ಹುಬ್ಬಳ್ಳಿ-ಧಾರವಾಡ ಅವಳಿ ನಗರವನ್ನು ಡ್ರಗ್ಸ್ ಹಬ್ ಆಗಲು ಬಿಡುವುದಿಲ್ಲ: ಸಚಿವ ಡಾ.ಜಿ.ಪರಮೇಶ್ವರ್

  • Zee Media Bureau
  • Aug 19, 2023, 11:47 AM IST

ಯಾವುದೇ ಕಾರಣಕ್ಕೂ ಹುಬ್ಬಳ್ಳಿ-ಧಾರವಾಡ ಅವಳಿ ನಗರವನ್ನು ಡ್ರಗ್ಸ್ ಹಬ್ ಆಗಲು ಬಿಡುವುದಿಲ್ಲ. ಇದು ಇಲ್ಲದಂತೆ ಮಾಡಲು ಆರು ತಿಂಗಳ ಗಡುವು ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಆಯುಕ್ತರ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಇಡೀ ರಾಜ್ಯದಲ್ಲಿ ಡ್ರಗ್ಸ್ ನಿಲ್ಲಿಸಲು ನಿರ್ಧರಿಸಿದ್ದೇವೆ. ಹುಬ್ಬಳ್ಳಿ ಧಾರವಾಡ ಗೋವಾ, ಒಡಿಶಾಗಳಿಂದ ಡ್ರಗ್ಸ್ ಬರಬಹುದು. ಇಲ್ಲಿಯ ಜನರಿಗೆ ಅನಾಹುತ ಆಗಬಾರದು ಎಂದು ಕಠಿಣ ಕ್ರಮಕ್ಕೆ ಸೂಚಿಸಿದ್ದೇನೆ. ಇದನ್ನು ತಡೆಗಟ್ಟದಿದ್ದರೆ‌ ನಂತರ ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದ್ರು.

Trending News