ಆಧಾರ್ ಕಾರ್ಡ್‌ನೊಂದಿಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡುವುದು ಪ್ರತಿಯೊಬ್ಬ ಭಾರತೀಯ ನಾಗರಿಕರು ಪೂರ್ಣಗೊಳಿಸಲೇಬೇಕಾದ ಕೆಲಸ. ಇದೀಗ ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡುವ ದಿನಾಂಕವನ್ನು ಸರ್ಕಾರ ವಿಸ್ತರಿಸಿದೆ. ಈಗ ಜೂನ್ 30, 2023ರವರೆಗೆ ಆಧಾರ್ ಕಾರ್ಡ್ ಅನ್ನು ಪ್ಯಾನ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಬಹುದಾಗಿದೆ. ಇದಕ್ಕೂ ಮೊದಲು ಮಾರ್ಚ್ 31, 2023ರೊಳಗೆ ಪ್ಯಾನ್‌ನೊಂದಿಗೆ ಆಧಾರ್ ಲಿಂಕ್ ಮಾಡುವುದು ಅನಿವಾರ್ಯವಾಗಿತ್ತು. ಈ ಪ್ರಕ್ರಿಯೆ ಪೂರ್ಣಗೊಳಿಸಲು ಮಾರ್ಚ್ 31, ಸರ್ಕಾರ ನಿಗದಿ ಮಾಡಿರುವ ಕೊನೆಯ ದಿನಾಂಕವಾಗಿತ್ತು. ಆದರೆ ಈಗ ಅದನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.