‘ಸಿದ್ರಾಮುಲ್ಲಾ ಖಾನ್’ ಬಿರುದನ್ನು ನಾವಲ್ಲ, ಜನರೇ ನೀಡಿದ್ದಾರೆ: ಬಿಜೆಪಿ

ಕ್ಷಣವೂ ವಿವೇಚಿಸದೆ ತಲಾಖ್‌ ಎಂದು ಮಹಿಳೆಯರ ಬದುಕು ಬರ್ಬಾದ್‌ ಮಾಡುವ ಮನಸ್ಥಿತಿಯವರಿಗೆ ಬೆನ್ನುತಟ್ಟುವ ಶಾದಿ ಭಾಗ್ಯ ಕಲ್ಪಿಸಿದ್ದು ಸಿದ್ದರಾಮಯ್ಯ ಎಂದು ಬಿಜೆಪಿ ಕಿಡಿಕಾರಿದೆ.

Written by - Puttaraj K Alur | Last Updated : Dec 5, 2022, 10:36 AM IST
  • ತಮ್ಮವರನ್ನೇ ತುಳಿಯುವ ಸಿದ್ದರಾಮಯ್ಯರ ಮನಸ್ಥಿತಿ ಕಂಡು ದೇವೇಗೌಡರು ಅಂದೇ ಅವರನ್ನು ಹೊರಹಾಕಿದ್ದರು
  • ಮಹಿಳೆಯರ ಬದುಕು ಬರ್ಬಾದ್‌ ಮಾಡುವ ಮನಸ್ಥಿತಿಯವರಿಗೆ ಬೆನ್ನುತಟ್ಟುವ ಶಾದಿ ಭಾಗ್ಯ ಕಲ್ಪಿಸಿದ್ದು ಸಿದ್ದರಾಮಯ್ಯ
  • ವಿಚಾರವಾದಿ ಸಿದ್ದರಾಮಯ್ಯಗೆ ಸಿದ್ರಾಮುಲ್ಲಾ ಖಾನ್‌ ಎಂಬ ಬಿರುದನ್ನು ನಾವಲ್ಲ, ಜನರೇ ನೀಡಿದ್ದಾರೆ
‘ಸಿದ್ರಾಮುಲ್ಲಾ ಖಾನ್’ ಬಿರುದನ್ನು ನಾವಲ್ಲ, ಜನರೇ ನೀಡಿದ್ದಾರೆ: ಬಿಜೆಪಿ title=
ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಆಕ್ರೋಶ

ಬೆಂಗಳೂರು: ಕನ್ನಡಿಗರು ಮಾಜಿ ಸಿಎಂ ಸಿದ್ದರಾಮಯ್ಯರನ್ನು ಸಿದ್ರಾಮುಲ್ಲಾ ಖಾನ್‌ ಎಂದು ವಿನಾಕಾರಣ ಕರೆಯುತ್ತಿಲ್ಲ. ಸರ್ವಜನಾಂಗದ ಶಾಂತಿಯ ತೋಟಕ್ಕೆ ಮತಾಂಧ ಟಿಪ್ಪುವನ್ನು ನುಗ್ಗಿಸಿ, ನಮ್ಮ ನಾಡಿನ ಅಸ್ಮಿತೆಗೆ ಕೊಳ್ಳಿಯಿಟ್ಟ ಪೆಡಂಭೂತದ ಜಯಂತಿಯನ್ನು ಸರಕಾರಿ ಆಚರಣೆಯಾಗಿ ತಂದವರು ಅವರು. ಇಂಥವರು ಸಿದ್ರಾಮುಲ್ಲಾ ಖಾನ್ ಅಲ್ಲದೇ ಇನ್ಯಾರು? ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಈ ಬಗ್ಗೆ ಸೋಮವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ತಮ್ಮವರನ್ನೇ ತುಳಿಯುವ ಸಿದ್ದರಾಮಯ್ಯರ ಮನಸ್ಥಿತಿ ಕಂಡು ಮಾಜಿ ಪ್ರಧಾಣಿ ಎಚ್‍.ಡಿ.ದೇವೇಗೌಡರು ಅಂದೇ ಅವರನ್ನು ಹೊರಹಾಕಿದರು. ಆಗ ಕಾಂಗ್ರೆಸ್ ಸೇರಲು ಬಲಪ್ರದರ್ಶನದ ಅಗತ್ಯ ಬಂತು. ಹಾಗಾಗಿ ಅಹಿಂದ ಎಂಬ ಏಣಿ ಕಟ್ಟಿ ನಂತರ ಅಲ್ಪಸಂಖ್ಯಾತರ ಓಲೈಕೆಗಾಗಿ ಹಿಂದುಳಿದವರು & ದಲಿತರನ್ನು ಹತ್ತಿದ ಏಣಿ ತುಳಿಯುವಂತೆ ಎಡಗಾಲಲ್ಲಿ ತುಳಿದದ್ದನ್ನು ಜನ ಮರೆತಿಲ್ಲ’ ಅಂತಾ ಟೀಕಿಸಿದೆ.

