Viral Video: ಜೋರು ಮಳೆಯಲ್ಲಿಯೇ ರಸ್ತೆ ಕಾಮಗಾರಿ, ನಾಲ್ವರಿಗೆ ಅಮಾನತು ಶಿಕ್ಷೆ..!

ಪಂಜಾಬ್ ನ ಹೋಶಿಯಾರ್‌ಪುರ ಜಿಲ್ಲೆಯಲ್ಲಿ ಭಾರೀ ಮಳೆಯ ನಡುವೆಯೇ ಲೋಕೋಪಯೋಗಿ ಇಲಾಖೆಯ ನಾಲ್ವರು ಅಧಿಕಾರಿಗಳು ರಸ್ತೆ ಕಾಮಗಾರಿ ನಡೆಸುತ್ತಿದ್ದರು.

Written by - Puttaraj K Alur | Last Updated : Jul 10, 2022, 07:48 PM IST
  • ನಿರಂತರ ಸುರಿಯುತ್ತಿರುವ ಮಳೆಯಲ್ಲಿಯೇ ರಸ್ತೆ ನಿರ್ಮಾಣ ಕಾಮಗಾರಿ
  • ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಿದ ಪಂಜಾಬ್ ಸರ್ಕಾರ
  • ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದ ರಸ್ತೆ ಕಾಮಗಾರಿ ವಿಡಿಯೋ
Viral Video: ಜೋರು ಮಳೆಯಲ್ಲಿಯೇ ರಸ್ತೆ ಕಾಮಗಾರಿ, ನಾಲ್ವರಿಗೆ ಅಮಾನತು ಶಿಕ್ಷೆ..! title=
ಜೋರು ಮಳೆಯಲ್ಲಿಯೇ ರಸ್ತೆ ನಿರ್ಮಾಣ

ನವದೆಹಲಿ: ನಿರಂತರವಾಗಿ ಸುರಿಯುತ್ತಿದ್ದ ಮಳೆಯಲ್ಲಿಯೇ ರಸ್ತೆ ನಿರ್ಮಾಣ ಮಾಡುತ್ತಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಈ ವಿಡಿಯೋ ವೈರಲ್ ಆದ ಬಳಿಕ ಪಂಜಾಬ್ ಸರ್ಕಾರ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.

ಪಂಜಾಬ್ ನ ಹೋಶಿಯಾರ್‌ಪುರ ಜಿಲ್ಲೆಯಲ್ಲಿ ಭಾರೀ ಮಳೆಯ ನಡುವೆಯೇ ಲೋಕೋಪಯೋಗಿ ಇಲಾಖೆಯ ನಾಲ್ವರು ಅಧಿಕಾರಿಗಳು ರಸ್ತೆ ಕಾಮಗಾರಿ ನಡೆಸುತ್ತಿದ್ದರು. ಜೋರು ಮಳೆ ನಡುವೆ ಕಾರ್ಮಿಕರು ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿರುವ ವಿಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆ ತಕ್ಷಣದಿಂದ ಜಾರಿಗೆ ಬರುವಂತೆ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಇದನ್ನೂ ಓದಿ: ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ ಅಪ್ಪಿ‌ ತಪ್ಪಿಯೂ ಈ ಕೆಲಸ ಮಾಡಬೇಡಿ, ಜೈಲು ಸೇರಬೇಕಾದೀತು!

ನಿರಂತರವಾಗಿ ಸುರಿಯುತ್ತಿರುವ ಮಳೆಯಲ್ಲಿಯೇ ಶೇರ್ಪುರ್ ಡಾಕೋ ಗ್ರಾಮದಲ್ಲಿ ಈ ರಸ್ತೆ ನಿರ್ಮಾಣ ಮಾಡಲಾಗುತ್ತಿತ್ತು. ಈ ನಿಟ್ಟಿನಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಈ ವಿಡಿಯೋವನ್ನು ಸ್ಥಳೀಯರು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹಂಚಿಕೊಂಡಿದ್ದರು. ಬಳಿಕ ಅದು ವೈರಲ್ ಆಗಿತ್ತು.

ಇಲಾಖೆಯಿಂದ ಕಠಿಣ ಕ್ರಮ

ಮಳೆಯಲ್ಲಿಯೇ ಕಾರ್ಮಿಕರು ರಸ್ತೆ ನಿರ್ಮಾಣ ಮಾಡುತ್ತಿರುವ ವಿಡಿಯೋ ವೈರಲ್ ಆದ ನಂತರ ಇಲಾಖೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ANI  ಸುದ್ದಿಸಂಸ್ಥೆ ಹಂಚಿಕೊಂಡಿರುವ ಈ ವಿಡಿಯೋದಲ್ಲಿ ಕೆಲವು ಕಾರ್ಮಿಕರು ರಸ್ತೆ ನಿರ್ಮಾಣ ಕಾರ್ಯ ಮಾಡುತ್ತಿರುವುದನ್ನು ನೀವು ಸಹ ಕಾಣಬಹುದು. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್ ಸಹ ಆಗಿದೆ.  

ಇದನ್ನೂ ಓದಿ: ಎಸ್ಎಸ್ಎಲ್ಸಿ ಮಾರ್ಕ್ಸ್ ಕಾರ್ಡ್ ಶೇರ್ ಮಾಡಿದ ಐಎಎಸ್ ಅಧಿಕಾರಿ..! ಟ್ವಿಟ್ಟರ್ ನಲ್ಲಿ ಏನಂದ್ರು ಗೊತ್ತಾ ಫಾಲೋವರ್ಸ್

ನಾಲ್ವರು ಅಧಿಕಾರಿಗಳು ಅಮಾನತು

ಮಳೆಯಲ್ಲಿಯೇ ಕಾರ್ಮಿಕರಿಂದ ರಸ್ತೆ ಕಾಮಗಾರಿ ಮಾಡಿಸಿ ಕರ್ತವ್ಯಲೋಪವೆಸಗಿದ ಅಧಿಕಾರಿಗಳಾದ ತಾರ್ಸೆಮ್ ಸಿಂಗ್, ವಿಪನ್ ಕುಮಾರ್, ಪರ್ವೀನ್ ಕುಮಾರ್ ಮತ್ತು ಜಸ್ಬೀರ್ ಸಿಂಗ್‍ರನ್ನು ಅಮಾನತುಗೊಳಿಸಲಾಗಿದೆ. ಮಳೆಯಿಂದಾಗಿ ಗ್ರಾಮಸ್ಥರು ಈ ರಸ್ತೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಇದಕ್ಕೆ ಕ್ಯಾರೆ ಎನ್ನದೆ ಕಳಪೆ ಕಾಮಗಾರಿ ನಡೆಸಲು ಅಧಿಕಾರಿಗಳು ಕಾರ್ಮಿಕರಿಗೆ ಸೂಚಿಸಿದ್ದರು ಎಂದು ತಿಳಿದುಬಂದಿದೆ.

ಈ ವಿಡಿಯೋವನ್ನು ಇದುವರೆಗೆ ಲಕ್ಷಾಂತರ ಜನರು ವೀಕ್ಷಿಸಿದ್ದಾರೆ. ಮಳೆಯಲ್ಲಿಯೂ ರಸ್ತೆ ಕಾಮಗಾರಿ ಮಾಡಿಸುವ ಅಧಿಕಾರಿಗಳು ತಮ್ಮ ಭ್ರಷ್ಟತೆಯ ಕರಾಳಮುಖವನ್ನು ತೋರಿಸಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನೆಟಿಜನ್‍ಗಳು ಆಗ್ರಹಿಸಿದ್ದಾರೆ.  

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News