Sexual harassment: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಬಿಟಿಎಂ ಲೇಔಟ್‌ನಲ್ಲಿ ಲೈಂಗಿಕ ಕಿರುಕುಳದ ಪ್ರಕರಣ ಬೆಳಕಿಗೆ ಬಂದಿದೆ. ಏಪ್ರಿಲ್ 3ರಂದು ಬೆಳಗಿನ ಜಾವ ಸುಮಾರು 1.55ಕ್ಕೆ ಯುವತಿಯರ ಮೇಲೆ ಯುವಕನೊಬ್ಬ ಲೈಂಗಿಕ ದೌರ್ಜನ್ಯ ನಡೆಸಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಕಾಮುಕ ಯುವಕ ಹಿಂದಿನಿಂದ ಇಬ್ಬರು ಯುವತಿಯರ ಬಳಿಗೆ ಬಂದ್ದಿದ್ದು, ನಂತರ ಒಬ್ಬ ಯುವತಿಯನ್ನು ತಬ್ಬಿ ಆಕೆಯ ಖಾಸಗಿ ಅಂಗಗಳನ್ನು ಮುಟ್ಟಿ ಅನುಚಿತವಾಗಿ ವರ್ತಿಸಿ ಎಸ್ಕೇಪ್ ಆಗುತ್ತಿರುವುದನ್ನು ಕಾಣಬಹುದು.
ಇದನ್ನೂ ಓದಿ: ಟ್ರಂಪ್ ಸುಂಕದಿಂದ ಅಮೆರಿಕ ಮಾರುಕಟ್ಟೆ ಕುಸಿತ!! ಸೋಮವಾರ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಏನಾಗಲಿದೆ?
Law and order in Bengaluru appears to be deteriorating rapidly, with a disturbing rise in criminal activities, especially those targeting women. The city, once known for its progressive culture and relative safety, is now witnessing a breakdown in public safety, where miscreants… pic.twitter.com/5gM8K1u0nW
— Karnataka Portfolio (@karnatakaportf) April 6, 2025
ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಸೆಕ್ಷನ್ 354B ಅಡಿ ಎಫ್‌ಐಆರ್ ದಾಖಲಿಸಲಾಗಿದೆ. ಈ ಬಗ್ಗೆ ಸ್ಥಳೀಯ ನಿವಾಸಿಯೊಬ್ಬರು ದೂರು ದಾಖಲಿಸಿದ್ದಾರೆ. ಸದ್ಯ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಇಬ್ಬರು ಯುವತಿಯರನ್ನು ಸ್ವಲ್ಪ ದೂರದವರೆಗೆ ಹಿಂಬಾಲಿಸುತ್ತಿರುವುದನ್ನು ಕಾಣಬಹುದು. ನಂತರ ಆತ ಇದ್ದಕ್ಕಿದ್ದಂತೆಯೇ ಮುಂದಕ್ಕೆ ಧಾವಿಸಿ, ಒಬ್ಬಳನ್ನ ಬಿಗಿಯಾಗಿ ತಬ್ಬಿ ಓಡಿಹೋಗುತ್ತಾನೆ. ಘಟನೆ ಬಳಿಕ ಗಾಬರಿಗೊಂಡ ಇಬ್ಬರು ಯುವತಿಯರು ಆ ಪ್ರದೇಶದಿಂದ ದೂರ ಹೋಗಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, ಸಂತ್ರಸ್ತೆ ಇನ್ನೂ ದೂರು ದಾಖಲಿಸಿಲ್ಲವಾದರೂ, ತನಿಖೆ ನಡೆಯುತ್ತಿದೆ. ಆರೋಪಿಗಳನ್ನ ಗುರುತಿಸಲು ಪೊಲೀಸರು ಘಟನಾ ಸ್ಥಳದ ಸುತ್ತಮುತ್ತಲ ಪ್ರದೇಶದ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಯಾವುದೇ ದೂರು ಬರದಿದ್ದರೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ: Watch:ಕಾಲೇಜಿನಲ್ಲಿ ಭಾಷಣ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ 20 ವರ್ಷದ ಯುವತಿ ಸಾವು!ವಿಡಿಯೋ ವೈರಲ್
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









