ಆಂಡ್ರಾಯ್ಡ್ ಸ್ಮಾರ್ಟ್ಫೋನುಗಳಲ್ಲಿ ಪ್ಲೇ ಸ್ಟೋರ್ ತೆರೆದರೆ ಸಾಕು ಸಾವಿರಾರು ಆ್ಯಪ್ಗಳು ಇದರಲ್ಲಿ ಕಾಣಸಿಗುತ್ತದೆ. ಆಂಡ್ರಾಯ್ಡ್ (Android) ಗೂಗಲ್ ಪ್ಲೇ ಸ್ಟೋರ್ಗೆ ಡೆವಲಪರ್ಗಳು ಆ್ಯಪ್ಗಳನ್ನು ತಯಾರಿಸಿ ಸೇರ್ಪಡೆಗೊಳಿಸುವುದು ತುಂಬಾ ಸುಲಭವಾಗಿರುವುದರಿಂದಾಗಿ, ಈ ಆ್ಯಪ್ಗಳ ರಾಶಿಯಲ್ಲಿ ಫೇಕ್ ಆ್ಯಪ್ ಕೂಡ ಸೇರಿಕೊಳ್ಳುತ್ತವೆ. ತಿಳಿಯದೆ ಈ ನಕಲಿ ಆ್ಯಪ್ಗಳನ್ನು ನೀವು ಡೌನ್ಲೋಡ್ ಮಾಡಿ ಇನ್ಸ್ಟಾಲ್ ಮಾಡಿಕೊಂಡರೆ ಅಪಾಯ ಕಟ್ಟಿಟ್ಟ ಬುತ್ತಿ. ಬಳಕೆದಾರರ ಖಾಸಗಿ ಫೋಟೋ, ವಿಡಿಯೋ, ಬ್ಯಾಂಕಿಂಗ್ ಮಾಹಿತಿಯನ್ನು ಕದಿಯುವುದು ಈ ಆ್ಯಪ್ನ ಮುಖ್ಯ ಉದ್ದೇಶವಾಗಿದೆ. ಇದೀಗ ಅಂಥಹ ಅಪಾಯಕಾರಿ ಆ್ಯಪ್ ಪ್ಲೇ ಸ್ಟೋರ್ನಲ್ಲಿ ಕಂಡು ಬಂದಿದೆ.