ರಾಜ್ಯಾದ್ಯಂತ ಮುಂದುವರೆದ ವರುಣನ ಆರ್ಭಟ

  • Zee Media Bureau
  • May 20, 2022, 11:05 AM IST

ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಮಳೆರಾಯನ ಅಬ್ಬರ ಜೋರಾಗಿದೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನರು ಮನೆಯಿಂದ ಹೊರಬರಲು ಸಹ ಹಿಂದೆ ಮುಂದೆ ಯೋಚಿಸುವಂತಾಗಿದೆ. ಇನ್ನೂ ಕೆಲ ನದಿಗಳು ಅಪಾಯದ ಮಟ್ಟಮೀರಿ ಹರಿಯುತ್ತಿದ್ದು, ನದಿ ಪಾತ್ರದ ಜನರಲ್ಲಿ ಪ್ರವಾಹ ಭೀತಿ ಎದುರಾಗಿದೆ. ಅಲ್ಲಲ್ಲಿ ಮರಗಳು ಧರೆಗುರುಳಿದ್ದು, ವಿದ್ಯುತ್ ಕಂಬಗಳು ನೆಲಕ್ಕುರುಳಿದ ಪರಿಣಾಮ ಕರೆಂಟ್‌ ಇಲ್ಲದೆ ಜನ ಪರದಾಡುವಂತಾಗಿದೆ. 

Trending News