Snake Viral Video: ಚಲಿಸುತ್ತಿದ್ದ ರೈಲಿನ ಎಸಿ ಕೋಚ್‌ನಲ್ಲಿ ಇದ್ದಕ್ಕಿದ್ದಂತೆ ಕಾಣಿಸಿಕೊಂಡ 5 ಅಡಿ ಉದ್ದದ ಹಾವು, ಮುಂದೆ...
Viral Video: ಚಲಿಸುತ್ತಿದ್ದ ಎಕ್ಸ್‌ಪ್ರೆಸ್ ರೈಲಿನ ಎಸಿ ಕೋಚ್‌ನಲ್ಲಿ ಇದ್ದಕ್ಕಿದ್ದಂತೆ ಹಾವೊಂದು ಕಾಣಿಸಿಕೊಂಡಿದ್ದು ಜನರು ಭಯಭೀತರಾಗಿರುವ ಘಟನೆ ನಡೆದಿದೆ.
Snake Viral Video: ಆರಾಮದಾಯಕ ಸುರಕ್ಷಿತ ಪ್ರಯಾಣಕ್ಕೆ ಹೆಸರುವಾಸಿಯಾಗಿರುವ ಭಾರತೀಯ ರೈಲ್ವೇಯಲ್ಲಿ ಇತ್ತೀಚೆಗೆ ಯಾರೂ ನಂಬಲಸಾಧ್ಯವಾದ ಘಟನೆಯೊಂದು ನಡೆದಿದ್ದು, ಇದನ್ನು ಕಂಡ ಪ್ರಯಾಣಿಕರು ಹೌಹಾರಿದ್ದಾರೆ.
ಜಬಲ್‌ಪುರ-ಮುಂಬೈ ಗರೀಬ್ ರಥ ಎಕ್ಸ್‌ಪ್ರೆಸ್‌ನ ಎಸಿ ಕೋಚ್‌ನಲ್ಲಿ ಇದ್ದಕ್ಕಿದ್ದಂತೆ 5 ಅಡಿ ಹಾವೊಂದು ಪ್ರತ್ಯಕ್ಷವಾಗಿದ್ದು ಪ್ರಯಾಣಿಕರಲ್ಲಿ ಭೀತಿ ಉಂಟು ಮಾಡಿದೆ. ಸಾಮಾಜಿಕ ಜಾಲತಾಣದಲ್ಲಿ ಸದ್ಯ ಈ ವಿಡಿಯೋ ವೈರಲ್ ಆಗುತ್ತಿದೆ.
ಇದನ್ನೂ ಓದಿ- Viral Video: ಗರಿಬಿಚ್ಚಿ ನಲಿಯುತ್ತಿದ್ದ ನವಿಲನ್ನು ಹಿಡಿಯಲು ಹೊಂಚು ಹಾಕಿದ ಹುಲಿ, ಮುಂದೇನಾಯ್ತು...!
ಲಭ್ಯವಿರುವ ಮಾಹಿತಿಯ ಪ್ರಕಾರ, ಜಬಲ್‌ಪುರದಿಂದ ಮುಂಬೈಗೆ ಸಾಗುತ್ತಿದ್ದ ಗರೀಬ್ ರಥ ಎಕ್ಸ್‌ಪ್ರೆಸ್ ರೈಲಿನ ಜಿ3 ಕೋಚ್‌ನ ಮೇಲಿನ ಬರ್ತ್‌ನಲ್ಲಿ (23) ಹಾವು ಕಾಣಿಸಿಕೊಂಡಿತ್ತು. ಇದನ್ನು ಕಂಡು ಗಾಬರಿಗೊಂಡ ಪ್ರಯಾಣಿಕರು ತಕ್ಷಣವೇ ರೈಲ್ವೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಕ್ರಮ ಕೈಗೊಂಡ ರೈಲ್ವೆ ಸಿಬ್ಬಂದಿಗಳು ಪ್ರಯಾಣಿಕರ ಸುರಕ್ಷತೆಗೆ ಒತ್ತು ನೀಡಿದ್ದಾರೆ.
ರೈಲಿನ ಬರ್ತ್‌ನಲ್ಲಿ ಕಂಬಿಯೊಳಗೆ ನುಸುಳಿರುವ ಹಾವಿನ ದೃಶ್ಯವನ್ನು ಇಲ್ಲಿ ವೀಕ್ಷಿಸಿ...
ಗಾಂಭೀರ್ಯವಾಗಿ ನಡು ರಸ್ತೆಯಲ್ಲಿ ಕಾಡಾನೆ ವಾಕ್, ಹಿಂದಿರುಗುವಾಗ ಆನೆ ನಡೆ ಕಂಡು ಹೌಹಾರಿದ ಜನ: ವಿಡಿಯೋ ವೈರಲ್
ರೈಲ್ವೆ ಕೋಚ್‌ನಲ್ಲಿ ಹಾವನ್ನು ಕಂಡ ಕೂಡಲೇ ಅಲ್ಲಿದ್ದ ಪ್ರಯಾಣಿಕರನ್ನು ಬೇರೆ ಕೋಚ್‌ಗೆ ಕಳುಹಿಸಲು ವ್ಯವಸ್ಥೆ ಮಾಡಲಾಗಿದ್ದು ಬಳಿಕ ಹಾವಿದ್ದ ಕೋಚ್ ಅನ್ನು ಪ್ರತ್ಯೇಕಿಸಿ ಜಬಲ್‌ಪುರಕ್ಕೆ ವಾಪಸ್ ಕಳುಹಿಸಲಾಗಿದೆ.
ಸೆಪ್ಟೆಂಬರ್ 23, 2024ರಂದು ಈ ಘಟನೆ ನಡೆದಿದ್ದು, ಘಟನೆ ಕುರಿತಂತೆ ತನಿಖೆ ನಡೆಸಲಾಗುವುದು, ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಪಶ್ಚಿಮ ಮಧ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಹರ್ಷಿತ್ ಶ್ರೀವಾಸ್ತವ ಭರವಸೆ ನೀಡಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.