ಗುಜರಾತ್: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಅವರು ಶನಿವಾರ 100ನೇ ವಸಂತಕ್ಕೆ ಕಾಲಿಟ್ಟಿದ್ದು, ಈ ಹಿನ್ನೆಲೆಯಲಲಿ ಗುಜರಾತ್ ಪ್ರವಾಸದಲ್ಲಿರುವ ಮೋದಿಯವರು ತಮ್ಮ ನಿವಾಸಕ್ಕೆ ಭೇಟಿ ನೀಡಿ ತಾಯಿಯ ಆಶೀರ್ವಾದ ಪಡೆದುಕೊಂಡಿದ್ದಾರೆ. ತಾಯಿಯ ಹುಟ್ಟುಹಬ್ಬದಂದು ಆಶೀರ್ವಾದ ಪಡೆಯುವ ಸಲುವಾಗಿ ಹಾಗೂ ಅನೇಕ ಕಾರ್ಯಕ್ರಮಗಳನ್ನು ಉದ್ಘಾಟಿಸುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರು ಇಂದು ಗುಜರಾತ್ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಮೋದಿ ಅವರು ಜೂನ್ 18 ರಂದು,ಅಂದರೆ ಇಂದು ತಮ್ಮ ಜೀವನದ 100 ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಹೀರಾಬೆನ್ ಅವರು ಜೂನ್ 18, 1923 ರಂದು ಜನಿಸಿದ್ದ ಅವರು ಶತಾಯುಶಿಯಾಗಿದ್ದಾರೆ.