ಇದನ್ನೂ ಓದಿ: ಬಿಜೆಪಿ ಎಡವಟ್ಟು: ಬಿಬಿಎಂಪಿ ಕಾಂಗ್ರೆಸ್‌ ಟಿಕೆಟ್ ಆಕಾಂಕ್ಷಿ ಫೋಟೋ ಹಾಕಿ ರೌಡಿ ಎಂದು ಪೋಸ್ಟ್‌

‘ಕ್ಷಣವೂ ವಿವೇಚಿಸದೆ ತಲಾಖ್‌ ಎಂದು ಮಹಿಳೆಯರ ಬದುಕು ಬರ್ಬಾದ್‌ ಮಾಡುವ ಮನಸ್ಥಿತಿಯವರಿಗೆ ಬೆನ್ನುತಟ್ಟುವ ಶಾದಿ ಭಾಗ್ಯ ಕಲ್ಪಿಸಿದ್ದು ಸಿದ್ದರಾಮಯ್ಯ. ಕೇವಲ ಒಂದು ಸಮುದಾಯದ ಓಲೈಕೆ ಮಾಡಲು ಸೆಕ್ಯುಲರಿಸಂ ಹೆಸರಿನಲ್ಲೇ ತುಷ್ಟೀಕರಣಕ್ಕಿಳಿದಿರಿ. ಇಂಥವರನ್ನು ಸಿದ್ರಾಮುಲ್ಲಾ ಖಾನ್‌ ಎನ್ನದೆ ಮತ್ತೇನೆಂದು ಕರೆದಾರು? ದೇಶದಾದ್ಯಂತ ಮತಾಂಧತೆಯನ್ನು ಪಸರಿಸುತ್ತಾ ಅಲ್ಲಲ್ಲಿ ಭಯೋತ್ಪಾದಕ ದಾಳಿ ನಡೆಸಲು ಹೊಂಚು ಹಾಕುತ್ತಿದ್ದ ಪಿಎಫ್‌ಐನ 175 ಗೂಂಡಾಗಳ ಮೇಲಿದ್ದ ಕೇಸುಗಳನ್ನು ವಿಚಾರಣೆಯಿಲ್ಲದೆ ಹಿಂಪಡೆದದ್ದಕ್ಕಾಗಿ ವಿಚಾರವಾದಿ ಸಿದ್ದರಾಮಯ್ಯಗೆ ಸಿದ್ರಾಮುಲ್ಲಾ ಖಾನ್‌ ಎಂಬ ಬಿರುದನ್ನು ನಾವಲ್ಲ, ಜನರೇ ನೀಡಿದ್ದಾರೆ’ ಎಂದು ಬಿಜೆಪಿ ಟೀಕಿಸಿದೆ.

