Asia Cup 2023: ಕೊಲಂಬೊದ ಆರ್.ಪ್ರೇಮದಾಸ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಏಷ್ಯಾಕಪ್ ಟೂರ್ನಿಯ ಸೂಪರ್ 4ರ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಂ ಇಂಡಿಯಾ ಫೈನಲ್ ಪ್ರವೇಶಿಸಿದೆ. ಈ ಪಂದ್ಯದ ವೇಳೆ ಆಘಾತಕಾರಿ ಘಟನೆಯೊಂದು ನಡೆದಿದೆ.ಹೌದು, ಸೋಲಿನಿಂದ ಹತಾಶರಾದ ಶ್ರೀಲಂಕಾದ ಅಭಿಮಾನಿಗಳಿಂದ ಟೀಂ ಇಂಡಿಯಾ ಫ್ಯಾನ್ಸ್ ಮೇಲೆ ಹಲ್ಲೆ ನಡೆಸಿದ್ದಾರೆ. ಪಂದ್ಯ ಮುಗಿದ ಬಳಿಕ ಭಾರತ ಮತ್ತು ಶ್ರೀಲಂಕಾ ಅಭಿಮಾನಿಗಳ ನಡುವೆ ಮಾರಾಮಾರಿ ನಡೆದಿದೆ. ಈ ಹೊಡೆದಾಟದ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
ಇದನ್ನೂ ಓದಿ: ಭಾರತದ ಬ್ಯಾಟಿಂಗ್ ಕಮ್ರಾಂಕವನ್ನೇ ನಡುಗಿಸಿ 5 ವಿಕೆಟ್ ಕಬಳಿಸಿದ 20 ವರ್ಷದ ಸ್ಪಿನ್ನರ್ ದುನಿತ್ ವೆಲ್ಲಲಾಗೆ ಯಾರು ಗೊತ್ತಾ?
ವೈರಲ್ ಆಗಿರುವ ವಿಡಿಯೋದಲ್ಲಿ ಉಭಯ ತಂಡಗಳ ಅಭಿಮಾನಿಗಳು ಪರಸ್ಪರ ಹೊಡೆದಾಡಿಕೊಳ್ಳುತ್ತಿರುವುದನ್ನು ಕಾಣಬಹುದಾಗಿದೆ. ಪ್ರೇಮದಾಸ್ ಸ್ಟೇಡಿಯಂನ ಸ್ಟ್ಯಾಂಡ್‌ನಲ್ಲಿ ಉಭಯ ತಂಡಗಳ ಫ್ಯಾನ್ಸ್ ವಾರ್ ನಡೆದಿದೆ. ಓಡೋಡಿ ಬಂದ ಶ್ರೀಲಂಕಾದ ಅಭಿಮಾನಿಯೊಬ್ಬ ಹಲ್ಲೆ ನಡೆಸಿರುವ ದೃಶ್ಯ ಮೊಬೈಲ್‍ನಲ್ಲಿ ಸೆರೆಯಾಗಿದೆ.
Kalesh b/w Indian fans and Sri lanka fans during ind vs sri lanka match after sri lanka losss pic.twitter.com/5NgeMYxvRu
— Ghar Ke Kalesh (@gharkekalesh) September 13, 2023
Ghar Ke Kalesh ಟ್ವಿಟರ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಈ ಹೊಡೆದಾಟದ ವಿಡಿಯೋವನ್ನು ಲಕ್ಷಾಂತರ ಜನರು ವೀಕ್ಷಿಸಿದ್ದಾರೆ. ಅನೇಕರು ಶ್ರೀಲಂಕಾ ಅಭಿಮಾನಿಗಳ ಅತಿರೇಕದ ವರ್ತನೆಯನ್ನು ಖಂಡಿಸಿದ್ದಾರೆ.
ಇದನ್ನೂ ಓದಿ: Asia Cup 2023: ಶಾಹಿದ್ ಅಫ್ರಿದಿಯ ಶ್ರೇಷ್ಠ ದಾಖಲೆ ಮುರಿದು ನಂ.1 ಆದ ರೋಹಿತ್ ಶರ್ಮಾ..!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.