Watch: ಕಾಲೇಜಿನಲ್ಲಿ ಭಾಷಣ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ 20 ವರ್ಷದ ಯುವತಿ ಸಾವು! ವಿಡಿಯೋ ವೈರಲ್

ಮಹಾರಾಷ್ಟ್ರದಲ್ಲಿ ಕಾಲೇಜು ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದಾಗಲೇ ಹಠಾತ್‌ ಹೃದಯಾಘಾತದಿಂದ ೨೦ ವರ್ಷದ ಯುವತಿ ಸಾವನ್ನಪ್ಪಿದ್ದಾಳೆ. ಈ ಆಘಾತಕಾರಿ ಘಟನೆಯ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ.

Written by - Puttaraj K Alur | Last Updated : Apr 6, 2025, 03:45 PM IST
  • ಭಾಷಣ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ 20 ವರ್ಷದ ಯುವತಿ ಸಾವು
  • ಮಹಾರಾಷ್ಟ್ರದ ಧಾರಾಶಿವ್‌ನ ಕಾಲೇಜು ಕಾರ್ಯಕ್ರಮದಲ್ಲಿ ಆಘಾತಕಾರಿ ಘಟನೆ
  • ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿರುವ ವಿಡಿಯೋ
Watch: ಕಾಲೇಜಿನಲ್ಲಿ ಭಾಷಣ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ 20 ವರ್ಷದ ಯುವತಿ ಸಾವು! ವಿಡಿಯೋ ವೈರಲ್

Viral Video: ಮಹಾರಾಷ್ಟ್ರದ ಧಾರಾಶಿವ್‌ನಲ್ಲಿ ಕಾಲೇಜು ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡುತ್ತಿದ್ದಾಗ ಯುವತಿಯೊಬ್ಬಳು ಇದ್ದಕ್ಕಿದ್ದಂತೆ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾಳೆ. ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ಸಖತ್ ವೈರಲ್ ಆಗುತ್ತಿದೆ. 

Add Zee News as a Preferred Source

ಭಾಷಣ ಮಾಡುತ್ತಿದ್ದಾಗಲೇ ಹಠಾತ್‌ ಹಾರ್ಟ್‌ ಅಟ್ಯಾಕ್‌ನಿಂದ 20 ವರ್ಷದ ವರ್ಷಾ ಖರತ್ ಎಂಬ ಯುವತಿ ಸಾವನ್ನಪ್ಪಿದ್ದಾಳೆ. ಮಹಾರಾಷ್ಟ್ರದ ಧಾರಶಿವ್‌ನ ಪರಂದಾ ತಾಲೂಕಿನಲ್ಲಿ ಈ‌ ಆಘಾತಕಾರಿ ಘಟನೆ ನಡೆದಿದೆ. ಈ ಘಟನೆಯಿಂದ ಕಾಲೇಜಿನ ಅಧ್ಯಾಪಕರು, ಪ್ರಾಂಶುಪಾಲರು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ದೊಡ್ಡ ಆಘಾತವುಂಟಾಗಿದೆ.  

ಇದನ್ನೂ ಓದಿ: ನಾಲ್ಕು ಗೋಡೆ ಮಧ್ಯ ಮಾಡಬೇಕಾದದನ್ನ, ಪ್ರಪಂಚಕ್ಕೆ ತೋರಿಸಿದ ಜೋಡಿ.. ಥೂ..! ಫಸ್ಟ್‌ನೈಟ್‌ ವಿಡಿಯೋ ವೈರಲ್‌

ಮಹರ್ಷಿ ಗುರುವರ್ಯ ಆರ್‌ಜಿ ಶಿಂಧೆ ಕಾಲೇಜಿನ ಬೋಧನಾ ಕೇಂದ್ರದಲ್ಲಿ ವರ್ಷಾ ಖರತ್ ಭಾಷಣ ಮಾಡುತ್ತಿದ್ದಳು. ಆಕೆಯ ಭಾಷಣಕ್ಕೆ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ನಗುತ್ತಿರುವುದನ್ನು ನೀವು ವಿಡಿಯೋದಲ್ಲಿ ಕಾಣಬಹುದು. ಚೆನ್ನಾಗಿಯೇ ಮಾತನಾಡುತ್ತಿದ್ದ ಯುವತಿಗೆ ಹಠಾತ್‌ ಹಾರ್ಟ್‌ ಅಟ್ಯಾಕ್‌ ಆಗಿದೆ. ನಗುತ್ತಾ ಭಾಷಣ ಮಾಡುತ್ತಿದ್ದ ವರ್ಷಾ ಇದ್ದಕ್ಕಿದ್ದಂತೆಯೇ ಕುಸಿದು ನೆಲಕ್ಕೆ ಬೀಳುತ್ತಾಳೆ. ಇದರಿಂದ ಅಲ್ಲಿದ್ದವರಿಗೆ ಶಾಕ್‌ ಉಂಟಾಗಿದೆ. ಕೂಡಲೇ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅದಾಗಲೇ ಯುವತಿ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಈ ಘಟನೆಯು ವಾಗಿದೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದ್ದು, ಅನೇಕರು ಆಘಾತ ವ್ಯಕ್ತಪಡಿಸಿದ್ದಾರೆ.

