ಟೀಂ ಇಂಡಿಯಾ ಅನುಭವಿ ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್, 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಗಿಯುತ್ತಿದ್ದಂತೆಯೇ ಎಲ್ಲಾ ಮಾದರಿಯ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರು. ಇದೀಗ ದಿನೇಶ್ ಕಾರ್ತಿಕ್, ಮತ್ತೊಮ್ಮೆ ಆರ್‌ಸಿಬಿ ತೆಕ್ಕೆಗೆ ಸೇರಿಕೊಂಡಿದ್ದು, ಮುಂಬರುವ ಐಪಿಎಲ್ ಟೂರ್ನಿಯಲ್ಲಿ ಡಿಕೆ, ಆರ್‌ಸಿಬಿ ತಂಡದ ಮೆಂಟರ್ ಹಾಗೂ ಬ್ಯಾಟಿಂಗ್ ಕೋಚ್ ಆಗಿ ಕಾಣಿಸಿಕೊಳ್ಳಲಿದ್ದಾರೆ.