದು ಕ್ರಮಗಳನ್ನು ಘೋಷಿಸಿತು.
ರಾಷ್ಟ್ರೀಯ ತನಿಖಾ ಸಂಸ್ಥೆಗೆ ದೂರು ನೀಡುವುದು ಹೇಗೆ? :
ಒಂದು ವೇಳೆ ನಮ್ಮ ಕಣ್ಣ ಮುಂದೆಯೇ ಪಹಲ್ಗಾಮ್ ನಂತಹ ದಾಳಿ ನಡೆದರೆ ಏನು ಮಾಡಬೇಕು? ಯಾವ ಸಂಖ್ಯೆಗಳಿಗೆ ಕರೆ ಮಾಡುವ ಮೂಲಕ ನಮ್ಮನ್ನು ಮತ್ತು ನಮ್ಮ ಪ್ರೀತಿಪಾತ್ರರನ್ನು ಹೇಗೆ ರಕ್ಷಿಸಿಕೊಳ್ಳಬಹುದು ಎನ್ನುವ ಮಾಹಿತಿ ದೇಶದ ಪ್ರತಿಯೊಬ್ಬರಿಗೂ ತಿಳಿದಿರುವುದು ಬಹಳ ಮುಖ್ಯ. ನಮ್ಮ ಸುತ್ತಮುತ್ತ ಯಾವುದೇ ಅನುಮಾನಾಸ್ಪದ ಚಟುವಟಿಕೆ ನಡೆಯುತ್ತಿರುವುದು ಗಮನಕ್ಕೆ ಬಂದರೆ ಕುಳಿತಲ್ಲಿಂದಲೇ NIA (ರಾಷ್ಟ್ರೀಯ ತನಿಖಾ ಸಂಸ್ಥೆ) ಗೆ ದೂರು ನೀಡಬಹುದು.
ಇದನ್ನೂ ಓದಿ : ಜಸ್ಟ್ 100 ರೂ.ಗಳಲ್ಲಿ ಭರ್ಜರಿ ಕೊಡುಗೆಗಳನ್ನು ಪರಿಚಯಿಸಿದ ಏರ್‌ಟೆಲ್
ಈ ನಂಬರ್ ಗೆ ಕರೆ ಮಾಡುವ ಮೂಲಕ ನಡೆಯಬಹುದಾದ ದೊಡ್ಡ ಅಪಾಯವನ್ನು ತಪ್ಪಿಸಬಹುದು. ನಿಮ್ಮ ಸುತ್ತಮುತ್ತ ಯಾವುದೇ ಅನುಮಾನಾಸ್ಪದ ಚಟುವಟಿಕೆ ನಡೆಯುತ್ತಿರುವುದು ಕಂಡು ಬಂದಲ್ಲಿ NIA ವೆಬ್‌ಸೈಟ್ https://nia.gov.in/ ಗೆ ಭೇಟಿ ನೀಡಬಹುದು .
ಪಹಲ್ಗಾಮ್ ನಂತಹ ದಾಳಿ ನಡೆದರೆ ಏನು ಮಾಡಬೇಕು? :
NIA ವೆಬ್‌ಸೈಟ್‌ನ ಮುಖಪುಟದಲ್ಲಿ ‘Share Terror Related Tip’ ಆಯ್ಕೆ ಕಾಣಿಸುತ್ತದೆ. ಇದನ್ನು ಕೆಂಪು ಬಣ್ಣದಲ್ಲಿ ಹೈಲೈಟ್ ಮಾಡಲಾಗಿರುತ್ತದೆ. ಅಂದರೆ ಈ ಆಯ್ಕೆಯನ್ನು ಹುಡುಕಲು ಹೆಚ್ಚು ಶ್ರಮಿಸಬೇಕಾಗಿಲ್ಲ. ಈ ಆಯ್ಕೆಯ ಮೇಲೆ ಕ್ಲಿಕ್ ಮಾಡಿದ ತಕ್ಷಣ, NIA ಅನ್ನು ಸಂಪರ್ಕಿಸುವ ಎಲ್ಲಾ ಆಯ್ಕೆಗಳು ಲಭ್ಯವಾಗುತ್ತವೆ. ಇಲ್ಲಿ ದೂರವಾಣಿ ಸಂಖ್ಯೆ (91-11-24368794,+91-11-24368837) ಮತ್ತು ಇಮೇಲ್ ಐಡಿಗಳನ್ನು (spadmin[.]nia[at]gov[.]in, ಮತ್ತು itdiv[.]nia[at]gov[.]in) ಸಹ ಕಾಣಬಹುದು.
ಇದನ್ನೂ ಓದಿ : ಶೀಘ್ರವೇ ಭಾರತೀಯ ಮಾರುಕಟ್ಟೆಗೆ CMF ಫೋನ್ 2 ಪ್ರೊ ಎಂಟ್ರಿ; ಬೆಲೆ ಮತ್ತು ವೈಶಿಷ್ಟ್ಯಗಳನ್ನ ತಿಳಿಯಿರಿ
ಅನುಮಾನಾಸ್ಪದ ಚಟುವಟಿಕೆಯ ಬಗ್ಗೆ ನಿಮಗೆ ಮಾಹಿತಿ ಇದ್ದರೆ, ನೀವು ಅದನ್ನು DOC / PDF ಗಳು / JPG ಸ್ವರೂಪದಲ್ಲಿಯೂ ಒದಗಿಸಬಹುದು. ಮಾಹಿತಿಯನ್ನು ಒದಗಿಸುವ ವ್ಯಕ್ತಿಯ ವಿವರಗಳನ್ನು ಗೌಪ್ಯವಾಗಿಡಲಾಗುತ್ತದೆ. ನೀವು ಫಾರ್ಮ್ ಅನ್ನು ಭರ್ತಿ ಮಾಡುವ ಮೂಲಕ ವಿವರಗಳನ್ನು ಹಂಚಿಕೊಳ್ಳಬಹುದು. ಈ ವೆಬ್‌ಸೈಟ್‌ನಲ್ಲಿ ಶಂಕಿತ ಭಯೋತ್ಪಾದಕ ಚಟುವಟಿಕೆ, ಭಯೋತ್ಪಾದಕ ಅಪರಾಧ ಅಥವಾ ಅಂತಹ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ವ್ಯಕ್ತಿಗಳು ಅಥವಾ ನಕಲಿ ಭಾರತೀಯ ಕರೆನ್ಸಿ ಕಳ್ಳಸಾಗಣೆ ಜಾಲದ ಬಗ್ಗೆ ದೂರುಗಳನ್ನು ಸಲ್ಲಿಸಬಹುದು.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.