ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, 9 ಮಂದಿ ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ. 33 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾತ್ರಾದಿಂದ ಶಿವಖೋರಿ ದೇವಸ್ಥಾನಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ 53 ಸೀಟುಗಳ ಬಸ್ ಮೇಲೆ ದಾಳಿ ನಡೆದಿದೆ.