ರಸ್ತೆ ಕ್ರಾಸ್‌ ಮಾಡುತ್ತಿದ್ದಾಗ ಯಮನ ರೂಪದಲ್ಲಿ ಬಂದ ಕಾರು; ಡಿಕ್ಕಿ ರಭಸಕ್ಕೆ ಗಾಳಿಯಲ್ಲಿ ಹಾರಿದ ಮಹಿಳೆ ಸಾವು!!

Road Accident CCTV Footage: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಸಿಸಿಟಿವಿ ಕ್ಯಾಮೆರಾದಲ್ಲಿ ಭಯಾನಕ ಅಪಘಾತದ ದೃಶ್ಯ ಸೆರೆಯಾಗಿದ್ದು, ನೋಡಲು ಭಯಾನಕವಾಗಿದೆ.  

Written by - Puttaraj K Alur | Last Updated : Feb 25, 2025, 02:32 PM IST
  • ರಸ್ತೆ ಕ್ರಾಸ್‌ ಮಾಡುತ್ತಿದ್ದಾಗ ಯಮನ ರೂಪದಲ್ಲಿ ಬಂದ ಕಾರು
  • ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಾಳಿಯಲ್ಲಿ ಹಾರಿಹೋದ ಮಹಿಳೆ
  • ಸಿಸಿಟಿವಿಯಲ್ಲಿ ಸೆರೆಯಾಗಿದೆ ಭಯಾನಕ ಅಪಘಾತದ ವಿಡಿಯೋ
ರಸ್ತೆ ಕ್ರಾಸ್‌ ಮಾಡುತ್ತಿದ್ದಾಗ ಯಮನ ರೂಪದಲ್ಲಿ ಬಂದ ಕಾರು; ಡಿಕ್ಕಿ ರಭಸಕ್ಕೆ ಗಾಳಿಯಲ್ಲಿ ಹಾರಿದ ಮಹಿಳೆ ಸಾವು!!
ಭಯಾನಕ ಅಪಘಾತದ ವಿಡಿಯೋ!!

Shocking Viral Video: ರಸ್ತೆ ಕ್ರಾಸ್‌ ಮಾಡುತ್ತಿದ್ದಾಗ ಯಮನ ರೂಪದಲ್ಲಿ ಬಂದ ಕಾರೊಂದು ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಭೀಕರ ಘಟನೆಯ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ. 

Add Zee News as a Preferred Source

ಚಿತ್ರದುರ್ಗದ ಎಕ್ಸ್‌ಪ್ರೆಸ್‌ವೇನಲ್ಲಿ ಭಾನುವಾರ ರಾತ್ರಿ ಈ ಭಯಾನಕ ಘಟನೆ ನಡೆದಿದೆ. ವೈರಲ್‌ ಆಗಿರೋ ವಿಡಿಯೋದಲ್ಲಿ ಇಬ್ಬರು ಮಕ್ಕಳೊಂದಿಗೆ ಮಹಿಳೆಯರು ರಸ್ತೆ ದಾಟಲು ಮುಂದಾಗಿದ್ದರು. ಈ ವೇಳೆ ಒಬ್ಬ ಮಹಿಳೆ ಮುಂದೆ ಮುಂದೆ ಹೋಗುತ್ತಿದ್ದರು. ಈ ವೇಳೆ ಅತಿವೇಗವಾಗಿ ಬಂದ ಕಾರೊಂದು ಅವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆ ಮಹಿಳೆ ಗಾಳಿಯಲ್ಲಿ ಹಾರಿಹೋಗಿ ಮುಂದೆ ಬಿದ್ದಿದ್ದಾರೆ. 

ಇದನ್ನೂ ಓದಿ: ತೆಲಂಗಾಣದ ಶ್ರೀಶೈಲಂನಲ್ಲಿ ಸುರಂಗ ಕುಸಿತ: ದುರಂತದಲ್ಲಿ ಸಿಲುಕಿರುವ ಕಾರ್ಮಿಕರಿಗಾಗಿ ಮುಂದುವರೆದ ಶೋಧ ಕಾರ್ಯ

ಘಟನೆಯಲ್ಲಿ ಮಹಿಳೆಯ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ೪೬ ಸೆಕೆಂಡ್‌ಗಳ ಈ ವಿಡಿಯೋ ನೋಡಲು ಭಯಾನಕವಾಗಿದೆ. ಈ ವಿಡಿಯೋವನ್ನು ಸಾವಿರಾರು ಜನರು ವೀಕ್ಷಿಸಿದ್ದು, ರಸ್ತೆ ದಾಟುವಾಗ ಪ್ರತಿಯೊಬ್ಬರೂ ಎಚ್ಚರಿಕೆ ವಹಿಸಬೇಕು. ಇಲ್ಲದಿದ್ದರೆ ಜೀವವನ್ನೇ ಕಳೆದುಕೊಳ್ಳಬೇಕಾಗುತ್ತದೆ ಅಂತಾ ಕಾಮೆಂಟ್‌ ಮಾಡಿದ್ದಾರೆ. 

ಈ ದುರ್ಘಟನೆಯು ಅಜಾಗರೂಕ ಚಾಲನೆಯ ಅಪಾಯ ಮತ್ತು ಅಪಘಾತಗಳನ್ನ ತಡೆಗಟ್ಟಲು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಅಗತ್ಯವನ್ನು ಎತ್ತಿ ತೋರಿಸುತ್ತದೆ. ಈ ವಿಡಿಯೋ ವೈರಲ್‌ ಆಗುತ್ತಿದ್ದು, ಪ್ರಾಣ ಕಳೆದುಕೊಂಡ ಮಹಿಳೆಯ ಬಗ್ಗೆ ನೆಟಿಜನ್ಸ್‌ಗಳು ಮರುಕ ವ್ಯಕ್ತಪಡಿಸಿದ್ದಾರೆ. 

ಇದನ್ನೂ ಓದಿ: ಅಪ್ರಾಪ್ತ ಬಾಲಕಿ ತನ್ನ ಗೆಳೆಯನೊಂದಿಗೆ ಇಷ್ಟಪಟ್ಟಂತೆ ಲೈಂಗಿಕ ಕ್ರಿಯೆ ನಡೆಸುವುದು ತಪ್ಪಲ್ಲ..!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

About the Author

Puttaraj K Alur

ಪುಟ್ಟರಾಜ ಕೆ ಆಲೂರ ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser) ನ್ಯೂಸ್‌, ಒಪೊಯಿ‌ (Opoyi) ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. ...Read More

Trending News