3 ಸಾವಿರ ರನ್ ಪೂರೈಸಿದ ವಿಶ್ವದ ಮೊದಲ ಬ್ಯಾಟರ್ ವಿರಾಟ್‌ ಕೊಹ್ಲಿ

  • Zee Media Bureau
  • Apr 28, 2023, 05:37 PM IST

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ವಿಶೇಷ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡವು ಜೇಸನ್ ರಾಯ್ (56) ಅವರ ಭರ್ಜರಿ ಅರ್ಧಶತಕದ ನೆರವಿನಿಂದ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 200 ರನ್ ಕಲೆಹಾಕಿತು. 201 ರನ್​ಗಳ ಬೃಹತ್ ಮೊತ್ತವನ್ನು ಬೆನ್ನತ್ತಿದ ಆರ್​ಸಿಬಿ ತಂಡಕ್ಕೆ ವಿರಾಟ್ ಕೊಹ್ಲಿ ಸಫೋಟಕ ಆರಂಭ ಒದಗಿಸಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಕಿಂಗ್ ಕೊಹ್ಲಿ 33 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಲ್ಲದೆ 37 ಎಸೆತಗಳಲ್ಲಿ 6 ಫೋರ್​ನೊಂದಿಗೆ 54 ರನ್​ ಬಾರಿಸಿ ಔಟಾದರು. ಈ ಅರ್ಧಶತಕದೊಂದಿಗೆ ವಿರಾಟ್ ಕೊಹ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 3000 ರನ್​ ಪೂರೈಸಿದ್ದಾರೆ.
 

Trending News