ಚಲಿಸುತ್ತಿದ್ದ ಬಸ್ಸಿನಲ್ಲೇ ಹಠಾತ್ ಹೃದಯಾಘಾತದಿಂದ ಚಾಲಕ ಸಾವು!

ಮಧ್ಯಪ್ರದೇಶದ ಅಗರ್ ಮಾಲ್ವಾ ಜಿಲ್ಲೆಯಲ್ಲಿ ಚಲಿಸುತ್ತಿದ್ದ ಬಸ್ಸಿನಲ್ಲೇ ಚಾಲಕನಿಗೆ ಹಠಾತ್ ಹೃದಯಾಘಾತವಾಗಿದ್ದು, ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದಾದ ನಂತರ ಬಸ್ ನಿಯಂತ್ರಣ ತಪ್ಪಿ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಬೈಕ್ ಮತ್ತು ಇಟ್ಟಿಗೆಗಳ ರಾಶಿಗೆ ಡಿಕ್ಕಿ ಹೊಡೆದಿದೆ. ಜಿಲ್ಲೆಯ ಕನಾಡ್ ಪ್ರದೇಶದಲ್ಲಿ ಶನಿವಾರ ಮಧ್ಯಾಹ್ನ ಈ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ. ಸ್ಥಳೀಯರು ತಕ್ಷಣ ಚಾಲಕನನ್ನು ಕಾನಾಡ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು, ಆದರೆ ಆಗಲೇ ತಡವಾಗಿತ್ತು. ವೈದ್ಯರು ಚಾಲಕ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಈ ಘಟನೆಯ ವಿಡಿಯೋ ಕೂಡ ಸಖತ್‌ ವೈರಲ್‌ ಆಗುತ್ತಿದೆ. .

ಇದನ್ನೂ ಓದಿ: ಬಾಳಿಗೆ ಬೆಳಕಾಗಬೇಕಾದ ಗುರುವಿನಿಂದಲೇ 'ಲೈಂಗಿಕ ದೌರ್ಜನ್ಯ'..! ಎತ್ತ ಸಾಗುತ್ತಿದೆ ಪ್ರಪಂಚ... ಅಸಭ್ಯ ವಿಡಿಯೋ ವೈರಲ್

ವಾಸ್ತವವಾಗಿ ಮಾಲ್ವಾ ಟ್ರಾವೆಲ್ಸ್‌ಗೆ ಸೇರಿದ ಈ ಬಸ್ ಅಗರ್ ಮಾಲ್ವಾ ಜಿಲ್ಲೆಯ ಕನಾಡ್‌ನ ಬರೋಡ್‌ನಿಂದ ಶುಜಲ್‌ಪುರಕ್ಕೆ ಹೋಗುತ್ತಿತ್ತು. ಎಂದಿನಂತೆ ಅದು ಕಾನಾಡ್ ಬಸ್ ನಿಲ್ದಾಣದಿಂದ ಹೊರಟು ನಲ್ಖೇಡಾ ಜೋಡ್ ಚೌರಾಹಾ ಬಳಿ ತಲುಪಿತ್ತು ನಂತರ ಬಸ್ ಚಾಲಕ ರಯೀಸ್ ಖಾನ್‌ಗೆ ಹಠಾತ್ ಹೃದಯಾಘಾತವಾಗಿದೆ. ಈ ವೇಳೆ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಹೋರ್ಡಿಂಗ್ ಮತ್ತು ಬೈಕ್‌ಗಳಿಗೆ ಡಿಕ್ಕಿ ಹೊಡೆದು, ಇಟ್ಟಿಗೆಗಳ ರಾಶಿಗೂ ಡಿಕ್ಕಿ ಹೊಡೆದು ನಿಂತಿದೆ. ಘಟನೆಯ ನಂತರ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News