ತೀವ್ರ ವಾಯುಮಾಲಿನ್ಯದಿಂದಾಗಿ ರಾಷ್ಟ್ರ ರಾಜಧಾನಿ ಉಸಿರುಗಟ್ಟಿಸುವುದನ್ನು ತಡೆಯಲು ದೆಹಲಿ ಸರ್ಕಾರ ನಿನ್ನೆ ಬೆಳಗ್ಗೆ ತನ್ನ ಶೇ. 50 ರಷ್ಟು ಉದ್ಯೋಗಿಗಳಿಗೆ ಮನೆಯಿಂದ ಕೆಲಸ ಮಾಡುವಂತೆ ಸೂಚಿಸಿದೆ. ಪರಿಸರ ಸಚಿವ ಗೋಪಾಲ್ ರೈ ಅವರು ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, "ಮಾಲಿನ್ಯವನ್ನು ಕಡಿಮೆ ಮಾಡಲು, ದೆಹಲಿ ಸರ್ಕಾರವು ಸರ್ಕಾರಿ ನೌಕರರು ಮನೆಯಿಂದಲೇ ಕೆಲಸ ಮಾಡುಲ ನಿರ್ಧರ ತೆಗೆದುಕೊಂಡಿದೆ. ಶೇ 50 ರಷ್ಟು ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡುತ್ತಾರೆ. ಅದರ ಅನುಷ್ಠಾನಕ್ಕಾಗಿ ಅಧಿಕಾರಿಗಳು ಇಂದು ಸಚಿವಾಲಯದಲ್ಲಿ ಸಭೆ ನಡೆಸಿದರು ಎಂದು ತಿಳಿಸಿದ್ದಾರೆ. ಮನೆಯಿಂದ ಕೆಲಸ ಮತ್ತು ಸಮ-ಬೆಸ ನಿಯಮವನ್ನು ಸರ್ಕಾರ ಶೀಘ್ರದಲ್ಲೇ ನಿರ್ಧರಿಸುತ್ತದೆ ಎಂದು ಗೋಪಾಲ್ ರೈ ಹೇಳಿದ ಒಂದು ದಿನದ ನಂತರ ಈ ಘೋಷಣೆ ಹೊರಬಿದ್ದಿದೆ.