ಮನುಷ್ಯನ ಜೀವ ಉಳಿಸಿದ ಆನೆ ವಿಡಿಯೋ:  ಯಾರಾದರೂ ಕಷ್ಟದಲ್ಲಿದ್ದಾಗ ದೇವರು ಯಾವುದಾದರೂ ಒಂದು ರೂಪದಲ್ಲಿ ಬಂದು ಕಾಪಾಡುತ್ತಾನೆ ಎಂಬುದು ನಂಬಿಕೆ. ಸಂಕಷ್ಟದಲ್ಲಿ ಕೇವಲ ಮನುಷ್ಯರಷ್ಟೇ ಅಲ್ಲ, ಪ್ರಾಣಿಗಳೂ ಸಹ ಸಹಾಯಕ್ಕೆ ಬರುತ್ತವೆ. ಈಗ ಅಂತಹದ್ದೇ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಬಟ್ಟೆ ಸದ್ದು ಮಾಡುತ್ತಿದೆ. ಈ ವೈರಲ್ ವಿಡಿಯೋದಲ್ಲಿ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯನ್ನು ಪುಟ್ಟ ಆನೆಯೊಂದು ರಕ್ಷಿಸಿದೆ. 


COMMERCIAL BREAK
SCROLL TO CONTINUE READING

ಹೌದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ವಿಡಿಯೋದಲ್ಲಿ ಸಂಕಷ್ಟದಲ್ಲಿ ಸಿಲುಕಿರುವ ವ್ಯಕ್ತಿಯನ್ನು ಕಾಪಾಡಲು ಪುಟ್ಟ ಆನೆಯೊಂದು ತನ್ನ ಪ್ರಾಣವನ್ನೇ ಪಣಕ್ಕಿಟ್ಟಿರುವುದನ್ನು ಕಾಣಬಹುದು. ಈ ವಿಡಿಯೋದಲ್ಲಿ ಆನೆಗಳ ಹಿಂಡು ನದಿ ದಡದಲ್ಲಿ ಇರುವುದನ್ನು ಕಾಣಬಹುದು.


ಇದನ್ನೂ ಓದಿ- Viral News: ಮೊಸಳೆಯನ್ನೇ ವಿವಾಹವಾದ ಮೆಕ್ಸಿಕನ್ ಮೇಯರ್..!


ವೈರಲ್ ವಿಡಿಯೋದಲ್ಲಿ ಇದ್ದಕ್ಕಿದ್ದಂತೆ ಒಬ್ಬ ವ್ಯಕ್ತಿ ನೀರಿನ ರಭಸದಲ್ಲಿ ಕೊಚ್ಚಿ ಹೋಗುತ್ತಿರುವುದನ್ನೂ ಕಾಣಬಹುದು. ಇದನ್ನು ಗಮನಿಸಿದ ಪುಟ್ಟ ಆನೆಯೊಂದು ತನ್ನ ಪ್ರಾಣವನ್ನೂ ಲೆಕ್ಕಿಸದ ಆ ವ್ಯಕ್ತಿಯನ್ನು ರಕ್ಷಿಸಲು ನದಿಗೆ ಇಳಿದಿರುವ ದೃಶ್ಯ ಎಂತಹವರಿಗೂ ಮನ ಮುಟ್ಟುತ್ತದೆ. ಈ ಪುಟ್ಟ ಆನೆಯು ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯನ್ನು ತನ್ನ ಸೊಂಡಿಲಿನಿಂದ ಹಿಡಿದು ದಡಕ್ಕೆ ಎಳೆಯುತ್ತದೆ.


ಈ ಅಚ್ಚರಿಯ ವಿಡಿಯೋವನ್ನು ಇಲ್ಲಿ ನೋಡಿ...


Trending: ರಭಸವಾಗಿ ಹರಿಯುತ್ತಿರುವ ನದಿಗೆ ಧುಮುಕಿದ 70ರ ಅಜ್ಜಿ, ವಿಡಿಯೋ ನೋಡಿ


ಈ ವೀಡಿಯೊವನ್ನು @BenGoldsmith ಅವರು ಹಂಚಿಕೊಂಡಿದ್ದಾರೆ ಮತ್ತು ಇದುವರೆಗೆ 73 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ. ಅಷ್ಟೇ ಅಲ್ಲ, 9 ಸಾವಿರಕ್ಕೂ ಹೆಚ್ಚು ಲೈಕ್‌ಗಳು ಮತ್ತು ಎರಡೂವರೆ ಸಾವಿರಕ್ಕೂ ಹೆಚ್ಚು ಬಾರಿ ಇದನ್ನು ರೀಟ್ವೀಟ್‌ ಮಾಡಲಾಗಿದೆ. https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.