ಸಾಕಷ್ಟು ವಿರೋಧ ಕೇಳಿ ಬಂದ ಹಿನ್ನೆಲೆಯಲ್ಲಿ ಶಾಲಾ ಮಕ್ಕಳಿಗೆ ಮೊಟ್ಟೆ ಕೊಡಲು ರಾಜ್ಯ ಸರ್ಕಾರ ಮುಂದಾಗಿದೆ. ಕಲ್ಯಾಣ ಕರ್ನಾಟಕದ ಯೋಜನೆ ಈಗ ಇಡೀ ರಾಜ್ಯಕ್ಕೆ ವಿಸ್ತರಣೆ ಮಾಡಲಾಗಿದ್ದು, 1 ರಿಂದ 8ನೇ ತರಗತಿ ಮಕ್ಕಳಿಗೆ ಊಟದ ಜೊತೆ ಮೊಟ್ಟೆ ವಿತರಣೆ ಮಾಡಲಾಗುವುದು ಎಂದು ಸರ್ಕಾರ ಅಧಿಸೂಚನೆ ಹೊರಡಿಸಿದೆ.