ನಂದಿನಿ ಮೊಸರು, ಲಸ್ಸಿ ಮತ್ತು ಮಜ್ಜಿಗೆ ದರಗಳನ್ನು ನಿನ್ನೆ ಸಂಜೆ ಮತ್ತೆ ಪರಿಷ್ಕರಿಸಲಾಗಿದೆ. ಈ ಎಲ್ಲ ಹಾಲಿನ ಉತ್ಪನ್ನಗಳ ದರವನ್ನು 50 ಪೈಸೆಯಿಂದ ₹1.50ರಷ್ಟು ಕಡಿಮೆ ಮಾಡಲಾಗಿದೆ. ಭಾನುವಾರ ಈ ಉತ್ಪನ್ನಗಳ ದರಗಳನ್ನು ₹1ರಿಂದ ₹3ರಷ್ಟು ಹೆಚ್ಚಿಸಲಾಗಿತ್ತು. ಗ್ರಾಹಕರಿಂದ ಬೆಲೆ ಏರಿಕೆಗೆ ಅಸಮಾಧಾನ ವ್ಯಕ್ತವಾಗಿದ್ದರಿಂದ ಕೆಎಂಎಫ್ ಈ ಕ್ರಮ ಕೈಗೊಂಡಿದೆ.