CCTV Accident Viral Video: SUV ಕಾರು ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಬೈಕ್‌ನಲ್ಲಿದ್ದ ನಾಲ್ವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಗೋರಖ್‌ಪುರ-ವಾರಣಾಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸಂಭವಿಸಿದೆ. ಮೃತರನ್ನು ಸುನಿಲ್ ಕುಮಾರ್ (22), ಪ್ರದ್ಯುಮ್ನ ಕುಮಾರ್ (22), ಅರವಿಂದ್ ಕುಮಾರ್ (23) ಮತ್ತು ರಾಹುಲ್ ಕುಮಾರ್ (22) ಎಂದು ಗುರುತಿಸಲಾಗಿದೆ.
ಈ ಘಟನೆಯ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ನೋಡಲು ಭಯಾನಕವಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಲ್ವರು ಯುವಕರು ಒಂದೇ ಬೈಕ್‌ನಲ್ಲಿ ಬರುತ್ತಿದ್ದರು. ವೇಳೆ ಎದುರಿನಲ್ಲಿ ಹೋಗುತ್ತಿದ್ದ ಟ್ರಾಕ್ಟರ್ ಅನ್ನು ಹಿಂದಿಕ್ಕುವ ಭರದಲ್ಲಿ ವೇಗವಾಗಿ ಸಾಗಿದ್ದಾರೆ. ಈ ವೇಳೆ ಎದುರಿನಿಂದ ಬರುತ್ತಿದ್ದ ಕಾರು ಬೈಕ್‌ಗೆ ವೇಗವಾಗಿ ಢಿಕ್ಕಿ ಹೊಡೆದಿದೆ.
ಇದನ್ನೂ ಓದಿ: ಸರ್... ಯಾರಾದ್ರು ಇದೀರಾ.? ಪೊಲೀಸ್ ಠಾಣೆಗೆ ನುಗ್ಗಿದ ಚಿರತೆ..! ವಿಡಿಯೋ ವೈರಲ್
ಕಾರು ಡಿಕ್ಕಿಯಾದ ಪರಿಣಾಮ ಬೈಕ್‌ನಲ್ಲಿದ್ದ ಮೂವರು ಗಾಳಿಯಲ್ಲಿ ಹಾರಿ ರಸ್ತೆಗೆ ಬಿದ್ದರೆ, ಓರ್ವ ಡಿಕ್ಕಿ ರಭಸಕ್ಕೆ ಕಾರಿನ ಬಾನೆಟ್‌ನಲ್ಲಿ ಸಿಲುಕಿ ಸುಮಾರು ನೂರು ಮೀಟರ್ ದೂರ ಹೋಗಿದ್ದಾನೆ. ಘಟನೆ ನಡೆದ ಕೂಡಲೇ ಸ್ಥಳೀಯರು ನಾಲ್ವರನ್ನೂ ಸ್ಥಳೀಯ ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಿದ್ದಾರೆ. ಆದರೆ ಗಂಭೀರವಾಗಿ ಗಾಯಗೊಂಡಿದ್ದ ನಾಲ್ವರು ಯುವಕರೂ ಆಸ್ಪತ್ರೆಯ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ.
4 youths including three cousins riding on a bike died after hit by a Grand Vitara car on Gorakhpur Varanasi Highway in Barhalganj, Gorakhpur.
3 of them got thrown 20 feet up after the collision and fell down while 1got stuck on the bonnet of the car @Uppolice @myogiadityanath pic.twitter.com/sGCGZDlXuJ— Shreepad Gokhale (@SriVallabh5453) June 1, 2025
ಇನ್ನು ಅಪಘಾತ ಸಂಭವಿಸುತ್ತಿದ್ದಂತೆ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಚಾಲಕನ ಪತ್ತೆಗೆ ಬಲೆ ಬೀಸಿದ್ದಾರೆ. ಅಪಘಾತದಲ್ಲಿ ಸಾವನ್ನಪ್ಪಿದ ನಾಲ್ವರೂ ಸಹ ಸ್ನೇಹಿತರು ಎಂದು ತಿಳಿದುಬಂದಿದೆ. ಈ ಪೈಕಿ ರಾಹುಲ್ ಎಂಬಾತನಿಗೆ ನಿಶ್ಚಿತಾರ್ಥ ನಿಗದಿಯಾಗಿತ್ತು. ಆದರೆ ಅದಕ್ಕೂ ಮೊದಲೇ ಅಪಘಾತಗೊಂಡು ಇಹಲೋಕ ತ್ಯಜಿಸಿದ್ದಾನೆ. ಈ ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ದೆಹಲಿ ಬಳಿ ದೇಶದ ಅತಿದೊಡ್ಡ ಹಸಿರು ಹೈಡ್ರೋಜನ್ ಸ್ಥಾವರ ನಿರ್ಮಾಣ; ಪ್ರತಿವರ್ಷ 10 ಸಾವಿರ ಟನ್ ಹಸಿರು ಹೈಡ್ರೋಜನ್ ಉತ್ಪಾದನೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ









