ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಗಲಾಟೆಯನ್ನು ಪೊಲೀಸರು ಕೂಡಲೇ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ ಅವರು ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ನಡೆದ ಘಟನೆ ಆಗಬಾರದಿತ್ತು. ಸಣ್ಣ ಪ್ರಮಾಣದಲ್ಲಿ ಪ್ರಾರಂಭವಾಗಿ ಅಂತ್ಯವಾಗಿದೆ.