Viral Video: ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕ ನೀರುಪಾಲು

Arishina Gundi Falls: ಶರತ್ ಕುಮಾರ್ ಜೊತೆಯಲ್ಲಿದ್ದ ಸ್ನೇಹಿತಕೂಡಲೇ ಸಮೀಪದ ಅರಣ್ಯ ಇಲಾಖೆ ಸಿಬ್ಬಂದಿಗೆ ವಿಷಯ ತಿಳಿಸಿದ್ದಾರೆ. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ, ಅಗ್ನಿಶಾಮಕ ಸಿಬ್ಬಂದಿ ಮತ್ತು ಸ್ಥಳೀಯರು ಸೇರಿಕೊಂಡು ಹುಡುಕಾಡಿದರೂ ಯುವಕ ಪತ್ತೆಯಾಗಿಲ್ಲ.

Written by - Puttaraj K Alur | Last Updated : Jul 24, 2023, 01:23 PM IST
  • ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕನೊಬ್ಬ ಕಾಲುಜಾರಿ ಬಿದ್ದು ನೀರುಪಾಲು
  • ಕೊಲ್ಲೂರು ಸಮೀಪದ ಅರಶಿಣ ಗುಂಡಿ ಜಲಪಾತದಲ್ಲಿ ನಡೆದಿರುವ ಘಟನೆ
  • ಭದ್ರಾವತಿ ಮೂಲದ 23 ವರ್ಷದ ಶರತ್ ಕುಮಾರ್ ನೀರುಪಾಲಾಗಿರುವ ಯುವಕ
Viral Video: ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕ ನೀರುಪಾಲು  title=
ಕಾಲುಜಾರಿ ಬಿದ್ದು ಯುವಕ ನೀರುಪಾಲು!

ಮಂಗಳೂರು (ಉಡುಪಿ): ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕನೊಬ್ಬ ಕಾಲುಜಾರಿ ನೀರಿಗೆ ಬಿದ್ದಿರುವ ಘಟನೆ ಕೊಲ್ಲೂರು ಸಮೀಪದ ಅರಶಿಣ ಗುಂಡಿ ಜಲಪಾತದಲ್ಲಿ ನಡೆದಿದೆ. ಭದ್ರಾವತಿ ಮೂಲದ ಶರತ್ ಕುಮಾರ್ (23) ನೀರುಪಾಲಾಗಿರುವ ಯುವಕ.

ಭಾನುವಾರ ಸ್ನೇಹಿತನೊಂದಿಗೆ ಕೊಲ್ಲೂರಿಗೆ ಕಾರಿನಲ್ಲಿ ಬಂದಿದ್ದ ಶರತ್ ಕುಮಾರ್ ಅರಿಶಿಣ ಗುಂಡಿ ಜಲಪಾತವನ್ನು ವೀಕ್ಷಿಸಲು ತೆರಳಿದ್ದರು. ಈ ವೇಳೆ ಬಂಡೆಕಲ್ಲಿನ ಮೇಲೆ ನಿಂತು ಫೋಟೋಶೂಟ್ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಹರಿಯುತ್ತಿದ್ದ ನೀರಿನಲ್ಲಿ ಬಿದ್ದಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: ಕಾಡು ಹಂದಿಗಳ ದಾಳಿಗೆ ಎಕರೆ ಕಬ್ಬು ಸರ್ವನಾಶ: ಕಂಗಾಲಾದ ರೈತ

ಶರತ್ ಕುಮಾರ್ ಜೊತೆಯಲ್ಲಿದ್ದ ಸ್ನೇಹಿತಕೂಡಲೇ ಸಮೀಪದ ಅರಣ್ಯ ಇಲಾಖೆ ಸಿಬ್ಬಂದಿಗೆ ವಿಷಯ ತಿಳಿಸಿದ್ದಾರೆ. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ, ಅಗ್ನಿಶಾಮಕ ಸಿಬ್ಬಂದಿ ಮತ್ತು ಸ್ಥಳೀಯರು ಸೇರಿಕೊಂಡು ಹುಡುಕಾಡಿದರೂ ಯುವಕ ಪತ್ತೆಯಾಗಿಲ್ಲ.

ಶರತ್ ಕುಮಾರ್ ಕಾಲುಜಾರಿ ನೀರಿನಲ್ಲಿ ಬೀಳುತ್ತಿರುವ ದೃಶ್ಯವನ್ನು ಮತ್ತೋರ್ವ ಯುವಕ ತನ್ನ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾನೆ. ಯುವಕನ ಮೃತದೇಹದ ಪತ್ತೆಗೆ ಅಗ್ನಿಶಾಮಕ ದಳ ಸಿಬ್ಬಂದಿ ಇನ್ನೂ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಕೊಲ್ಲೂರು ಪಿಎಸ್‍ಐ ಜಯಲಕ್ಷ್ಮಿ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದಾರೆ. ಈ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಶಕ್ತಿ ಯೋಜನೆಯ ಏಫೆಕ್ಟ್‌, ಸಿಡಿದೆದ್ದ ಖಾಸಗಿ ಸಾರಿಗೆ ಸಂಸ್ಥೆಗಳು

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News