ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಲು ಮುಂದಾಗಿರುವ ಕಾಂಗ್ರೆಸ್ ಪೂರ್ವತಯಾರಿ ಬಗ್ಗೆ ಚರ್ಚಿಸಲು ಇಂದು ಕೆಪಿಸಿಸಿ ಸರ್ವ ಸದಸ್ಯರ ಸಭೆಯನ್ನು ಆಯೋಜಿಸಿದೆ. ಕೆಪಿಸಿಸಿ ಕಚೇರಿಯ ಇಂದಿರಾ ಭವನದಲ್ಲಿರುವ ಭಾರತ್ ಜೋಡೋ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ಸಭೆ ನಡೆಯಲಿದೆ. ಪಕ್ಷ ಸಂಘಟನೆಗೆ ಒತ್ತು ನೀಡುವ ಜೊತೆಗೆ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಪ್ರಚಾರ ಮತ್ತು ಚುನಾವಣಾ ಕಾರ್ಯತಂತ್ರಗಳ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ.