ಪಠ್ಯ ಪರಿಷ್ಕರಣೆ ವಿವಾದ ದಿನದಿಂದ ದಿನಕ್ಕೆ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಹಲವು ವಿದ್ಯಾರ್ಥಿ ಸಂಘಟನೆಗಳು, ಸಾಹಿತಿಗಳು, ಪ್ರಗತಿಪರ ಹೋರಾಟಗಾರರು ಪಠ್ಯ ಪರಿಷ್ಕರಣೆಯ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಈಗ ಪಠ್ಯ ಪರಿಷ್ಕರಣೆ ಸಮಿತಿ ವಿಸರ್ಜಿಸಿ ಸಿಎಂ ಬೊಮ್ಮಾಯಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.