Viral Video: ಬೈಕ್ ಚಕ್ರಕ್ಕೆ ಬುರ್ಖಾ ಸಿಲುಕಿ ಯುವತಿ ಸಾವು, ಭಯಾನಕ ವಿಡಿಯೋ ವೈರಲ್

ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಹಿಂಬದಿ ಚಕ್ರಕ್ಕೆ ಬುರ್ಖಾ ಸಿಲುಕಿ ಕೆಳಗೆ ಬಿದ್ದ ಯುವತಿಯೊಬ್ಬಳು ಸಾವನ್ನಪ್ಪಿದ್ದಾಳೆ.

Written by - Puttaraj K Alur | Last Updated : May 21, 2022, 11:58 AM IST
  • ಮಹಿಳೆಯರೇ ಬೈಕ್‌ನಲ್ಲಿ ಕುಳಿತುಕೊಳ್ಳುವಾಗ ತುಂಬಾ ಜಾಗರೂಕರಾಗಿರಿ
  • ಬೈಕ್ ಹಿಂಬದಿಯ ಚಕ್ರಕ್ಕೆ ಬುರ್ಖಾ ಸಿಲುಕಿ ಸಾವನ್ನಪ್ಪಿದ 18 ಯುವತಿ
  • ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ ಭಯಾನಕ ವಿಡಿಯೋ
Viral Video: ಬೈಕ್ ಚಕ್ರಕ್ಕೆ ಬುರ್ಖಾ ಸಿಲುಕಿ ಯುವತಿ ಸಾವು, ಭಯಾನಕ ವಿಡಿಯೋ ವೈರಲ್   title=
ಬೈಕ್ ಚಕ್ರಕ್ಕೆ ಬುರ್ಖಾ ಸಿಲುಕಿ ಯುವತಿ ಸಾವು

ಹೈದರಾಬಾದ್‌: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಹಿಂಬದಿ ಚಕ್ರಕ್ಕೆ ಬುರ್ಖಾ ಸಿಲುಕಿ ಕೆಳಗೆ ಬಿದ್ದ ಯುವತಿಯೊಬ್ಬಳು ಸಾವನ್ನಪ್ಪಿದ್ದಾಳೆ. ಹೈದರಾಬಾದ್‍ನಲ್ಲಿ ಈ ಘಟನೆ ನಡೆದಿದ್ದು, ಭಯಾನಕ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಸಹೋದರನೊಂದಿಗೆ 18 ವರ್ಷದ ಯುವತಿ ಪ್ರಯಾಣಿಸುತ್ತಿದ್ದಳು. ನಡುರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಯುವತಿಯ ಬುರ್ಖಾ ಬೈಕ್‍ನ ಹಿಂಬದಿಯ ಚಕ್ರಕ್ಕೆ ಸಿಲುಕಿಕೊಂಡಿದೆ. ಪರಿಣಾಮ ನೋಡ ನೋಡುತ್ತಿದ್ದಂತೆಯೇ ಯುವತಿ ಬೈಕ್ ಮೇಲಿಂದ ಕೆಳಗೆ ಬಿದ್ದಿದ್ದಾಳೆ.

ಇದನ್ನೂ ಓದಿ: Viral Video : ಚಿಪ್ಸ್ ಕದಿಯಲು ಹೋಗುವಾಗ ನಾಯಿಯನ್ನು ಕೂಡಾ ಜೊತೆಗಾರನನ್ನಾಗಿಸಿತು ಕೋತಿ

ಬೈಕ್ ಚಕ್ರಕ್ಕೆ ಬುರ್ಖಾ ಸಿಲುಕುತ್ತಿದ್ದಂತೆಯೇ ಯುವತಿ ಮತ್ತು ಆಕೆಯ ಸಹೋದರ ಕೆಳಗೆ ಬಿದ್ದಿದ್ದಾರೆ. ಅಲ್ಲಿಯೇ ಇದ್ದ ಸ್ಥಳೀಯರು ಇಬ್ಬರ ರಕ್ಷಣೆಗೆ ಧಾವಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಮರುದಿನ ಆಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಇನ್ನು ಈ ಅಪಘಾತದ ವಿಡಿಯೋವನ್ನು ತೆಲಂಗಾಣದ ಸಾರಿಗೆ ನಿಗಮದ ಎಂಡಿ ವಿ.ಸಿ.ಸಜ್ಜನರ್ ಟ್ವಿಟರ್‍ನಲ್ಲಿ ಹಂಚಿಕೊಂಡಿದ್ದಾರೆ. ‘ಮಹಿಳೆಯರೇ, ನೀವು ಬೈಕ್‌ನಲ್ಲಿ ಕುಳಿತುಕೊಳ್ಳುವಾಗ ತುಂಬಾ ಜಾಗರೂಕರಾಗಿರಿ’ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ. ಬುರ್ಖಾದಿಂದಾಗಿ ಯುವತಿ ಸಾವನ್ನಪ್ಪಿರುವ ವಿಡಿಯೋ ನೋಡಿದ ನೆಟಿಜನ್‍ಗಳು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡುವ ಮೂಲಕ ರಸ್ತೆ ಸುರಕ್ಷತೆ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ.  

ಇದನ್ನೂ ಓದಿ: Google Map ನಿರ್ದೇಶನದಂತೆ ಸಾಗಿ ನಾಲೆಗೆ ಬಿದ್ದ ಕಾರು

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News