‘ಟಿಪ್ಪು ಎಕ್ಸ್‌ಪ್ರೆಸ್‌ ಎಂಬ ಹೆಸರನ್ನು ಬದಲಾಯಿಸಿ ಜನ ಇಂದಿಗೂ ಸ್ಮರಿಸುವ-ಆರಾಧಿಸುವ ‘ಒಡೆಯರ್’‌ ಎಕ್ಸ್‌ಪ್ರೆಸ್‌ ಎಂದು ಕರೆದಾಗ ನಿಮಗೆ ಆದ ಅಸಹನೆಯನ್ನು ನಾಡಿನ ಜನ ಕಂಡಿದ್ದಾರೆ ಸಿದ್ದರಾಮಯ್ಯ. ಟಿಪ್ಪುವಿನ ಆಸ್ಥಾನ ವಿದೂಷಕರಂತಾಗಿರುವ ತಮ್ಮನ್ನು ಸಿದ್ರಾಮುಲ್ಲಾ ಖಾನ್‌ ಎನ್ನದೇ ಮೋಸ ಮಾಡುವ ಮೀರ್ ಸಾದಿಕ್ ಎನ್ನಬಹುದೆ? ನಳಂದಾ ವಿವಿಯನ್ನು ಸುಟ್ಟು ಸರ್ವನಾಶ ಮಾಡಿದ್ದು ಇಸ್ಲಾಮಿಕ್‌ ಭಯೋತ್ಪಾದನೆ ಎಂಬುದನ್ನು ಒಪ್ಪದ ಸಿದ್ದರಾಮಯ್ಯ, ಆ ಇತಿಹಾಸವನ್ನು ಮರೆಮಾಚಲು ಯತ್ನಿಸಿದರು. ಇಂದಿಗೂ ಇಸ್ಲಾಮಿಕ್‌ ಭಯೋತ್ಪಾದನೆಯ ಕ್ರೌರ್ಯವನ್ನು ಒಪ್ಪದೇ ಮೊಘಲ್ ಆಕ್ರಮಣಕಾರರ ಮಾನಸಿಕತೆಯಲ್ಲಿರುವ ಕಾರಣಕ್ಕೆ ಜನರೇ ಸಿದ್ರಾಮುಲ್ಲಾ ಖಾನ್‌ ಬ್ರಾಂಡ್ ಮಾಡಿರುವುದು’ ಅಂತಾ ಬಿಜೆಪಿ ಕುಟುಕಿದೆ.

ಇದನ್ನೂ ಓದಿ: ಶೀಘ್ರದಲ್ಲೇ ಶಿಗ್ಗಾಂವ್ ವಾಣಿಜ್ಯ ಕೇಂದ್ರವಾಗಲಿದೆ- ಸಿಎಂ ಬೊಮ್ಮಾಯಿ

‘26/11 ಮುಂಬೈ ದಾಳಿಯಲ್ಲಿ ಸಾರ್ವಜನಿಕರ ಪ್ರಾಣ ಉಳಿಸಲು ಪ್ರಾಣಾರ್ಪಣೆ ಮಾಡಿದ ಮೇಜರ್ ಸಂದೀಪ್‌ ಉನ್ನಿಕೃಷ್ಣನ್‌‌ರವರ ವೀರಗಾಥೆಯುಳ್ಳ "ಕರಾಳ ರಾತ್ರಿ" ಪಾಠವನ್ನು ಕೈಬಿಟ್ಟವರು ತಾವು. ರಾಷ್ಟ್ರೀಯತೆಯ ಪರಮ ವಿರೋಧಿ ಸಿದ್ದರಾಮಯ್ಯ, ಹೀಗಿರುವಾಗ ತಮ್ಮನ್ನು ಸಿದ್ರಾಮುಲ್ಲಾ ಖಾನ್‌ ಎಂದು ಕರೆಯದೆ ಬೇರೆ ಬಿರುದು ಕೊಟ್ಟಾರೆಯೇ? ಹಿಜಾಬ್‌‌ ಸಮರ್ಥನೆಗೆ ಸ್ವಾಮೀಜಿಗಳು ಹಿಜಾಬ್ ಹಾಕಲ್ವಾ, ಹಿಂದೂ ಮಹಿಳೆಯರು ದುಪಟ್ಟಾ ಹಾಕಲ್ವಾ ಎಂದು ಎಲ್ಲದರಲ್ಲೂ ಹಿಜಾಬನ್ನೇ ಕಂಡ ಮೌಲ್ವಿ ನಮ್ಮ ಸಿದ್ರಾಮುಲ್ಲಾ ಖಾನ್. ಗೋ ಹತ್ಯೆಯಾದರೂ ಬೀಫ್ ಮಾರ್ಕೆಟ್ ನಿಲ್ಲಬಾರದೆಂದ ಹರಿಕಾರ‌ ಸಿದ್ದರಾಮಯ್ಯ. ಇಂಥವರು ಖಾನ್ ಆಗದೇ ಕೇಶವ ಆಗಲು ಸಾಧ್ಯವೇ?’ ಎಂದು ಬಿಜೆಪಿ ಪ್ರಶ್ನಿಸಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News